ETV Bharat / state

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ತುರಾಯಿ ನಿಷೇಧ: ಪುಷ್ಪ ಬೆಳೆಗಾರರಿಂದ ಪ್ರತಿಭಟನೆ - ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ. ಎಂ ಅರವಿಂದ್‌

ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ ಎಂದು ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್‌ ಬೊಲ್ಲಪಳ್ಳಿ ತಿಳಿಸಿದ್ದಾರೆ.

flower-growers-protest-against-govt-in-bengalore
ಪುಷ್ಪ ಬೆಳೆಗಾರರಿಂದ ಪ್ರತಿಭಟನೆ
author img

By

Published : Aug 12, 2021, 3:49 PM IST

Updated : Aug 13, 2021, 12:40 PM IST

ಬೆಂಗಳೂರು: ಬೆಂಗಳೂರು: ಕೊರೊನಾ ಸಂಕಷ್ಟದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ ಹೂವು ಬೆಳೆಗಾರರ ಮೇಲೆ ಗದಾಪ್ರಹಾರವನ್ನು ಮಾಡುವಂತಹ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಅವರ ಆದೇಶವನ್ನು ಈ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ನಗರದ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ ಹೆಬ್ಬಾಳದಲ್ಲಿ ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರು ಪ್ರತಿಭಟನೆ ಮಾಡಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ ಎಂ ಅರವಿಂದ್‌ ಮಾತನಾಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್‌ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದಂತೆ ಆದೇಶ ಹೊರಡಿಸಿದ್ದಾರೆ. ಇದು ರಾಜ್ಯದ 7500 ಹೆಕ್ಟೇರ್‌ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ರೈತ ಕುಟುಂಬಗಳ ಮೇಲಿನ ಗಧಾ ಪ್ರಹಾರವಾಗಿದೆ. ಈ ನಿರ್ಧಾರದ ಹಿಂದೆ ಯಾವುದೇ ವೈಜ್ಞಾನಿಕ ಅಥವಾ ಸಂಶೋಧನಾತ್ಮ ಅಂಶಗಳ ಕಂಡು ಬರುತ್ತಿಲ್ಲ. ಈ ನಿಷೇಧದಿಂದಾಗಿ ಕರೋನಾ ಸಂಕಷ್ಟದಿಂದ ತೊಂದರೆಗೀಡಾಗಿರುವ ಪುಷ್ಪ ಬೆಳೆಗಾರರ ಚೇತರಿಕೆ ಮತ್ತಷ್ಟು ನಿಧಾನವಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿ ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ ಎಂದು ಹೇಳಿದರು.

ಪುಷ್ಪ ಬೆಳೆಗಾರರಿಂದ ಪ್ರತಿಭಟನೆ

ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್‌ ಬೊಲ್ಲಪಳ್ಳಿ ಮಾತನಾಡಿ, ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7500 ಹೆಕ್ಟೇರ್‌ ನಷ್ಟು ಭೂಮಿಯಲ್ಲಿ ಗ್ರೀನ್‌ ಹೌಸ್‌ ಮೂಲಕ ಪುಷ್ಪ ಕೃಷಿ ನಡೆಸಲಾಗುತ್ತಿದೆ. ಅಲ್ಲದೆ, ಇದನ್ನು ಹೊರತುಪಡಿಸಿ ಲಕ್ಷಾಂತರ ಎಕರೆಗಳಲ್ಲಿ ಹೂವನ್ನು ಬೆಳೆಯಲಾಗುತ್ತಿದೆ. ಬೆಂಗಳೂರು ನಗರ ದೇಶದ ಪುಷ್ಪೋದ್ಯಮದ ಪ್ರಮುಖ ಹಬ್‌ ಆಗಿದ್ದು, ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ ಎಂದು ಹೇಳಿದರು.

ಹೂಗುಚ್ಛ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ನಡೆಸಿದ ಪ್ರತಿಭಟನೆಯಲ್ಲಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ಮಾರಾಟಗಾರರು ಪಾಲ್ಗೊಂಡಿದ್ದರು.

ಓದಿ: "ಸಾಕ್ಷಿ ನಾಶ ಪ್ರಕರಣದ ವಿಚಾರಣೆ ನಡೆಯಬೇಕಿದೆ"; ವಿನಯ್​ ಕುಲಕರ್ಣಿ ಪರ ವಕೀಲ

Last Updated : Aug 13, 2021, 12:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.