ETV Bharat / state

20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿದೆ ಕೇಂದ್ರ ಸರ್ಕಾರ: ಹೆಚ್​ಡಿಕೆ - ಹೆಚ್.ಡಿ.ಕುಮಾರಸ್ವಾಮಿ ಲೆಟೆಸ್ಟ್​ ನ್ಯೂಸ್​

ಲಾಕ್​​ಡೌನ್​ನಿಂದ ತತ್ತರಿಸಿರುವ ಜನರು, ರೈತರು, ಬಡವರನ್ನು ಪಕ್ಕಕ್ಕಿಟ್ಟು ಉದ್ಯಮಿಗಳು, ಉದ್ಯಮಗಳ ವ್ಯವಹಾರಕ್ಕೆ ಈ 20 ಲಕ್ಷ ಕೋಟಿ ರೂ. ಪ್ಯಾಕೇಜ್ ರೂಪಿಸಿ ಕೇವಲ ಘೋಷಣೆ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ ಕೇಂದ್ರ ಸರ್ಕಾರ ಅರಗಿನ ಅರಮನೆ ಕಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

H. D. Kumaraswamy
ಹೆಚ್.ಡಿ.ಕುಮಾರಸ್ವಾಮಿ
author img

By

Published : May 13, 2020, 10:05 PM IST

ಬೆಂಗಳೂರು: ಭಾರತ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದು ದೇಶ #AtmanirbharBharat ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆಯ ಭಾಷಣದಲ್ಲಿ ಹೇಳಿದ್ದರು. ಅದರಂತೆ ಬಿಕ್ಕಟ್ಟನ್ನು ಬಿಜೆಪಿ ರಾಜಕೀಯದ ಅವಕಾಶವಾಗಿಸಿಕೊಂಡಿದೆ. #AtmanirbharBharat ಎಂಬ ಆಕರ್ಷಕ ಪದಗುಚ್ಚದ ಮೂಲಕ ದೇಶದ ಜನ ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಅನಾಥರನ್ನಾಗಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

  • ಭಾರತ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದೂ, ದೇಶ #AtmanirbharBharat ಆಗಬೇಕು ಎಂದು ಮೋದಿ ನಿನ್ನೆಯ ಭಾಷಣದಲ್ಲಿ ಹೇಳಿದ್ದರು. ಅದರಂತೇ ಬಿಕ್ಕಟ್ಟನ್ನು ಬಿಜೆಪಿ ರಾಜಕೀಯದ ಅವಕಾಶವಾಗಿಸಿಕೊಂಡಿದೆ. #AtmanirbharBharat ಎಂಬ ಆಕರ್ಷಕ ಪದಗುಚ್ಛದ ಮೂಲಕ ದೇಶದ ಜನ ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಅನಾಥರನ್ನಾಗಿಸಲಾಗಿದೆ.
    1/5

    — H D Kumaraswamy (@hd_kumaraswamy) May 13, 2020 " class="align-text-top noRightClick twitterSection" data=" ">
  • Lockdownನಿಂದ ತತ್ತರಿಸಿರುವ ಜನರನ್ನು, ರೈತರನ್ನು, ಬಡವರನ್ನು ಪಕ್ಕಕ್ಕಿಟ್ಟು, ಉದ್ಯಮಿಗಳು, ಉದ್ಯಮಗಳ ವ್ಯವಹಾರಕ್ಕೆ ಈ ₹20 ಲಕ್ಷ ಕೋಟಿ ಪ್ಯಾಕೇಜ್ ರೂಪಿಸಿರುವುದು @nsitharaman ಅವರ ವಿವರಣೆಯಲ್ಲಿ ಸ್ಪಷ್ಟವಾಗಿದೆ. ಪ್ಯಾಕೇಜ್ನಲ್ಲಿ ತಮಗೂ ಒಂದಿಷ್ಟು ಸಿಗಬಹುದು ಎಂದು ನಿರೀಕ್ಷಿಸಿದ್ದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಲಾಗಿದೆ.
    2/5

ಈ ಕುರಿತು ಟ್ವೀಟ್ ಮಾಡಿರುವ ಅವರು, ಲಾಕ್​ಡೌನ್​​ನಿಂದ ತತ್ತರಿಸಿರುವ ಜನರು, ರೈತರು, ಬಡವರನ್ನು ಪಕ್ಕಕ್ಕಿಟ್ಟು ಉದ್ಯಮಿಗಳು, ಉದ್ಯಮಗಳ ವ್ಯವಹಾರಕ್ಕೆ ಈ 20 ಲಕ್ಷ ಕೋಟಿ ಪ್ಯಾಕೇಜ್ ರೂಪಿಸಿರುವುದು @nsitharaman ಅವರ ವಿವರಣೆಯಲ್ಲಿ ಸ್ಪಷ್ಟವಾಗಿದೆ. ಆದರೆ ಪ್ಯಾಕೇರ್ಝರ್ನಲ್ಲಿ ತಮಗೂ ಒಂದಿಷ್ಟು ಸಿಗಬಹುದು ಎಂದು ನಿರೀಕ್ಷಿಸಿದ್ದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಲಾಗಿದೆ ಎಂದು ಟೀಕಿಸಿದ್ದಾರೆ.

  • ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ಕೊಟ್ಟೆವೆಂದು ಕೇಂದ್ರ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ.
    4/5

ಕೇವಲ ಘೋಷಣೆ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ 20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ ಆ ಮೂಲಕ ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿರುವುದು ಸ್ಪಷ್ಟ ಎಂದು ಹೇಳಿದ್ದಾರೆ. ಕೊರೊನಾ ವೈರಸ್​​ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ಕೊಟ್ಟೆವೆಂದು ಕೇಂದ್ರ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

  • ₹20 ಲಕ್ಷ ಕೋಟಿ ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇದು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ.

    "#AtmanirbharBharat ಎಂಬುದು ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು," ಎಂದು ಜನರಿಗೆ ಕೇಂದ್ರ ನೀಡಿದ ಸ್ಪಷ್ಟನೆ.
    5/5

20 ಲಕ್ಷ ಕೋಟಿ ಪ್ಯಾಕೇಜ್ ಎಂಬುದು ಲಿಕ್ವಿಡಿಟಿ (ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ. "#AtmanirbharBharat ಎಂಬುದು ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು," ಎಂದು ಜನರಿಗೆ ಕೇಂದ್ರ ನೀಡಿದ ಸ್ಪಷ್ಟನೆ ಇದು ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.