ETV Bharat / state

ಶಿವಮೊಗ್ಗ ಘಟನೆ ಮೂಲಕ ರಾಷ್ಟ್ರೀಯ ಪಕ್ಷಗಳು 'ಹಿಂಸಾ ರಾಜಕಾರಣ'ದ ಪೂರ್ಣ ಸಿನಿಮಾ ತೋರಿಸಲು ಹೊರಟಿವೆ: ಹೆಚ್​​​​ಡಿಕೆ ಕಿಡಿ

author img

By

Published : Feb 21, 2022, 3:03 PM IST

ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇಂತಹ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯ ಇಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ 'ಹಿಂಸಾ ರಾಜಕಾರಣ'ವನ್ನು ಮಾಡಲು ಎರಡೂ ಪಕ್ಷಗಳು ಹೊರಟಿವೆ ಎಂದು ದೂರಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ
ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಇಂಥ ಘಟನೆಗಳು ಪದೇ ಪದೆ ನಡೆಯುತ್ತಿವೆ. ಇಂತಹ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತಹುದ್ದೇ ಕೆಟ್ಟ, ಭಯಾನಕ ಘಟನೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

  • ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸರಕಾರಕ್ಕೆ ನನ್ನ ಒತ್ತಾಯ. 1/6

    — H D Kumaraswamy (@hd_kumaraswamy) February 21, 2022 " class="align-text-top noRightClick twitterSection" data=" ">

ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇಂತಹ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯ ಇಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ 'ಹಿಂಸಾ ರಾಜಕಾರಣ'ವನ್ನು ಮಾಡಲು ಎರಡೂ ಪಕ್ಷಗಳು ಹೊರಟಿವೆ ಎಂದು ದೂರಿದ್ದಾರೆ.

ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು, ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ. ಇದಕ್ಕೆ ಉತ್ತರ ಬೇಕಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಯುವಕನ ಕೊಲೆ: ಇಬ್ಬರ ಬಂಧನ.. ಮೃತದೇಹ ಮೆರವಣಿಗೆ ವೇಳೆ ಬೆಂಕಿ ಹಚ್ಚಿ, ಕಲ್ಲು ತೂರಾಟ

ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿವೆ. ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ 'ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ'ಕ್ಕೆ ಕ್ಷಮೆಯೇ ಇಲ್ಲ ಎಂದಿದ್ದಾರೆ.

ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು? ಎಂದು ಪ್ರಶ್ನಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.