ETV Bharat / state

ಸಿದ್ದರಾಮಯ್ಯ ಮನೆಗೆ ಬಂದು ಕಣ್ಣೀರು ಹಾಕಿದ್ರು, ವಕೀಲಿ ವೃತ್ತಿ ಮುಂದುವರೆಸೋದಾಗಿ ಹೇಳಿದ್ರು.. ಹೆಚ್‌ ಡಿ ಕುಮಾರಸ್ವಾಮಿ - ಬೆಂಗಳೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಆ ಪಕ್ಷ ಕಳೆದುಕೊಂಡಿದೆ. ಮುಂಬರುವ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಬಿಜೆಪಿಗೆ ಪ್ರಬಲ ಎದುರಾಳಿಗಳಾಗಲಿವೆ ಎಂದು ಭವಿಷ್ಯ ನುಡಿದರು.ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷ ಹೋಳಾಗಿದೆ. ಕರ್ನಾಟಕದಲ್ಲಿ ಒಂದಷ್ಟು ಶಕ್ತಿ ಇದೆ. ಆದರೆ, ವಿಧಾನಸಭಾ ಚುನಾವಣೆಗೆ ಇನ್ನೂ 18 ತಿಂಗಳಿದೆ. ರಾಜ್ಯ ಕಾಂಗ್ರೆಸ್‌ನಲ್ಲೂ ಆಂತರಿಕ ಸಂಘರ್ಷವಿದೆ. 18 ತಿಂಗಳಲ್ಲಿ ಇಲ್ಲಿಯೂ ಏನಾದರೂ ಆಗಬಹುದು..

ಕುಮಾರಸ್ವಾಮಿ
ಕುಮಾರಸ್ವಾಮಿ
author img

By

Published : Oct 2, 2021, 6:52 PM IST

ಬೆಂಗಳೂರು : ಯಾವತ್ತೂ ಜೆಡಿಎಸ್ ಶಾಕ್​​ಗೆ ಒಳಗಾಗಿಲ್ಲ. ಈಗ ಜೆಡಿಎಸ್ ಬಿಟ್ಟು ಹೋಗುತ್ತಿರುವವರು ಯಾರೂ ಸಹ ಪಕ್ಷದ ಬಲವರ್ಧನೆಗೆ ಶಕ್ತಿ ತುಂಬಿದವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಪಕ್ಷದ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮುಳಿಗೇ ಹೋಯಿತು. ಜೆಡಿಎಸ್ ನಾಯಕರನ್ನು ಕಳೆದುಕೊಳ್ಳುತ್ತಿದೆ, ಜೆಡಿಎಸ್‌ಗೆ ಶಾಕ್ ಎಂಬೆಲ್ಲಾ ವರದಿಗಳು ಬರುತ್ತಿವೆ. ಪಕ್ಷಕ್ಕೆ ಯಾವುದೇ ಶಾಕ್ ಆಗಿಲ್ಲ ಎಂದರು.

ಜನತಾ ಪರ್ವ ಪ್ರಾರಂಭಿಕವಾಗಿ ಸಂಘಟನೆಯ ಕಾರ್ಯಕ್ರಮ. 1.O ನಿಂದ 10.O ತನಕ ನಿರಂತರ ಪಕ್ಷ ಸಂಘಟನೆಗೆ ಚಾಲನೆ ಕೊಟ್ಟಿದ್ದೇವೆ. ಇದು ಜೆಡಿಎಸ್‌ನ ಆರಂಭಿಕ ಶೂರತ್ವ ಅಂತಾ ಭಾವನೆ ಇಟ್ಟುಕೊಂಡಿದ್ದಾರೆ ಹಲವರು. ಒಂದು ಕಡೆ ಸಂಘಟನೆ, ಇನ್ನೊಂದು ಕಡೆ ಜೆಡಿಎಸ್ ಮನೆ ಖಾಲಿ ಆಗುತ್ತಿದೆ ಎನ್ನುವ ದೊಡ್ಡ ಸುದ್ದಿ ಬರುತ್ತಿವೆ. ನಮಗೆ ಇದರಲ್ಲಿ ಯಾವುದೇ ಶಾಕ್ ಇಲ್ಲ ಎಂದರು.

