ETV Bharat / state

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಸಾಧ್ಯ: ಯಡಿಯೂರಪ್ಪ - ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳನ್ನು ಗಮನಿಸಿದಾಗ ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಎಸ್​​ವೈ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Mar 10, 2022, 10:19 PM IST

ಬೆಂಗಳೂರು: ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಉತ್ತರಾಖಂಡದಲ್ಲಿ ಸರ್ಕಾರ ರಚನೆ ಮಾಡಲು ಎಂ.ಬಿ.ಪಾಟೀಲ್ ಹೋಗಿದ್ದು, ಅಂತಿಮವಾಗಿ ಬರಿಗೈಲಿ ವಾಪಸಾಗಬೇಕಾಗಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಹಗಲು ಕನಸು ಕಾಣುತ್ತಿದ್ದಾರೆ. ಅದು ಅಸಾಧ್ಯದ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದವರು ಈ ರಾಜ್ಯದಲ್ಲಿ ಹಲವು ಸಲ ಕೀಳುಮಟ್ಟದ ರಾಜಕೀಯ ಮಾಡಿದ್ದನ್ನು ಇಡೀ ಜನತೆ ಗಮನಿಸುತ್ತಲೇ ಬಂದಿದೆ. ಹಾಗಾಗಿ, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಯೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ಭರವಸೆ ನನಗಿದೆ.

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರದಲ್ಲಿದ್ದ 4 ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಂಡಿದೆ. ಚುನಾವಣೆ ನಡೆದ ರಾಜ್ಯಗಳ ಪೈಕಿ ಕಾಂಗ್ರೆಸ್ ಪಕ್ಷವು ಕೇವಲ ಪಂಜಾಬ್ ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿತ್ತು. ಈ ಚುನಾವಣೆಯಲ್ಲಿ ಈ ರಾಜ್ಯದಲ್ಲಿಯೂ ಸಹ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಚುನಾವಣಾ ಫಲಿತಾಂಶಗಳನ್ನು ಗಮನಿಸಿದಾಗ ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡ ರಾಜ್ಯಗಳ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಆ ರಾಜ್ಯಗಳ ಮತದಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಎಲ್ಲಾ ಮುಖಂಡರಿಗೆ, ಕಾರ್ಯಕರ್ತರಿಗೆ ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬಿಎಸ್​​ವೈ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.