ETV Bharat / state

ಕೊರೊನಾ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ: ಸರ್ಕಾರಕ್ಕೆ ಹೆಚ್​​ಡಿಕೆ ಸಲಹೆ

ನೈಟ್ ಕರ್ಫ್ಯೂನಿಂದ ಸಮಸ್ಯೆ ಬಗೆಹರಿಯುತ್ತದೆ ಅಂತ ಹೇಳಲು ಸಾಧ್ಯವಿಲ್ಲ. ವೀಕೆಂಡ್ ಲಾಕ್ ಡೌನ್ ಕೂಡ ಎಷ್ಟು ಉಪಯೋಗ ಆಗುತ್ತಿದೆ ಎನ್ನುವುದನ್ನು ನೋಡಬೇಕು. ಜನ ಸಾಮಾನ್ಯರ ಜೀವನಕ್ಕೆ ತೊಂದರೆ ಆಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
author img

By

Published : Jan 18, 2022, 9:09 PM IST

ಬೆಂಗಳೂರು: ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಭಾರಿ ಪ್ರಮಾಣದಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 15-20 ದಿನಗಳ ಕಾಲ ಶಾಲಾ ಕಾಲೇಜುಗಳನ್ನು ಮುಚ್ಚಿದರೆ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಬಗ್ಗೆ ಸರ್ಕಾರದದಲ್ಲೇ ಗೊಂದಲ ಇದ್ದು, ಇದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದೂ ಅವರು ಆಡಳಿತ ಪಕ್ಷಕ್ಕೆ ಚಾಟಿ ಬೀಸಿದರು. ಶಾಲಾ ಕಾಲೇಜು, ವಸತಿ ನಿಲಯಗಳನ್ನು ಕೆಲ ಕಾಲ ಬಂದ್ ಮಾಡುವುದು ಒಳ್ಳೆಯದು. ಇಲ್ಲವಾದರೆ ಮಕ್ಕಳು, ವಿದ್ಯಾರ್ಥಿಗಳು ಸಮಸ್ಯೆಗೆ ತುತ್ತಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯಿಂದ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಹಾಗಿದ್ದರೂ ರಾಜ್ಯದಲ್ಲಿ ದಿನೇ ದಿನೆ ಕೋವಿಡ್ ಅನಾಹುತಗಳ ಗ್ರಾಫ್ ಏರುತ್ತಿದೆ. ಅದರ ಜತೆಗೆ ಈ ಕರ್ಫ್ಯೂ ಬಗ್ಗೆ ಬಿಜೆಪಿ ಮುಖಂಡರಲ್ಲೇ ಕೆಲವು ಗೊಂದಲಗಳಿವೆ. ಆಡಳಿತ ಪಕ್ಷದ ಕೆಲವು ಪ್ರಮುಖರು ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಅದರ ಪರ ಮಾತನಾಡುತ್ತಾರೆ. ಜನ ಯಾರ ಮಾತು ಕೇಳಬೇಕು? ವ್ಯಾಪಾರಿಗಳು, ಹೋಟೆಲ್ ವ್ಯಾಪಾರಿಗಳು, ಇನ್ನಿತರೆ ಸಂಘಟನೆಗಳು ಸಹ ಇದಕ್ಕೆ ವಿರೋಧ ಇದ್ದಾರೆ. ಆದರೂ ಬಿಜೆಪಿ ಮುಖಂಡರ ಗೊಂದಲಮಯ ಹೇಳಿಕೆಗಳು ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

ನೈಟ್ ಕರ್ಫ್ಯೂ ಜಾರಿ ಮಾಡಿದ್ದಾರೆ, ನಿಜ. ಆದರೆ ಕೆಲ ಕಡೆ ವಾಹನಗಳು, ಜನರು ಓಡಾಡುತ್ತಿದ್ದಾರೆ. ಇದು ಹೊಸ ಅಪಾಯಕ್ಕೆ ದಾರಿ ಆಗದಿರಲಿ. ನೈಟ್ ಕರ್ಫ್ಯೂನಿಂದ ಸಂಪೂರ್ಣವಾಗಿ ಕೋವಿಡ್ ಹತೋಟಿಗೆ ಬರುವುದು ಸಾಧ್ಯವೇ? ತಜ್ಞರು ಯಾವ ಅಧಾರದ ಮೇಲೆ ವರದಿ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ಅವರು ತಿಳಿಸಿದರು.

