ETV Bharat / state

ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ: ಬಸವರಾಜ ಬೊಮ್ಮಾಯಿ - etv bharat kannada

ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

Former CM Basavaraj Bommai talk against congress
ಬಸವರಾಜ ಬೊಮ್ಮಾಯಿ
author img

By ETV Bharat Karnataka Team

Published : Oct 14, 2023, 6:55 PM IST

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇಂದು ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಂದಾಗಿನಿಂದ ವರ್ಗಾವಣೆಯಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು. ಗ್ರಾಮದಿಂದ ಹಿಡಿದು ವಿಧಾನಸೌಧದವರೆಗೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು.

ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾದ ತಕ್ಷಣವೇ ಗುತ್ತಿಗೆದಾರನ ಸಂಬಂಧಿಕರ ಮನೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಇದೇ ಮೊದಲು. ಸರ್ಕಾರ 10% ಕಮಿಷನ್ ಪಡೆದಿರುವುದು ಸಾಬೀತಾಗಿದೆ. ಇನ್ನಷ್ಟು ಗುತ್ರಿಗೆದಾರರ ಮನೆ ಮೇಲೆ ದಾಳಿ ಮಾಡಿದರೆ ಇನ್ನಷ್ಟು ಕಮಿಷನ್ ಹಣ ಹೊರ ಬರಲಿದೆ ಎಂದರು.

ಗುತ್ತಿಗೆದಾರರ ಸಂಘದವರು ನಮ್ಮ ಮೇಲೆ ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿದ್ದರು. ಈಗ ಕಾಂಟ್ರಾಕ್ಟರ್ ಅಸೋಷಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಈ ಹಿಂದೆ ಇದೇ ವ್ಯಕ್ತಿ ಲಂಚ ಕೊಟ್ಟಿರುವ ಆರೋಪ ಬಂದಾಗ ಆತ ನಾನು ಕಾಂಟ್ರಾಕ್ಟ್ ಮಾಡಿಲ್ಲ ಎಂದು ಹೇಳಿಸಿದ್ದರು. ಕಾಂಟ್ರಾಕ್ಟರ್ ಮತ್ತು ಸರ್ಕಾರ ಒಂದಾಗಿ ರಾಜ್ಯ ಲೂಟಿ ಮಾಡಿದ್ದಾರೆ. ಅಕ್ರಮ ಹಣ ಸಂಗ್ರಹದ ಹಿನ್ನೆಲೆಯಲ್ಲಿ ಮನಿ ಲ್ಯಾಂಡರಿಂಗ್ ಆಕ್ಟ್​ನಲ್ಲಿ ಇಡಿ ತನಿಖೆ ಆಗಬೇಕು. ಭ್ರಷ್ಟಾಚಾರ ಕಾಯ್ದೆಯಡಿ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಇದು ಸಾರಾಯಿ ಗ್ಯಾರೆಂಟಿ ಸರ್ಕಾರ: ಬಸವರಾಜ ಬೊಮ್ಮಾಯಿ

ಕಮಿಷನ್ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾರಾದರೂ ನೋಡಿದ್ದೀರಾ? ಎಂದು ಕೇಳಿದ್ದಾರೆ‌. ನಮ್ಮ ಸರ್ಕಾರದ ವಿರುದ್ದ 40% ಆರೋಪ ಮಾಡಿದಾಗ ನೀವು ನೋಡಿದ್ದೀರಾ? ಈ ಪ್ರಕರಣದಲ್ಲಿ ಮುಖ್ಯಮಂತ್ರಿಯ ಯಾವುದೇ ಪಾತ್ರ ಇಲ್ಲದಿದ್ದರೆ, ನೀವೇ ನೇಮಿಸಿರುವ ನ್ಯಾ.ಮೂರ್ತಿ ಮಾಗಮೋಹನದಾಸ್ ಆಯೋಗಕ್ಕೆ ಈ ಪ್ರಕರಣ ನೀಡಬೇಕು. ಇಲ್ಲವೇ ಲೋಕಾಯುಕ್ತಕ್ಕೆ ನೀಡಬೇಕು. ಈ ಪ್ರಕರಣದ ಮೂಲ ಪತ್ತೆ ಆಗಬೇಕಾದರೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಐದು ರಾಜ್ಯದ ಚುನಾವಣೆಗೆ ಎಟಿಎಂ ತರಹ ಕೆಲಸ ಮಾಡುತ್ತಿರುವ ನೀವು ಭ್ರಷ್ಟಾಚಾರದ ವಿರುದ್ದ ಮಾತನಾಡುವ ನೈತಿಕತೆ ಇಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ಸಿಎಂ ಭೇಟಿ ಮಾಡಿದ್ದಾರೆ. ಸೆಲೆಕ್ಟಿವ್ ಆಗಿ ಪೇಮೆಂಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದೇ ಭ್ರಷ್ಟಾಚಾರದ ಪುರಾವೆಯಾಗಿದೆ. ಲಂಚ ಕೊಟ್ಟವರಿಗೆ ಬಿಲ್ ಬಿಡುಗಡೆ ಮಾಡುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಸರಿಪಡಿಸುವುದಾಗಿ ಹೇಳಿದ್ದಾರೆ. ಅಂದರೆ, ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು.

ಪ್ರೊ. ಭಗವಾನ್ ಒಕ್ಕಲಿಗ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಮುದಾಯದ ವಿರುದ್ದ ಮಾತನಾಡುವ ವ್ಯಕ್ತಿಗಳು ಹೀನ ಮನಸ್ಥಿತಿಯವರು. ಅವರು ತಮಗೆ ಬೇಕಾದವರನ್ನು ಹೊಗಳಿಕೊಳ್ಳಲಿ. ಆದರೆ, ಬುದ್ಧಿಜೀವಿಗಳು ಎಂದು ಬಿಂಬಿಸಿಕೊಂಡು ಒಂದು ಸಮುದಾಯದ ವಿರುದ್ದ ತುಚ್ಯವಾಗಿ ಮಾತನಾಡುವುದು ಸರಿಯಲ್ಲ. ಇಂತವರಿಗೆ ಸರ್ಕಾರ ಬೆಂಬಲ ಕೊಡುತ್ತಿರುವುದರಿಂದ ಅವರು ಈ ರೀತಿಯ ಮಾತುಗಳನ್ನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ: ರೈತರಿಗೆ 7 ಗಂಟೆ ವಿದ್ಯುತ್​ ಪೂರೈಸದಿದ್ದರೆ ಹೆಸ್ಕಾಂ ಕಚೇರಿಗಳಿಗೆ ಬೀಗ: ಸರ್ಕಾರಕ್ಕೆ ಬೊಮ್ಮಾಯಿ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.