ಪಕ್ಷ ಬಿಡುವವರೆಲ್ಲಾ ಪಕ್ಷಕ್ಕಾಗಿ ಕೆಲಸ ಮಾಡಿಲ್ಲ. ನಿನ್ನೆಯೂ ಒಬ್ಬರು (ಸಂದೇಶ್ ನಾಗರಾಜ್) ಬಿಜೆಪಿಗೆ ಅಪ್ಲಿಕೇಷನ್ ಹಾಕಿಕೊಂಡಿದ್ದಾರೆ. ಆ ವ್ಯಕ್ತಿ ಹಿಂದೆ ರಾಮಕೃಷ್ಣ ಹೆಗಡೆ ಕಾಲದಿಂದ ಹಲವು ಬಾರಿ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಅವರು ಎಂದೂ ಯಶಸ್ಸು ಕಂಡಿರಲಿಲ್ಲ. ಅವರಿಂದ ಪಕ್ಷ ಸಂಘಟನೆ ಆಗಿದೆಯಾ?. ಅವರು ಗೆದ್ದಿದ್ದು ನನ್ನ ಬಲದಿಂದ ಎಂದು ಸಂದೇಶ್ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದರು. ನಾಲ್ಕು ದಿನಗಳ ಕಾರ್ಯಾಗಾರವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದೇವೆ. ನಾಳೆ, ನಾಡಿದ್ದು ಅಲ್ಪಸಂಖ್ಯಾತರ, ಎಸ್ಸಿ,ಎಸ್ಟಿ, ಓಬಿಸಿ ಕಾರ್ಯಾಗಾರ ಏರ್ಪಡಿಸಿದ್ದೇವೆ ಎಂದರು.

ನನ್ನದೇ ಯೋಜನೆ : ಜೆಡಿಎಸ್‌ ಬಗ್ಗೆ ಪ್ರೀತಿ ಇರುವ ಯುವ ಮುಖಂಡರು ಮತ್ತು ಕೆಲವು ಸಾಫ್ಟ್‌ವೇರ್‌ ಎಂಜಿನಿಯರ್‌ಗಳು ನನ್ನ ಜತೆ ಇದ್ದಾರೆ. ಬಾಡಿಗೆಗೆ ಯಾವುದೇ ಏಜೆನ್ಸಿಯನ್ನು ಪಡೆದಿಲ್ಲ. ಪಕ್ಷದ ಕುರಿತು ಪ್ರೀತಿ ಇರುವವರ ನೆರವಿನಲ್ಲಿ ಯೋಜನೆ ರೂಪಿಸಿ, ಮುಂದಕ್ಕೆ ಸಾಗುತ್ತಿದ್ದೇನೆ. ದೆಹಲಿ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳ ಕುರಿತು ಅಧ್ಯಯನ ನಡೆಸಿದ್ದು, ನನ್ನದೇ ಒಂದು ಯೋಜನೆ ರೂಪಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

ಒಕ್ಕಲಿಗ ಶಾಸಕರು, ಮುಖಂಡರನ್ನು ಸೆಳೆದ ಮಾತ್ರಕ್ಕೆ ಜೆಡಿಎಸ್‌ ಪಕ್ಷವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ. ಈಗಲೂ ಜನರು ಹೆಚ್ ಡಿ ದೇವೇಗೌಡರ ಪರ ಇದ್ದಾರೆ. ನಾವು 123 ಸ್ಥಾನ ಪಡೆಯುವುದಾಗಿ ಹೇಳುತ್ತಿರುವುದು ಕನಸು ಕಾಣುತ್ತಿರುವುದಲ್ಲ. 30 ಸ್ಥಾನದಿಂದ 123ಕ್ಕೆ ಏರುವುದು ಕಷ್ಟವೇನೂ ಅಲ್ಲ ಎಂದು ಹೇಳಿದರು.