ನೈಟ್ ಕರ್ಫ್ಯೂನಿಂದ ಸಮಸ್ಯೆ ಬಗೆಹರಿಯುತ್ತದೆ ಅಂತ ಹೇಳಲು ಸಾಧ್ಯವಿಲ್ಲ. ವೀಕೆಂಡ್ ಲಾಕ್ ಡೌನ್ ಕೂಡ ಎಷ್ಟು ಉಪಯೋಗ ಆಗುತ್ತಿದೆ ಎನ್ನುವುದನ್ನು ನೋಡಬೇಕು. ಜನ ಸಾಮಾನ್ಯರ ಜೀವನಕ್ಕೆ ತೊಂದರೆ ಆಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ತೊಂದರೆ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಅವರ ಜೀವನ ನಿರ್ವಹಣೆಗೆ ಸಹಾಯ ಮಾಡಬೇಕು. ಹಿಂದೆ ನೀಡಿದ್ದಕ್ಕಿಂತ ಉತ್ತಮ ಪ್ಯಾಕೆಜ್ ನೀಡಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಿಸಿದರು.

ಮುಂದಿನ ಎರಡು ಮೂರು ತಿಂಗಳು ರಾಜ್ಯದ ಧಾರ್ಮಿಕ ಕ್ಷೇತ್ರಗಳಲ್ಲಿ ಜಾತ್ರಾ ಉತ್ಸವಗಳನ್ನೂ ಸರ್ಕಾರ ರದ್ದು ಮಾಡಿದೆ. ಮುಂದಿನ ಒಂದು ವರ್ಷದ ಹೊತ್ತಿಗೆ ಚುನಾವಣೆಗಳು ಆರಂಭ ಆಗುತ್ತವೆ. ರಾಜಕೀಯ ಸಭೆ ಸಮಾರಂಭಗಳು ನಡೆಯುತ್ತವೆ. ರಾಜಕಾರಣಿಗಳು ಸಭೆ ಸಮಾರಂಭ ಮಾಡಿದಾಗ ಜನ ನಮಗೆ ಒಂದು ನಿಯಮ, ನಿಮಗೊಂದು ನಿಯಮ ಏಕೆ ಎಂದು ಕೇಳಬಾರದು. ಅಂತ ಪರಿಸ್ಥಿತಿಯನ್ನು ನಾಯಕರು ತಂದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.

ಜನರು ಕೂಡ ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು. ಕೋವಿಡ್ ನಿಯಮಗಳನ್ನು ಪಾಲಿಸುತ್ತಾ ಬದುಕು ಕಟ್ಟಿಕೊಳ್ಳಬೇಕು ಎಂದ ಅವರು, ಈ ಸಲ ಎರಡನೇ ಅಲೆಯಲ್ಲಿ ಆದಂತಹ ದೊಡ್ಡ ಪ್ರಮಾಣದ ಅನಾಹುತಗಳು ಆಗಲಿಲ್ಲ. ಆ ರೀತಿ ಏನಾದರೂ ಆಗಿದ್ದಿದ್ದರೆ ಆಸ್ಪತ್ರೆಗಳಲ್ಲಿ ಜಾಗ ಸಿಗುತ್ತಿರಲಿಲ್ಲ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲವೆಂದು ಹೆಚ್​ಡಿಕೆ ಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಾದಯಾತ್ರೆಯನ್ನು ಕುಟುಕಿದ ಹೆಚ್​​ಡಿಕೆ: ಇದೇ ವೇಳೆ ಕಾಂಗ್ರೆಸ್ ಪಕ್ಷ ನಡೆಸಿದ ಮೇಕೆದಾಟು ಪಾದಯಾತ್ರೆಯನ್ನು ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, ಇತ್ತೀಚೆಗೆ ಪಾದಯಾತ್ರೆ ಹೆಸರಿನಲ್ಲಿ ಒಂದು ಜಾತ್ರೆ ನಡೆಯಿತು. ಅದಾದ ಬಳಿಕ ಎಲ್ಲರಿಗೂ ಅದೇ ರೂಢಿ ಆಯ್ತು. ಅವರು ಮಾತ್ರ ಮಾಡಬಹುದು, ನಮಗೆ ಯಾಕೆ ನಿರ್ಬಂಧ ಅಂತ ಜನಸಾಮಾನ್ಯರು ಮಾತಾಡುವಂತಾಯಿತು. ಈ ಮೂಲಕ ರಾಮನಗರ ಸೇರಿ ರಾಜ್ಯದ ಎಲ್ಲೆಡೆ ಸೋಂಕು ಹೆಚ್ಚಾಯಿತು ಆಯಿತು ಎಂದು ಟೀಕಿಸಿದರು.

ವ್ಯಾಕ್ಸಿನ್ ಪಡೆದವರಿಗೆ ಕೋವಿಡ್ ಬಂದರೂ ಬೇಗ ವಾಸಿ ಆಗುತ್ತಿದೆ. ಆದರೆ ಲಸಿಕೆ ಪಡೆಯದ ಮಕ್ಕಳ ಸ್ಥಿತಿ ಏನು? ಅದೃಷ್ಟಕ್ಕೆ ಜೀವಹಾನಿ ಆಗುತ್ತಿರುವ ಘಟನೆಗಳು ಕಡಿಮೆ ಇವೆ. ಇದು ಸಮಾಧಾನದ ಸಂಗತಿ ಎಂದು ಮಾಜಿ ಸಿಎಂ ಹೇಳಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.