ETV Bharat / state

ನೂತನ ಶ್ರೀಗಂಧ ನೀತಿ ಜಾರಿಗೆ ಕರಡು ಸಿದ್ಧಪಡಿಸಲು ಅಧಿಕಾರಿಗಳಿಗೆ ಸಚಿವ ಕತ್ತಿ ಸೂಚನೆ - ಸಚಿವ ಉಮೇಶ್​ ಕತ್ತಿ

ವಿಧಾನಸೌಧದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಶ್ರೀಗಂಧದ ಉತ್ಪಾದನೆ ಕಡಿಮೆಯಾಗಿದ್ದು, ಇದೀಗ ರೈತರು ಮುಕ್ತವಾಗಿ ಶ್ರೀಗಂಧ ಬೆಳೆಯಲು ಅವಕಾಶ ನೀಡುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

minister umesh katti
minister umesh katti
author img

By

Published : Sep 3, 2021, 12:59 AM IST

ಬೆಂಗಳೂರು: ರಾಜ್ಯದಲ್ಲಿ ನೂತನ ಶ್ರೀಗಂಧದ ನೀತಿ ಜಾರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರಡು ಸಿದ್ಧಪಡಿಸಲು ಅರಣ್ಯ ಸಚಿವ ಉಮೇಶ್ ಕತ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಶ್ರೀಗಂಧದ ಉತ್ಪಾದನೆ ಕಡೆಮೆಯಾಗಿದ್ದು, ಅರಣ್ಯ ಪ್ರದೇಶದಲ್ಲಿಯೂ ಕಡಿಮೆಯಾಗುತ್ತಿದೆ. ಹೀಗಾಗಿ ರೈತರು ಶ್ರೀಗಂಧವನ್ನು ಮುಕ್ತವಾಗಿ ಬೆಳೆಯಲು ಅವಕಾಶ ದೊರೆಯುವಂತೆ ರೈತ ಸ್ನೇಹಿಯಾದ ಶ್ರೀಗಂಧ ನೀತಿ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಈಗಿರುವ ನಿಯಮಗಳ ಪ್ರಕಾರ, ರೈತರ ಹೊಲದಲ್ಲಿ ಶ್ರೀಗಂಧ ಬೆಳೆದರೂ, ಅನುಮತಿ ಪಡೆದು ಅದನ್ನು ಕಡಿಯಲು ಕನಿಷ್ಠ 45 ದಿನ ವ್ಯಯವಾಗುತ್ತಿದೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸ್ನೇಹಿಯಾಗಿ ಹೊಸ ಶ್ರೀಗಂಧ ನೀತಿ ಜಾರಿ ಮಾಡಲು ಅಗತ್ಯ ಕಾನೂನು ತಿದ್ದುಪಡಿಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವ ಉಮೇಶ್ ಕತ್ತಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿರಿ: ಪದಕ ಗೆದ್ದು ತಾಯ್ನಾಡಿಗೆ ಬಂದ ಸುಮಿತ್​, ದೇವೇಂದ್ರ, ಯೋಗೀಶ್​... ಅದ್ಧೂರಿ ಸ್ವಾಗತ

ಇದರ ಜೊತೆಗೆ ರಾಜ್ಯದಲ್ಲಿ ಬಿದಿರು ಬೆಳೆಯಲು ಅಗತ್ಯ ಖಾಲಿ ಇರುವ ಪ್ರದೇಶವನ್ನು ಗುರುತಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಬಾಂಬು ಮಿಷನ್ ಅಡಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಬಾಂಬು ಬೆಳೆಯಲು, ಬಾಗಲಕೋಟೆ ತೋಟಗಾರಿಕಾ ವಿವಿ ಹಾಗೂ ಅರಣ್ಯ ಕಾಲೇಜ್ ಜೊತೆ ಚರ್ಚಿಸಿ ಸೂಕ್ತ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.