ETV Bharat / state

ಚುನಾವಣೆಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್​​ನಿಂದ ಸಮಿತಿ ರಚನೆ - ಹಿರಿಯ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ತಂಡ ರಚನೆ

ರಾಜರಾಜೇಶ್ವರಿನಗರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಯಾವುದೇ ಸಂದರ್ಭದಲ್ಲಿ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೂಡ ಚುನಾವಣೆ ನಡೆಯಲಿದ್ದು, ಈ ಎಲ್ಲ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿ ಆಯ್ಕೆಗೆ ಹಿರಿಯ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.

formation-of-a-committee-by-congress-to-select-suitable-candidate-for-election
ಕೆಪಿಸಿಸಿ
author img

By

Published : Mar 21, 2020, 1:05 AM IST

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆಗೆ ನಡೆಯುವ ಉಪ ಚುನಾವಣೆ ಹಾಗೂ ವಿಧಾನ ಪರಿಷತ್​​ನ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪಕ್ಷ ಸಮಿತಿಯನ್ನು ರಚಿಸಿದೆ.

ನಗರದ ರಾಜರಾಜೇಶ್ವರಿನಗರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಯಾವುದೇ ಸಂದರ್ಭದಲ್ಲಿ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೂಡ ಚುನಾವಣೆ ನಡೆಯಲಿದ್ದು, ಈ ಎಲ್ಲ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿ ಆಯ್ಕೆಗೆ ಹಿರಿಯ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ತಮ್ಮ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ಆದೇಶ ಹೊರಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನಿರ್ದೇಶನ ನೀಡಿದ್ದಾರೆ.

formation-of-a-committee-by-congress-to-select-suitable-candidate-for-election
ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್​​ನಿಂದ ಸಮಿತಿ ರಚನೆ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡಲು ರಚಿಸಿರುವ ಸಮಿತಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿದ್ದಾರೆ. ಮಾಜಿ ಸಚಿವರಾದ ಎಂ ಕೃಷ್ಣಪ್ಪ, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಎಂಆರ್ ಸೀತಾರಾಮ್ ಹಾಗೂ ಎಚ್ ಸಿ ಬಾಲಕೃಷ್ಣ ಸದಸ್ಯರಾಗಿದ್ದಾರೆ.

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ರಚಿಸಿರುವ ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಧ್ಯಕ್ಷರಾಗಿದ್ದಾರೆ. ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಪ್ರಿಯಾಂಕ ಖರ್ಗೆ, ವಿಧಾನಪರಿಷತ್ ಸದಸ್ಯ ಎನ್. ಎಸ್. ಬೋಸರಾಜ್, ಮಾಜಿ ಸಂಸದ ವಿರುಪಾಕ್ಷಪ್ಪ, ಮಾಜಿ ಶಾಸಕ ಕೆ ಹಂಪನಗೌಡ ಬಾದರ್ಲಿ, ಶಾಸಕ ಶರಣಬಸಪ್ಪ ದರ್ಶನಾಪೂರ, ಅಮರೇಗೌಡ ಬಯ್ಯಾಪುರ, ಬಸವರಾಜ ಪಾಟೀಲ್ ಇಟಗಿ, ಡಿಸಿಸಿ ಮಾಜಿ ಅಧ್ಯಕ್ಷ ಎ. ವಸಂತಕುಮಾರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಮಿತಿಗೆ ಮಾಜಿ ಸಚಿವ ಟಿಬಿ ಜಯಚಂದ್ರ ಅಧ್ಯಕ್ಷರಾಗಿದ್ದಾರೆ. ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್, ಮಾಜಿ ಸಚಿವ ಎನ್. ಎಚ್. ಶಿವಶಂಕರ್ ರೆಡ್ಡಿ, ಮಾಜಿ ಸಂಸದ ಬಿ. ಎನ್. ಚಂದ್ರಪ್ಪ, ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಶಾಸಕಿ ರೂಪಕಲಾ ಶಶಿಧರ್ ಸಮಿತಿಯ ಸದಸ್ಯರಾಗಿದ್ದಾರೆ.

ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗ್ರತೆ ಕೈಗೊಂಡಿರುವ ಕಾಂಗ್ರೆಸ್ ಪಕ್ಷ ತಾನೆ ಕಳೆದುಕೊಂಡಿರುವ 2 ವಿಧಾನಸಭೆ ಕ್ಷೇತ್ರಗಳನ್ನು ಶತಾಯಗತಾಯ ಮರಳಿ ಪಡೆಯಲು ಮುಂದಾಗಿದೆ. ಯಾವುದೇ ಸಮಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಎದುರಿಸುತ್ತಿರುವ ಮೊದಲ ಚುನಾವಣೆ ಎನಿಸಿಕೊಳ್ಳಲಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.