ETV Bharat / state

'ಬಿಲ್ಡರ್​ಗಳಿಂದ ₹2,000 ಕೋಟಿ ರೂ. ಸುಲಿಗೆಗೆ ಟಾರ್ಗೆಟ್​': ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೆಚ್​ಡಿಕೆ ಗಂಭೀರ ಆರೋಪ

author img

By ETV Bharat Karnataka Team

Published : Sep 10, 2023, 8:09 PM IST

ನೈಸ್‌ ಭೂ ಕರ್ಮಕಾಂಡದಲ್ಲಿ ಈ ಸರ್ಕಾರದ ಪ್ರಭಾವಿ ಸಚಿವರೊಬ್ಬರು ನೇರವಾಗಿ ಶಾಮೀಲಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

former-cm-hd-kumaraswamy-allegations-on-congress-government
'ಬಿಲ್ಡರ್​ಗಳಿಂದ ₹2,000 ಕೋಟಿ ರೂ. ಸುಲಿಗೆಗೆ ಟಾರ್ಗೆಟ್​': ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೆಚ್​ಡಿಕೆ ಸ್ಫೋಟಕ ಆರೋಪ!

ಬೆಂಗಳೂರು: ಕಾಸಿಗಾಗಿ ಪೋಸ್ಟಿಂಗ್‌, ಗುತ್ತಿಗೆದಾರರಿಂದ ಹಣ ಸುಲಿಗೆ ಸೇರಿ ಕಾಂಗ್ರೆಸ್‌ ಸರ್ಕಾರದ ಮೇಲೆ ಹಲವಾರು ಗಂಭೀರ ಆರೋಪಗಳನ್ನು ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ರಿಯಲ್‌ ಎಸ್ಟೇಟ್‌ ಬಿಲ್ಡರ್​ಗಳಿಂದ ಈ ಸರ್ಕಾರದ ಪ್ರಭಾವಿಗಳು 2,000 ರೂಪಾಯಿ ಸುಲಿಗೆ ಮಾಡಲು ಹೊರಟಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

''ಬೆಂಗಳೂರಿನಲ್ಲಿ ದೊಡ್ಡ ಬಿಲ್ಡರ್​ಗಳ ಸಭೆ ಮಾಡಿರುವ ಪ್ರಭಾವಿಗಳು, ಲೋಕಸಭೆ ಚುನಾವಣೆಯ ನೆಪ ಇಟ್ಟುಕೊಂಡು ಬಿಲ್ಡರ್​ಗಳಿಂದ ಪ್ರತೀ ಚದರ್​ ಅಡಿಗೆ 100 ರೂಪಾಯಿ ಲೆಕ್ಕದಲ್ಲಿ ವಸೂಲಿಗೆ ಇಳಿದಿದ್ದಾರೆ. ಆ ಮೂಲಕ ಭರ್ತಿ 2,000 ಕೋಟಿ ರೂಪಾಯಿ ಸಂಗ್ರಹಕ್ಕೆ ಗುರಿ ಇಟ್ಟುಕೊಂಡಿದ್ದಾರೆ ಎಂದು ನೇರ ಆರೋಪ ಮಾಡಿದರು. ಹೆಸರಿಗೆ ʼಇಂಡಿಯಾʼ ಎಂದು ಕೂಟ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಯೇ ನಾಮಕರಣ ಮಾಡಿಕೊಂಡರು. ಈಗ ಅದೇ ʼಇಂಡಿಯಾʼ ಹೆಸರಿನಲ್ಲಿ ನಾಡಿನ ಸಂಪತ್ತು ಲೂಟಿ ಮಾಡಲು ಹೊರಟಿದ್ದಾರೆ. ಬಿಲ್ಡರ್​ಗಳ ಸಭೆ ನಡೆಸಿ ಇಷ್ಟಿಷ್ಟು ಕಪ್ಪ ಒಪ್ಪಿಸಲೇಬೇಕು ಎಂದು ಡಿಮಾಂಡ್‌ ಮಾಡಿದ್ದಾರೆ. ಅವರಿಗೆ ಜನರು ಪೆನ್ನು ಪೇಪರ್‌ ಕೊಟ್ಟಿದ್ದು ಈ ರೀತಿ ಸುಲಿಗೆ ಮಾಡಲಿಕ್ಕಾಗಿಯೇ'' ಎಂದು ಪ್ರಶ್ನಿಸಿದರು.

