ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಕೇಂದ್ರದ ಮಾಜಿ ಸಚಿವ ಎಂ.ವಿ ರಾಜಶೇಖರನ್ ಅವರ ಅಂತ್ಯ ಸಂಸ್ಕಾರ ಮಾಡುವಂತೆ ರಾಜ್ಯಪಾಲ ವಜುಭಾಯ್ ವಾಲಾ ಅಧಿಸೂಚನೆ ಹೊರಡಿಸಿದ್ದಾರೆ.
ರಾಜಶೇಖರನ್ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಕೊವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಬೇಕು ಎಂದು ಆದೇಶಿಸಿದ್ದಾರೆ.
ರಾಜ್ಯಪಾಲರ ನಿರ್ದೇಶನದ ಮೇರೆಗೆ ರಾಜಭವನದ ಅಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.