ಮುಸ್ಲಿಂ ಸಮುದಾಯದ ಮಹಿಳೆಯರಿಗೆ 20 ರಿಂದ 25 ಟಿಕೆಟ್‌ ನೀಡುತ್ತೇವೆ. ಸಿದ್ದರಾಮಯ್ಯ ಅವರನ್ನು ಕೇಳಿ ನಾನು ಅಭ್ಯರ್ಥಿ ನಿರ್ಧರಿಸಬೇಕಾ?, ನಮ್ಮ ಪಕ್ಷದ ವಿಚಾರದಲ್ಲಿ ಅವರಿಗೇನು ಅಧಿಕಾರವಿದೆ? ಕಾಂಗ್ರೆಸ್‌, ಬಿಜೆಪಿಯ ದೊಣ್ಣೆ ನಾಯಕರನ್ನು ಕೇಳಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆ? ಎಂದು ಹೆಚ್‌ಡಿಕೆ ಗರಂ ಆದರು.

ಕಾಂಗ್ರೆಸ್‌ಗೆ ಭವಿಷ್ಯವಿಲ್ಲ : ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಆ ಪಕ್ಷ ಕಳೆದುಕೊಂಡಿದೆ. ಮುಂಬರುವ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಬಿಜೆಪಿಗೆ ಪ್ರಬಲ ಎದುರಾಳಿಗಳಾಗಲಿವೆ ಎಂದು ಭವಿಷ್ಯ ನುಡಿದರು.

ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷ ಹೋಳಾಗಿದೆ. ಕರ್ನಾಟಕದಲ್ಲಿ ಒಂದಷ್ಟು ಶಕ್ತಿ ಇದೆ. ಆದರೆ, ವಿಧಾನಸಭಾ ಚುನಾವಣೆಗೆ ಇನ್ನೂ 18 ತಿಂಗಳಿದೆ. ರಾಜ್ಯ ಕಾಂಗ್ರೆಸ್‌ನಲ್ಲೂ ಆಂತರಿಕ ಸಂಘರ್ಷವಿದೆ. 18 ತಿಂಗಳಲ್ಲಿ ಇಲ್ಲಿಯೂ ಏನಾದರೂ ಆಗಬಹುದು ಎಂದರು.

ಜೆಡಿಎಸ್‌ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಸೇರಿದಂತೆ ಪಕ್ಷ ತೊರೆದಿರುವ ನಾಯಕರು ಇದ್ದಾಗಲೂ ಜೆಡಿಎಸ್‌ ಶಾಸಕರ ಸಂಖ್ಯೆ 50 ದಾಟಿರಲಿಲ್ಲ. ಸಿದ್ದರಾಮಯ್ಯ, ರಮೇಶ್‌ ಕುಮಾರ್‌, ಪಿಜಿಆರ್‌ ಸಿಂಧ್ಯ ಸೇರಿದಂತೆ ಹಲವರು ಪಕ್ಷ ಬಿಟ್ಟು ಹೋದರೂ ಯಾವ ಪರಿಣಾಮವೂ ಆಗಿಲ್ಲ ಎಂದರು.

1999ರ ಚುನಾವಣೆಯಲ್ಲಿ ಸೋತ ಸಿದ್ದರಾಮಯ್ಯ ನಮ್ಮ ಮನೆಗೆ ಬಂದು ಕಣ್ಣೀರು ಹಾಕಿದರು. ನಾನು ವಕೀಲಿ ವೃತ್ತಿ ಮುಂದುವರೆಸಿಕೊಂಡು ಹೋಗುತ್ತೇನೆ. ನನಗೆ ಭವಿಷ್ಯ ಇಲ್ಲ ಎಂದು ದೇವೇಗೌಡರ ಬಳಿ ಗೋಳಾಡಿದ್ದು ಯಾರು?. ಆಗ ಹೆಚ್.ಸಿ. ಮಹದೇವಪ್ಪ ಸಹ ಜೊತೆಯಲ್ಲಿದ್ದರು ಎಂದು ಹೇಳಿದರು.

