ಆನೇಕಲ್: ನೆರಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ ಹೆಜ್ಜೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ.
ಚಿರತೆ ಹೆಜ್ಜೆ ಕಾಣಿಸಿಕೊಂಡ ಹಿನ್ನೆಲೆ, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು,ಅರಣ್ಯ ಇಲಾಖೆ ಸಿಬ್ಬಂದಿ ಬೋನಿನೊಳಗೆ ನಾಯಿ ಇಟ್ಟು ಚಿರತೆ ಸೆರೆಗೆ ಮುಂದಾಗಿದ್ದಾರೆ.
ಅಲ್ಲದೇ, ಗ್ರಾಮಸ್ಥರ ಮನವಿಗೆ ಸ್ಪಂದಿಸಿ, ಅಲ್ಲಲ್ಲಿ ಸಿಸಿ ಕ್ಯಾಮೆರಾಗಳನ್ನ ಅಳವಡಿಸಿದ್ದಾರೆ.