ನೈಸ್‌ ಅಕ್ರಮದಲ್ಲಿ 2-3 ಲಕ್ಷ ಕೋಟಿ ಮೌಲ್ಯದ ಭೂಮಿ ಗುಳುಂ: ಬೆಂಗಳೂರು-ಮೈಸೂರು ಮೂಲಭೂತ ಕಾರಿಡಾರ್‌ ಯೋಜನೆ (ನೈಸ್‌ ರಸ್ತೆ) ಬಹುಕೋಟಿ ರೂಪಾಯಿಗಳ ಅತಿದೊಡ್ಡ ಹಗರಣವಾಗಿದ್ದು, ಸುಮಾರು 2-3 ಲಕ್ಷ ಕೋಟಿ ರೂ. ಮೌಲ್ಯದ ಭೂಮಿಯನ್ನು ಪಟ್ಟಭದ್ರರು ನುಂಗಿದ್ದಾರೆ ಎಂದು ಹೆಚ್​ಡಿಕೆ ಆರೋಪಿಸಿದರು. ರೈತರಿಂದ ಕಸಿದುಕೊಂಡಿರುವ ಈ ಭೂಮಿಯನ್ನು ವಾಪಸ್‌ ಪಡೆದು ರೈತರಿಗೆ ಮರು ಹಸ್ತಾಂತರ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ನೈಸ್‌ ಭೂ ಕರ್ಮಕಾಂಡದಲ್ಲಿ ಈ ಸರ್ಕಾರದ ಪ್ರಭಾವಿ ಸಚಿವರೊಬ್ಬರು ನೇರವಾಗಿ ಶಾಮೀಲಾಗಿದ್ದಾರೆ. ಆ ಕಂಪನಿ ಜತೆ ಕೈಜೋಡಿಸಿ ಸಾವಿರಾರು ಕೋಟಿ ರೂ. ಬೆಲೆಯ ರೈತರ ಭೂಮಿಯನ್ನು ಲೂಟಿ ಮಾಡಿದ್ದಾರೆ ಎಂದು ಹೆಚ್​ಡಿಕೆ ಗಂಭೀರ ಆರೋಪ ಮಾಡಿದರು. ನನಗೂ ಒಮ್ಮೆ ಪೆನ್ನು ಪೇಪರ್‌ ಕೊಡಿ ಎಂದು ಚುನಾವಣೆಗೂ ಮುನ್ನ ಜನರಿಗೆ ದುಂಬಾಲು ಬಿದ್ದಿದ್ದರು. ಪೇಪರ್ ಸಿಕ್ಕಿದ ಮೇಲೆ ಜನರ ಸಂಪತ್ತನ್ನು ಎಗ್ಗಿಲ್ಲದೆ ಕೊಳ್ಳೆ ಹೊಡೆಯುತ್ತಿದ್ದಾರೆ. ಅವರೂ ನೈಸ್ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದರು.

14 ಸಾವಿರ ಎಕರೆ ಹೆಚ್ಚುವರಿ ಭೂಮಿ: ರೈತರಿಂದ ಈ ಯೋಜನೆಗೆ 14 ಸಾವಿರ ಎಕರೆ ಭೂಮಿಯನ್ನು ಹೆಚ್ಚುವರಿಯಾಗಿ ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಅದನ್ನು ಕೂಡಲೇ ವಾಪಸ್ ಪಡೆಯಬೇಕು. ಸಿದ್ದರಾಮಯ್ಯ ಅವರೇ ಎರಡನೇ ಬಾರಿಗೆ ಸಿಎಂ ಆಗಿದ್ದಾರೆ. ಪೂರ್ಣ ಬಹುಮತವೂ ಇದೆ. ರೈತರ ಬಗ್ಗೆ ಕಾಳಜಿ ಇದ್ದರೆ, ಅವರನ್ನು ಉಳಿಸಬೇಕಲ್ಲವೇ? ಹಾಗಿದ್ದರೆ ಕೂಡಲೇ ಕ್ರಮ ತೆಗೆದುಕೊಳ್ಳಿ. ದಮ್ಮು, ‌ತಾಕತ್ತಿನ ಬಗ್ಗೆ ಹೇಳುತ್ತೀರಲ್ಲ. ನಿಮಗೆ ದಮ್ಮು ತಾಕತ್ತು ಇದ್ದರೆ ರೈತರ ಜಮೀನು ವಾಪಸ್ ಪಡೆಯಿರಿ ಎಂದು ಹೆಚ್​ಡಿಕೆ ಸವಾಲು ಹಾಕಿದರು.

