ETV Bharat / state

ಸಿಗಂದೂರು ದೇವಸ್ಥಾನದಿಂದ ಅರಣ್ಯ ಒತ್ತುವರಿ: ಸ್ವಯಂ ಪ್ರೇರಿತವಾಗಿ ಬಿಟ್ಟುಕೊಡುವ ಬಗ್ಗೆ ನಿಲುವು ಕೇಳಿದ ಹೈಕೋರ್ಟ್

ಸಿಗಂದೂರು ದೇವಸ್ಥಾನದಿಂದ 12.16 ಎಕರೆ ಭೂಮಿಯನ್ನು ಒತ್ತುವರಿ ಮಾಡಲಾಗಿದ್ದು, ಸರ್ಕಾರಕ್ಕೆ ಸ್ವಯಂ ಪ್ರೇರಿತವಾಗಿ ಹಿಂದಿರುಗಿಸುವ ಕುರಿತು ನಿಲುವು ಸ್ಪಷ್ಟಪಡಿಸುವಂತೆ ಹೈಕೋರ್ಟ್ ದೇವಸ್ಥಾನದ ಆಡಳಿತ ಮಂಡಳಿಗೆ ನಿರ್ದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Mar 17, 2021, 8:42 PM IST

ಬೆಂಗಳೂರು: ಸಿಂಗದೂರು ಚೌಡೇಶ್ವರಿ ದೇವಸ್ಥಾನ ಒತ್ತುವರಿ ಮಾಡಿರುವ ಅರಣ್ಯ ಭೂಮಿಯನ್ನು ಸರ್ಕಾರಕ್ಕೆ ಸ್ವಯಂ ಪ್ರೇರಿತವಾಗಿ ಹಿಂದಿರುಗಿಸುವ ಕುರಿತು ನಿಲುವು ಸ್ಪಷ್ಟಪಡಿಸುವಂತೆ ಹೈಕೋರ್ಟ್ ದೇವಸ್ಥಾನದ ಆಡಳಿತ ಮಂಡಳಿಗೆ ನಿರ್ದೇಶಿಸಿದೆ.

ಈ ಕುರಿತು ಸಾಗರ ತಾಲೂಕಿನ ಲಕ್ಷ್ಮೀನಾರಾಯಣ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ದೇವಸ್ಥಾನದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಶಿವಮೊಗ್ಗ ಜಿಲ್ಲಾಧಿಕಾರಿ ನೀಡಿರುವ ಮಾಹಿತಿಯಂತೆ ದೇವಸ್ಥಾನ 12.16 ಎಕರೆಯನ್ನು ಬಳಸಿಕೊಂಡಿಲ್ಲ. ದೇವಸ್ಥಾನ ಹಾಗೂ ಇತರೆ ಕಟ್ಟಡಗಳೆಲ್ಲವೂ ಸುಮಾರು 5 ಎಕರೆ ಜಾಗದಲ್ಲಿ ಇವೆ. ಇನ್ನು ಈ ಜಾಗವನ್ನು ದೇವಸ್ಥಾನಕ್ಕೆ ಮಂಜೂರು ಮಾಡಿಕೊಡಲು ಸರ್ಕಾರಕ್ಕೆ ಕೋರಲಾಗಿದ್ದು, ಪರಿಶೀಲನೆ ಹಂತದಲ್ಲಿದೆ ಎಂದರು.

ಇದಕ್ಕೆ ಅರ್ಜಿದಾರರ ಪರ ವಕೀಲ ಪಿ.ಪಿ.ಹೆಗ್ಡೆ ಆಕ್ಷೇಪಿಸಿ, ಜಿಲ್ಲಾಧಿಕಾರಿ ನೀಡಿರುವ ವರದಿಯಂತೆ ಇಡೀ ಜಾಗ ಶರಾವತಿ ವನ್ಯ ಜೀವಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರಿದ್ದು. ಈ ಭೂಮಿಯನ್ನು ಸರ್ಕಾರವೂ ಸಕ್ರಮಗೊಳಿಸಲು ಬಯಸುವುದಿಲ್ಲ. ಹೀಗಾಗಿ ಮನವಿ ಪುರಸ್ಕರಿಸಬಾರದು ಎಂದರು.

ಓದಿ:ಬೆಂಗಳೂರಲ್ಲಿ ಕಂಟ್ರೋಲ್​ಗೆ ಸಿಗದ ಕೊರೊನಾ: ಇಂದು 786 ಜನರಿಗೆ ತಗುಲಿದ ಸೋಂಕು

ವಾದ ಪ್ರತಿವಾದ ಆಲಿಸದ ಪೀಠ, ಸರ್ಕಾರಿ ಜಾಗವನ್ನು ಖಾಸಗಿಯವರು ಅತಿಕ್ರಮಿಸಿದ್ದರೂ ತೆರವು ಮಾಡದ ಸರ್ಕಾರ ಮತ್ತು ಜಿಲ್ಲಾಡಳಿತದ ನಡೆಗೆ ಬೇಸರ ವ್ಯಕ್ತಪಡಿಸಿತು. ಬಳಿಕ ದೇವಸ್ಥಾನವಿರುವ ಜಾಗವನ್ನು ಹೊರತುಪಡಿಸಿ ಇತರೆ 7 ಎಕರೆ ಪ್ರದೇಶವನ್ನು ತಕ್ಷಣವೇ ಸರ್ಕಾರದ ವಶಕ್ಕೆ ನೀಡುವ ಕುರಿತು ದೇವಾಲಯದ ನಿಲುವು ತಿಳಿಸುವಂತೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಶಿವಮೊಗ್ಗದ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಸರ್ವೇ ನಂಬರ್ 65ರಲ್ಲಿನ ಸರ್ಕಾರಿ ಅರಣ್ಯ ಭೂಮಿಯನ್ನು ದೇವಸ್ಥಾನದ ಹೆಸರಿನಲ್ಲಿ ಒತ್ತುವರಿ ಮಾಡಲಾಗಿದೆ. ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ದೇವಾಲಯದ ಹೆಸರಿನಲ್ಲಿ ಸಾರ್ವಜನಿಕರಿಂದ ಸಾವಿರಾರು ಕೋಟಿ ರೂ. ಹಣ ಸಂಗ್ರಹಿಸಿದ್ದು, ವಾರ್ಷಿಕ ಐದು ಕೋಟಿ ಮಾತ್ರ ಲೆಕ್ಕಪತ್ರದಲ್ಲಿ ತೋರಿಸಿದ್ದಾರೆ. ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ದೇವಸ್ಥಾನದ ಆಡಳಿತವನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳುವಂತೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಪೀಠ, ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ವರದಿ ನೀಡಲು ಜಿಲ್ಲಾಡಳಿತಕ್ಕೆ ನಿರ್ದೇಶಿಸಿತ್ತು. ಆದರಂತೆ ಕಳೆದ ಜನವರಿಯಲ್ಲಿ ಸರ್ವೆ ಮಾಡಿ ವರದಿ ಸಲ್ಲಿಸಿದ್ದ ಜಿಲ್ಲಾಡಳಿತ ಗ್ರಾಮದ ಸರ್ವೆ ನಂಂಬರ್ 65ರಲ್ಲಿ 12.16 ಎಕರೆ ಒತ್ತುವರಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.