ಬೆಂಗಳೂರು: 2023 ರಲ್ಲಿ ಕರ್ನಾಟಕದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಪ್ರಣಾಳಿಕ ಸಮಿತಿ ರಚನೆ ಮಾಡಲಾಗಿದ್ದು, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅಧ್ಯಕ್ಷರಾಗಿ ನಿಯೋಜಿತರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಇಂದು ಈ ಆದೇಶ ಹೊರಡಿಸಿದ್ದು, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ನೇತೃತ್ವದ ಸಮಿತಿ ರಚನೆಯಾಗಿದೆ. ಉಪಾಧ್ಯಕ್ಷರಾಗಿ ಮಧು ಬಂಗಾರಪ್ಪ ಮತ್ತು ಪ್ರೋ ಕೆ.ಇ. ರಾಧಾಕೃಷ್ಣ ಆಯ್ಕೆಯಾಗಿದ್ದಾರೆ.
ಈ ನಾಯಕರು ಮುಂಬರುವ ದಿನಗಳಲ್ಲಿ ರಾಜ್ಯದ ವಿವಿಧ ಹಂತದ ಕಾಂಗ್ರೆಸ್ ನಾಯಕರು, ಮುಖಂಡರು, ಮಾಜಿ ಸಚಿವರು ಮಾಜಿ ಶಾಸಕರು, ಶಾಸಕರು, ವಿವಿಧ ಹಂತದ ಮುಖಂಡರು ಹಾಗೂ ಕಾರ್ಯಕರ್ತರನ್ನು ಸಂಪರ್ಕಿಸಿ ಸಮಾಲೋಚಿಸಿ ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲಿದ್ದಾರೆ.
![2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ,ಪರಮೇಶ್ವರ್ ಅಧ್ಯಕ್ಷ](https://etvbharatimages.akamaized.net/etvbharat/prod-images/15984256_thdddin.jpg)
2023 ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿಯನ್ನು ಎಐಸಿಸಿ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರಿಗೆ ನೀಡಿದ್ದು, ಅತ್ಯಂತ ಪ್ರಭಾವಶಾಲಿ ಹಾಗೂ ಜನರನ್ನು ಸೆಳೆಯುವ ಪ್ರಣಾಳಿಕೆಯ ರಚನೆ ಇದೀಗ ಕಾಂಗ್ರೆಸ್ ನಾಯಕರ ಮುಂದೆ ಇದೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಅನುಭವದ ಆಧಾರದ ಮೇಲೆ ಪರಮೇಶ್ವರ ಪ್ರಣಾಳಿಕೆ ರಚನೆ ಮಾಡಲಿದ್ದಾರೆ. ಇವರಿಗೆ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಸಹಕಾರ ನೀಡುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಒಂದೆಡೆ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ.. ದಳಪತಿಗಳ ದುಃಖದ ಬಗ್ಗೆ ಬಿಜೆಪಿ ವ್ಯಂಗ್ಯ