ಸಿಂಗಾಪುರಕ್ಕೆ ಬಂದಿದ್ದ ನೈಸ್‌ ಕುಳ: ನಾನೊಮ್ಮೆ ಮುಖ್ಯಮಂತ್ರಿ ಆಗಿದ್ದಾಗ ಸಿಂಗಾಪುರಕ್ಕೆ ಅಧಿಕೃತ ಪ್ರವಾಸಕ್ಕೆ ಹೋಗಿದ್ದೆ. ಅಲ್ಲಿಗೆ ಈ ನೈಸ್‌ ಕಂಪನಿಯವನು ವ್ಯವಹಾರ ಕುದುರಿಸಲು ಬಂದಿದ್ದರು. ವಿಧಾನಸೌಧದ ಮೂರನೇ ಮಹಡಿಗೆ ಬಾ ಎಂದು ಉಗಿದು ಕಳಿಸಿದ್ದೆ. ಅವತ್ತು ನಾನು ಆ ಪಾಪದ ಕೆಲಸಕ್ಕೆ ಕೈ ಜೋಡಿಸಲಿಲ್ಲ. ಅಂದು ಈ ಬಗ್ಗೆ ನಾನೇನು ಅಂದುಕೊಂಡಿದ್ದೆನೋ ಈಗ ಅದೇ ನಡೆಯುತ್ತಿದೆ. ಟಿ ಬಿ ಜಯಚಂದ್ರ ಅವರು ಕೊಟ್ಟಿರುವ ಸದನ ಸಮಿತಿ ವರದಿ ಇದೆ. ಆ ವರದಿಯಲ್ಲಿ ನೈಸ್‌ ಅಕ್ರಮದ ವಿರಾಟ್‌ ರೂಪವೇ ತೆರೆದುಕೊಂಡಿದೆ. ಆಗ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರೂ ಸದನ ಸಮಿತಿ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ನೈಸ್‌ ರಸ್ತೆ ಬೇಕೆಂದು ಬಯಸಿದ್ದು ದೇವೇಗೌಡರೇ. ಆ ಯೋಜನೆಯಲ್ಲಿ ರೈತರ ಭೂಮಿ ಹೊಡೆಯಲು ಹೊರಟಾಗ ಬೀದಿಗಿಳಿದು ಹೋರಾಟ ಮಾಡಿದ್ದು ಕೂಡ ದೇವೇಗೌಡರೇ. ಅವರು ರಸ್ತೆ ಆಗಲಿ ಎಂದು ಸಹಿ ಹಾಕಿದ್ದರು. ಆದರೆ, ಇಲ್ಲೊಬ್ಬರು ನನ್ನನ್ನು ಅಣ್ಣಾ ಅಂತ ಕರೆಯುವ ವ್ಯಕ್ತಿ ರೈತರ ಭೂಮಿ ಲಪಟಾಯಿಸಲು ಜನರಿಂದ ಪೆನ್ನು, ಪೇಪರ್‌ ಪಡೆದುಕೊಂಡಿದ್ದಾರೆ. ನಾನು ಪ್ರಾಣ ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಅಂಥವರಿಗೆ ಎರಡು ಕೋಟಿ ದಂಡ ವಿಧಿಸಿದ ಕಾನೂನು ವ್ಯವಸ್ಥೆ ನಮ್ಮಲ್ಲಿದೆ. ಆದರೂ ಅವರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾನು ಹೇಳುವುದಿಷ್ಟೇ. 2018ರಲ್ಲಿ ನೀವೇ ಸಿಎಂ ಆಗಿದ್ದಿರಿ. ಆಗಲೇ ನೈಸ್‌ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಬಹುದಿತ್ತಲ್ಲವೇ ಎಂದು ಕೇಳಬಹುದು. ಆಗ ನನಗೆಲ್ಲಿ ಮಾಡಲು ಬಿಟ್ಟರು, ನಾನು ಅವರ ಹಂಗಿನಲ್ಲಿದ್ದೆ. ಅವತ್ತು ನಾನು ವಿಷಕಂಠನಾಗಿದ್ದೆ. ಕಾರ್ಯಕರ್ತರ ನೋವು ಗೊತ್ತಿತ್ತು ಎಂದು ಅವರು ಹೆಚ್​ಡಿಕೆ ಹೇಳಿದರು.

ವಿದ್ಯುತ್‌ ಖರೀದಿಯಲ್ಲಿ ಹಬ್ಬ: ಕಾಂಗ್ರೆಸ್‌ ಸರ್ಕಾರ ಎಲ್ಲಾ ಇಲಾಖೆಗಳಲ್ಲಿಯೂ ಲೂಟಿಗೆ ಟಾರ್ಗೆಟ್​ ಫಿಕ್ಸ್‌ ಮಾಡಿಕೊಂಡಿದೆ. ಈಗ ಇಂಧನ ಇಲಾಖೆಯೂ ಮೇಯಲು ಹೊರಟಿದೆ. ವಿದ್ಯುತ್ ಖರೀದಿಗೆ ಹೊರಟಿದ್ದಾರೆ, ವಿದ್ಯುತ್‌ ಖರೀದಿ ಎಂದರೆ ಇವರಿಗೆ ಹಬ್ಬ. ಖರೀದಿ‌ ಮಾಡಿದಷ್ಟು ಕಿಕ್ ಬ್ಯಾಕ್ ಜಾಸ್ತಿ. ಪ್ರತಿ ತಿಂಗಳು 1,500 ಕೋಟಿ ರೂ. ಖರ್ಚು ಮಾಡೋದಕ್ಕೆ ಹೊರಟಿದ್ದಾರೆ. ಇದರಲ್ಲಿ ಎಷ್ಟು ಹೊಡೆಯುತ್ತೀರಾ? ಎಂದು ಮಾಜಿ ಸಿಎಂ ಪ್ರಶ್ನೆ ಮಾಡಿದರು.

