ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಹುರಿಯಾಳುಗಳನ್ನು ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸುತ್ತಿದ್ದು, ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.
ಇಂದು ಸಂಜೆಯೊಳಗೆ ಮೊದಲ ಹಂತದಲ್ಲಿ 170- 180 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ದೆಹಲಿಯಲ್ಲಿ ತಿಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಅವರು ಈ ಮಾಹಿತಿ ನೀಡಿದ್ದಾರೆ.
-
A list of candidates for 170-180 Karnataka Assembly seats will be released by today evening, says BJP leader and former CM BS Yediyurappa after his meeting with Union Home Minister Amit Shah in Delhi.
— ANI (@ANI) April 10, 2023 " class="align-text-top noRightClick twitterSection" data="
(file photos) pic.twitter.com/J1sn8Z9Nmp
">A list of candidates for 170-180 Karnataka Assembly seats will be released by today evening, says BJP leader and former CM BS Yediyurappa after his meeting with Union Home Minister Amit Shah in Delhi.
— ANI (@ANI) April 10, 2023
(file photos) pic.twitter.com/J1sn8Z9NmpA list of candidates for 170-180 Karnataka Assembly seats will be released by today evening, says BJP leader and former CM BS Yediyurappa after his meeting with Union Home Minister Amit Shah in Delhi.
— ANI (@ANI) April 10, 2023
(file photos) pic.twitter.com/J1sn8Z9Nmp
ಕೆಲ ದಿನಗಳಿಂದ ಸತತ ಸಭೆಗಳನ್ನು ನಡೆಸಿ ನಾಯಕರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣೆ ಮಾಡಲಾಗಿದೆ. ಈ ಮೂಲಕ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮೂರು ಹಂತದಲ್ಲಿ ಕೋರ್ ಕಮಿಟಿ ಸಭೆಗಳನ್ನು ನಡೆಸಿ ಪ್ರತಿ ಕ್ಷೇತ್ರಕ್ಕೆ ಮೂವರು ಅಭ್ಯರ್ಥಿಗಳನ್ನು ಸೂಚಿಸಿ ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡಲಾಗಿದೆ.
ಎರಡು ದಿನಗಳಿಂದ ಕೇಂದ್ರ ಸಂಸದೀಯ ಮಂಡಳಿಯ ಸಭೆ ನಡೆಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ವಿವಿಧ ಉನ್ನತ ನಾಯಕರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ನಡೆಸುತ್ತಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಇಂದು ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತಿದೆ.
ದಿಲ್ಲಿಯಲ್ಲಿ ರಾಜ್ಯ ನಾಯಕರು: ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧವಾಗಿ ರಾಜ್ಯ ಬಿಜೆಪಿ ನಾಯಕರು ಕಳೆದೆರಡು ದಿನಗಳಿಂದ ದಿಲ್ಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಚುನಾವಣಾ ಸಹ ಉಸ್ತುವಾರಿ ಮನ್ಸುಖ್ ಮಾಂಡವಿಯಾ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿ ಎಲ್ ಸಂತೋಷ್ ಅವರು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸುತ್ತಿದ್ದಾರೆ.
ಶಾ ನಿವಾಸದಲ್ಲಿ ಪಟ್ಟಿ ಅಂತಿಮ: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಸದೀಯ ಮಂಡಳಿ ಸಭೆ ನಡೆಸಲಾಗಿದ್ದು, ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗದ ಕಾರಣ ಇಂದು ಅಮಿತ್ ಶಾ ಅವರ ಮನೆಗೆ ಸಭೆಯನ್ನು ಶಿಫ್ಟ್ ಮಾಡಲಾಗಿದೆ. ನಾಯಕರು ಅಲ್ಲಿಯೇ ಸಭೆ ಸೇರಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆಯೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ ಸೋಮವಾರ ಇಲ್ಲವೇ ಮಂಗಳವಾರ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದರು. ಇದೇ ವೇಳೆ ತಾವು ಶಿಗ್ಗಾವಿಯಿಂದಲೇ ಸರ್ಧಿಸುವುದಾಗಿ ಸ್ಪಷ್ಟಪಡಿಸಿದ್ದರು. ಆದರೆ ಇಂದು ಪಟ್ಟಿ ಬಿಡುಗಡೆ ಬಗ್ಗೆ ಪ್ರತಿಕ್ರಿಯೆ ನೀಡದೇ ಸಿಎಂ ಅಮಿತ್ ಶಾ ನಿವಾಸದಲ್ಲಿ ನಡೆಯುತ್ತಿರುವ ಸಭೆಗೆ ತೆರಳಿದರು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯಿಸಿ ಸಂಜೆಯೊಳಗೆ 170-180 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾರೆ.
ಓದಿ: ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸುವುದೇ ಕೇಂದ್ರ ಬಿಜೆಪಿಯ ಕುಟಿಲ ನೀತಿ : ಕುಮಾರಸ್ವಾಮಿ ಟೀಕೆ