ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದ ಲಕ್ಕಸಂದ್ರ ವಾರ್ಡ್ನಲ್ಲಿಂದು ಕೊರೊನಾ ಸಂತ್ರಸ್ತರಿಗೆ ಉಚಿತವಾಗಿ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪಾಲ್ಗೊಂಡಿದ್ದು, ಸಾವಿರಾರು ಜನರಿಗೆ ದಿನನಿತ್ಯದ ಅಗತ್ಯ ಆಹಾರ ಪದಾರ್ಥಗಳನ್ನು ವಿತರಣೆ ಮಾಡಿದರು.
ಈ ಸಂದರ್ಭ ಮಾತನಾಡಿದ ಈಶ್ವರ್ ಖಂಡ್ರೆ, ಕಳೆದ ವರ್ಷ ಐವತ್ತು ಸಾವಿರಕ್ಕೂ ಹೆಚ್ಚು ಜನರಿಗೆ ನಿತ್ಯ ಉಪಹಾರವನ್ನು ವಿತರಿಸುತ್ತಿದ್ದರು. 60,000 ಆಹಾರ ಪದಾರ್ಥಗಳ ಕಿಟ್ಗಳನ್ನು ವಿತರಿಸಿದ್ದಾರೆ. ಈ ಬಾರಿಯೂ ಈಗಾಗಲೇ 30 ಸಾವಿರಕ್ಕೂ ಅಧಿಕ ಕಿಟ್ಗಳನ್ನು ವಿತರಿಸಿದ್ದಾರೆ ರಾಮಲಿಂಗಾರೆಡ್ಡಿ ಕಾರ್ಯವನ್ನು ಶ್ಲಾಘಿಸಿದರು.
ಕೋವಿಡ್ ಕುರಿತು ಆರೋಗ್ಯ ತಜ್ಞರು ಮುನ್ಸೂಚನೆ ನೀಡಿದರೂ ಸಹ ರಾಜ್ಯ ಸರ್ಕಾರ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದಾಗಿ ಜನ ಹಾದಿಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಯಿತು ಎಂದು ಅವರು ಆರೋಪಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ 1,370 ಸೋಂಕಿತರು ಪತ್ತೆ: 20 ದಿನದಲ್ಲಿ 2 ಲಕ್ಷಕ್ಕೂ ಹೆಚ್ಚು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