ರಾಜ್ಯದ ಉದ್ದಗಲಕ್ಕೂ ಈಗ ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ. ರೈತರಿಗೆ ಸರಿಯಾಗಿ ಕರೆಂಟ್ ಕೊಡುತ್ತಿಲ್ಲ. ಈಗ ದೀಪಾವಳಿಗೆ ಮನೆಮನೆಗೂ ಮಣ್ಣಿನದೀಪ ಕೊಡಲು ಹೊರಟಿದ್ದಾರೆ. ಎಲ್ಲಿ ಕೊಟ್ಟಿದ್ದೀರಿ 200 ಯುನಿಟ್ ವಿದ್ಯುತ್ ಶಿವಕುಮಾರ್, ಸಿದ್ದರಾಮಯ್ಯನವರೇ? ಕಾಕಾ ಪಾಟೀಲ್ ಗೂ ಫ್ರೀ, ಮಹಾದೇವಪ್ಪಗೂ ಫ್ರೀ ಅಂದರು.‌ ಎಲ್ಲಿದೆ ಫ್ರೀ? ಸರಾಸರಿ ಅಂತ ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿದೆ ಈ ಸರ್ಕಾರ. ಆದರೂ ನುಡಿದಂತೆ ನಡೆದಿದ್ದೇವೆ ಎಂದು ಪೊಳ್ಳು ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಹಿಂದೆ ಡಿ ಕೆ ಶಿವಕುಮಾರ್ ಅವರು ನನ್ನ ಜತೆಯಲ್ಲಿ ಇದ್ದರು. ನನ್ನ ಕೈಯನ್ನು ಮೇಲೆ ಎತ್ತಿದ್ದರು. ನಮ್ಮಿಬ್ಬರನ್ನು ಜೋಡೆತ್ತು ಅಂತ ಕರೆಯುತ್ತಿದ್ದರು. ಮಂಡ್ಯದ ಲೋಕಸಭೆ ಚುನಾವಣೆಯಲ್ಲಿ ನನ್ನ ಕೈಯತ್ತಿ ಎತ್ತಿನಗಾಡಿ, ಎತ್ತುಗಳನ್ನು ಹೈಜಾಕ್‌ ಮಾಡಿಕೊಂಡು ಹೋದರು. ನನ್ನ ನಡುರಸ್ತೆಯಲ್ಲಿ ಬಿಟ್ಟುಹೋದರು. ನಾನು ಅವರಿಗೆ ಮರುಳಾಗಿ ಹೋದೆ. ನಾನು ಅವರು ಬದಲಾಗಿರಬಹುದು ಎಂದು ನಂಬಿ ಮೋಸ ಹೋದೆ. ಈಗ ಸಿದ್ದರಾಮಯ್ಯ ಅವರ ಕೈ ಮೇಲೆತ್ತಿ ದಿನವೂ ಪೋಸು ಕೊಡುತ್ತಿದ್ದಾರೆ. ಅದೆಷ್ಟು ದಿನ ಅಂತ ನೋಡೋಣ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಗ್ಯಾರಂಟಿಗಳ ನೆಪ ಹೇಳಿ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿದ್ದಾರೆ. ಜನರಿಗೆ ಟೋಪಿ ಹಾಕುತ್ತಿದ್ದಾರೆ. ಕರ್ನಾಟಕ ಸಂಪದ್ಭರಿತ ರಾಜ್ಯ. ಹಣಕ್ಕೆ ಕೊರತೆ ಇಲ್ಲ. ನೈಸ್‌ ಒಂದು ಯೋಜನೆಯನ್ನು ಸರ್ಕಾರದ ವಶಕ್ಕೆ ತೆಗೆದುಕೊಂಡರೆ ಇಂಥ ನೂರು ಗ್ಯಾರಂಟಿಗಳನ್ನು ಜಾರಿಗೆ ತರಬಹುದು. ಅಲ್ಲಿನ ಹೆಚ್ಚುವರಿ ಭೂಮಿಯನ್ನು ಕೂಡಲೇ ಸರ್ಕಾರ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: BJP and JDS alliance: ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಯಲ್ಲಿಯೂ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ - ಜಿ ಟಿ ದೇವೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.