ETV Bharat / state

ದೇಶದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ: ಹೆಚ್​ ಡಿ ದೇವೇಗೌಡ - ಈಟಿವಿ ಭಾರತ ಕನ್ನಡ ನ್ಯೂಸ್​​

ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾಗಲೂ ತಾವು ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ್ದಾರೆ. ಕುಮಾರಸ್ವಾಮಿ ಅವರು ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತಾರೆ. ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದೇ ತರುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡ ಹೇಳಿದ್ದಾರೆ.

former-cm-hd-devegowda-praises-kumarswamy
ದೇಶದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ : ಹೆಚ್ ಡಿಡಿ
author img

By

Published : Oct 30, 2022, 9:43 PM IST

ಬೆಂಗಳೂರು : ಇಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಹೆಚ್​ ಡಿ ಕುಮಾರಸ್ವಾಮಿ ಮಾತ್ರ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಮಾತು ಕೊಟ್ಟ ಹಾಗೆ ಎಲ್ಲ ಕೆಲಸಗಳನ್ನು ಮಾಡಿದರು. ಸಾಲಮನ್ನಾ ಮಾಡಿ ಮಾತು ಉಳಿಸಿಕೊಂಡರು. ಹೀಗಾಗಿ ನನ್ನ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಬೇಕಾದರೆ ಮತ್ತೊಮ್ಮೆ ಈ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಕೂಡ ಕೆಲಸ ಮಾಡುತ್ತೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಪಕ್ಷ ಗೆಲ್ಲಲು ಸಾಧ್ಯವಾದ ಎಲ್ಲ ಕೆಲಸವನ್ನು ಮಾಡುತ್ತೇನೆ. ಮುಖಂಡರು, ಕಾರ್ಯಕರ್ತರು ಎಲ್ಲರೂ ಶಿಸ್ತು, ಪ್ರಾಮಾಣಿಕತೆ, ಬದ್ಧತೆಯಿಂದ ಪಕ್ಷಕ್ಕೆ ದುಡಿಯಬೇಕು. ನಿಸ್ವಾರ್ಥವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕುಮಾರಸ್ವಾಮಿ ಅವರು ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತಾರೆ. ಅವರು ಕನಸು ಕಾಣುತ್ತಿರುವ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದೇ ತರುತ್ತಾರೆ. ಇಡೀ ರಾಜ್ಯದ ಅಭಿವೃದ್ಧಿಗೆ ಪಂಚರತ್ನ ಯೋಜನೆ ಪರಿಣಾಮಕಾರಿಯಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಸರ್ಕಾರ ಬರಬೇಕು. ಆ ಕ್ಷಣವನ್ನು ನಾನು ನೋಡಬೇಕು ಎಂದರು.

ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ದೊಡ್ಡ ಮಟ್ಟದಲ್ಲಿ ಪಕ್ಷದ ಕಚೇರಿಯಲ್ಲಿ ಸೇರಿರುವುದನ್ನು ನೋಡಿ ನನಗೆ ತುಂಬಾ ಸಂತೋಷ ಆಗಿದೆ. ಯಾವ ಯಾವ ಸಮುದಾಯಕ್ಕೆ ನಾನು ಮತ್ತು ಕುಮಾರಸ್ವಾಮಿ ಎಷ್ಟೆಲ್ಲಾ ಒಳ್ಳೆಯ ಕೆಲಸ ಮಾಡಿದೆವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೆಚ್​ ಡಿ ದೇವೇಗೌಡ ಮನವಿ ಮಾಡಿದರು.

ಇದನ್ನೂ ಓದಿ : ಈ ಸರ್ಕಾರ ಜೆಸಿಬಿ, ಹಿಟಾಚಿಯಲ್ಲಿ ಹಣ ಬಾಚುತ್ತಿದೆ: ಭ್ರಷ್ಟಾಚಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.