ETV Bharat / state

ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸುವುದೇ ಕೇಂದ್ರ ಬಿಜೆಪಿಯ ಕುಟಿಲ ನೀತಿ : ಕುಮಾರಸ್ವಾಮಿ ಟೀಕೆ

author img

By

Published : Apr 10, 2023, 10:37 AM IST

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ರಾಜ್ಯ ಬಿಜೆಪಿ ಪಕ್ಷದ ಕಾರ್ಯಗಳ ವಿರುದ್ಧ ಟ್ವಿಟ್ಟರ್​ ಮೂಲಕ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

jds
ಹೆಚ್​ ಡಿ ಕುಮಾಸ್ವಾಮಿ

ಬೆಂಗಳೂರು : ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಕೇಂದ್ರ ಹಾಗೂ ರಾಜ್ಯ ಬಿಜೆಪಿ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು!! ಇದು ಬಿಜೆಪಿಯ (ಭರ)ವರಸೆ!! ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ 'ಬಿಜೆಪಿಯೇ ಭರವಸೆ', ಇದೇ ನೋಡಿ ಅದರ ಅಸಲಿ ವರಸೆ!! ಎಂದು ಕಿಡಿಕಾರಿದ್ದಾರೆ.

  • https://t.co/FlvrDHorzt

    ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ @BJP4India @BJP4Karnataka ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು!! ಇದು ಬಿಜೆಪಿಯ (ಭರ)ವರಸೆ!! 1/13#ಬಿಜೆಪಿಯ_ವರಸೆ

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023 " class="align-text-top noRightClick twitterSection" data=" ">

ಪ್ರಧಾನಿಗಳಾದ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ದಿರಿಸಿನ ಬಗ್ಗೆ ಗೊತ್ತೇ ಇಲ್ಲ ಎನ್ನುವುದು ಸಚಿವ ಅಶ್ವತ್ಥನಾರಾಯಣ್​ ಅವರ ಕುಹಕದ ಮಾತು. ಇನ್ನೊಬ್ಬರು; ಸಿ.ಟಿ ; ಈ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತ್ತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ. ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ.

ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ. ಅಸಲಿ ವಿಷಯ ಅದಲ್ಲ! ಈಗಲ್ಲ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು. ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರ್ಕಾರ.

  • ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!! 13/13#ಬಿಜೆಪಿಯ_ವರಸೆ

ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು!!. ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ ಹೆಚ್.ಡಿ. ರೇವಣ್ಣ ಅವರು, "ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ" ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು ಎಂದಿದ್ದಾರೆ ಕುಮಾರಸ್ವಾಮಿ.

ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯ ಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಸಿ.ಟಿ.ರವಿ, ಡಾ.ಸುಧಾಕರ್​, ಸಚಿವ ಅಶ್ವಥ್ ನಾರಾಯಣ್​ ಇತರರು ರಂಗದ ಮೇಲಿದ್ದಾರಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.

  • ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ 'ಬಿಜೆಪಿಯೇ ಭರವಸೆ', ಇದೇ ನೋಡಿ ಅದರ ಅಸಲಿ ವರಸೆ!! 2/13#ಬಿಜೆಪಿಯ_ವರಸೆ

ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ. ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ ಎನ್ ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ.. ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಕೇಂದ್ರ ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ ಎಂದಿದ್ದಾರೆ.

ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ ಕೇಂದ್ರ ಬಿಜೆಪಿ ಕುಟಿಲನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಕೇಂದ್ರ ಬಿಜೆಪಿ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜೊತೆ ಡಬಲ್ ಗೇಮ್ ಆಡುತ್ತಿದೆ. ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!! ಎಂದು ಕುಟುಕಿದ್ದಾರೆ.

ಇದನ್ನೂ ಓದಿ: 1985ರ ನಂತರ ಆಡಳಿತ ಪಕ್ಷಕ್ಕೆ ಸತತ ಎರಡನೇ ಬಾರಿ ದಕ್ಕದ ಕುರ್ಚಿ: ಹೊಸ ಇತಿಹಾಸ ಬರೆಯುತ್ತಾ ಬಿಜೆಪಿ ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.