ETV Bharat / state

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬೊಮ್ಮಾಯಿ; ಪ್ರತಿಪಕ್ಷ ನಾಯಕನ ಆಯ್ಕೆ, ರಾಜಕೀಯ ವಿದ್ಯಮಾನಗಳ ಚರ್ಚೆ - ಪಂಚ ಗ್ಯಾರಂಟಿ

ದೆಹಲಿಯಲ್ಲಿ ಇಂದು (ಮಂಗಳವಾರ) ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಸ್ಥಾನ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಮಾತುಕತೆ ನಡೆಸಿದರು.

Former CM Bommai met Amit Shah
ಅಮಿತ್ ಶಾ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ
author img

By

Published : Aug 8, 2023, 10:08 PM IST

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವೇಳೆ ಅಮಿತ್ ಶಾ, "ಆದಷ್ಟು ಬೇಗ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದು ಉತ್ತಮ ತಂಡವನ್ನು ಆಯ್ಕೆ ಮಾಡಲಾಗುವುದು" ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

5 ಗ್ಯಾರಂಟಿಗಳ ಮಾಹಿತಿ ಪಡೆದುಕೊಂಡ ಅಮಿತ್ ಶಾ: ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಬೊಮ್ಮಾಯಿ ಅವರು ಅಮಿತ್ ಶಾಗೆ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ, ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ ಬಗ್ಗೆ ಶಾ, ಬೊಮ್ಮಾಯಿ ಬಳಿ ಮಾಹಿತಿ ಕೇಳಿದ್ದಾರೆ. ಯಾವ ರೀತಿ ಪಂಚ ಗ್ಯಾರಂಟಿ ಅನುಷ್ಠಾನವಾಗಿದೆ‌, ಷರತ್ತುಗಳು, ಅನುದಾನ ಕೊರತೆ, ಗ್ಯಾರಂಟಿಗಳ ಬಗ್ಗೆ ಜನಾಭಿಪ್ರಾಯ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದರೊಂದಿಗೆ, ಎರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂದಿರುವ ಆರೋಪಗಳು, ವರ್ಗಾವಣೆ ದಂಧೆ, ಉಡುಪಿ ಪ್ರಕರಣ ಸಂಬಂಧ ಚರ್ಚಿಸಿದರು ಎಂದು ಹೇಳಲಾಗಿದೆ. ಕಾಂಗ್ರೆಸ್ ಸರ್ಕಾರ ವಿರುದ್ಧ ನಡೆಸಬೇಕಾದ ಹೋರಾಟ, ಲೋಕಸಭೆ ಚುನಾವಣೆ ವಿಚಾರವಾಗಿ ಸಮಾಲೋಚಿಸಿದ್ದಾರೆ ಎಂದು ಹೇಳಲಾಗಿದೆ.

ನಾಳೆ ಜೆ.ಪಿ.ನಡ್ಡಾ ಭೇಟಿ: ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಬೊಮ್ಮಾಯಿ ಭೇಟಿಯಾಗಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.