ಹಿಂದೆ ನಮ್ಮ ಪಕ್ಷದ ಏಳು ಮಂದಿಯನ್ನು ಕರೆದೊಯ್ದ ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಯಿತು?. 78 ಸ್ಥಾನಕ್ಕೆ ಕುಸಿಯಿತು. ಈಗಲೂ ಅದೇ ಪ್ರಯತ್ನ ಮಾಡುತ್ತಿದ್ದಾರೆ. ಇದೇ ಪ್ರಯತ್ನ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ 38 ರಿಂದ 40 ಸ್ಥಾನಕ್ಕೆ ಕುಸಿಯಬಹುದು ಎಂದು ಟೀಕಿಸಿದರು.

ಮೀಸಲಾತಿ ವಿಷಯದಲ್ಲಿ ಕೆಲವರು ಕಗ್ಗಂಟು ಸೃಷ್ಟಿಸುತ್ತಿದ್ದಾರೆ. ಮೀಸಲಾತಿಗಿಂತಲೂ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ನೀಡುವುದು ಮುಖ್ಯ. ಮಾತೆತ್ತಿದರೆ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎನ್ನುತ್ತಾರೆ. ಸರ್ಕಾರದ ಹಣದಲ್ಲಿ ಎಷ್ಟು ದಿನ ಭಿಕ್ಷುಕರನ್ನು ಸೃಷ್ಟಿಸುತ್ತಲೇ ಇರುತ್ತೀರಿ? ಜನರಿಗೆ ಶಾಶ್ವತವಾದ ಬದುಕುವ ದಾರಿ ತೋರಿಸಬೇಕಲ್ಲವೆ ಎಂದು ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಬಿಜೆಪಿ ಸರ್ಕಾರಕ್ಕೆ ಮಾನವೀಯತೆ ಇದೆಯಾ? : ನೆಲಮಂಗಲದಲ್ಲಿ ತಾಯಿ, ಮಕ್ಕಳು ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಸರ್ಕಾರಕ್ಕೆ ಮಾನವೀಯತೆ ಇದೆಯಾ?. ಆ ವ್ಯಕ್ತಿ ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ವರ್ಷ ಕೊರೊನಾ ಸೋಂಕಿನಿಂದ ಮೃತಪಟ್ಟ. ‌ಆ ಕುಟುಂಬಗಳಿಗೆ ತಕ್ಷಣ ಪರಿಹಾರ ಕೊಡಿ ಅಂತಾ ಹೇಳಿದ್ದೆ. ಅನುಕಂಪದ ಆಧಾರದ ಮೇಲೆ ನೌಕರಿ ಕೂಡ ಕೊಟ್ಟಿಲ್ಲ. ಒಂದು ವರ್ಷದಿಂದ ಆ ಕುಟುಂಬ ಬಡತನದಲ್ಲಿತ್ತು. ಈ ಸರ್ಕಾರಕ್ಕೆ ಸ್ವಲ್ಪ ಏನಾದರೂ ಕರುಣೆ ಇದೆಯಾ?. ಕೋಟ್ಯಂತರ ರೂ. ಕೊಟ್ಟು ಜಾಹೀರಾತು ಹಾಕಿಸಿಕೊಳ್ಳುತ್ತಾರೆ. ಈ ಸರ್ಕಾರದ ಯೋಗ್ಯತೆಯೇ ಇಷ್ಟು ಎಂದು ಕಿಡಿಕಾರಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.