ETV Bharat / state

ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‌ ನೈತಿಕತೆ ಎಲ್ಲಿತ್ತು: ಹೆಚ್​ಡಿಕೆ ಪ್ರಶ್ನೆ

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‌ ನೈತಿಕತೆ ಎಲ್ಲಿತ್ತು? ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Former chief minister HDK recommented Congress
ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‌ ನೈತಿಕತೆ ಎಲ್ಲಿತ್ತು?: ಕುಮಾರಸ್ವಾಮಿ ಪ್ರಶ್ನೆ
author img

By

Published : Jul 29, 2020, 5:59 PM IST

ಬೆಂಗಳೂರು: "ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?" ಎಂದು @INCKarnataka ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್‌ ಅತಿರಥ-ಮಹಾರಥರು ಪಕ್ಷದ ಟ್ವಿಟ್ಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ "ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Former chief minister HDK recommented Congress
ಕಾಂಗ್ರೆಸ್​- ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್​ ವಾರ್​

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‌ ನೈತಿಕತೆ ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ. ರೈತರ ಸಾಲಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು, ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ ಎಂದಿದ್ದಾರೆ ಹೆಚ್​ಡಿಕೆ.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್ ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ, ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್‌ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್‌ಗೆ ಸಲಹೆ ನೀಡಿ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು‌. ಆ ನಾಯಕರುಗಳು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್‌ ನಾಯಕರು ಪಕ್ಷದ ಟ್ವಿಟ್ಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರು ಯಾರಾದರೂ ಇದ್ದಾರೋ? ಇಲ್ಲ, ಕಾಂಗ್ರೆಸ್‌ ಟ್ವಿಟ್ಟರ್ ಖಾತೆಗೆ ಸೀಮಿತವೋ? ಎಂದು ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ 'ಮಾರುವೇಶ' ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ. ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ ಎಂದು ಸಿದ್ದರಾಮಯ್ಯನವರಿಗೆ ಟ್ವೀಟ್ ನಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ ಅವರು, " ತನ್ನರಿದೆ ಅರಿವೆಂತುಂಟೊ?, ತನ್ನ ಮರೆದ ಮರೆಹೆಂತಂಟೊ?ಅರೆದು ಮರೆದವರು, ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ" ಎಂದು ವಚನದ ಮೂಲಕ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.