ಬೆಂಗಳೂರು: ಅಕ್ಕಿಭಾಗ್ಯದ ಅಸಲಿಯತ್ತು ಏನು ಎಂಬುದನ್ನು ಈಗಾಗಲೇ ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಅದಾದ ಮೇಲೂ ನಿಮ್ಮ ‘ಸುಳ್ಳಿನ ಜಪʼ ಮುಂದುವರಿದಿದೆ. ಸತ್ಯ ಹೇಳಲು ಹಿಂಜರಿಕೆ-ಅಧೈರ್ಯ ಏಕೆ? ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ? ಐದು ಕೆಜಿ ಅಕ್ಕಿ ಅಸಲಿಯತ್ತಿನ ಬಗ್ಗೆ ಹೇಳಲು ಅಂಜಿಕೆ ಏಕೆ ಸಿದ್ದರಾಮಯ್ಯನವರೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಕಯ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ಸಮ್ಮಿಶ್ರ ಸರಕಾರದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದೆ. ಅದಕ್ಕೆ ಮುನ್ನ ಬಜೆಟ್ ಮಂಡಿಸಿ ಚುನಾವಣೆಗೆ ಹೋದ ತಾವು ಎಷ್ಟು ಕೆಜಿ ಅಕ್ಕಿಗೆ ಹಣ ಇಟ್ಟಿದ್ರಿ? 5 ಕೆಜಿಗೋ ಅಥವಾ 7 ಕೆಜಿಗೋ? ಸತ್ಯವನ್ನು ಕಕ್ಕಲು ಕಷ್ಟವೇಕೆ? ನಾಲಿಗೆ ತಡವರಿಸುತ್ತಿದೆಯಾ ಪ್ರತಿಪಕ್ಷ ನಾಯಕರೇ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.
-
ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು 'ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ' ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ʼಸಿದ್ದಕಲೆʼಗೆ ಕೊನೆ ಹಾಡಿ. 5/5
— H D Kumaraswamy (@hd_kumaraswamy) September 26, 2021 " class="align-text-top noRightClick twitterSection" data="
">ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು 'ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ' ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ʼಸಿದ್ದಕಲೆʼಗೆ ಕೊನೆ ಹಾಡಿ. 5/5
— H D Kumaraswamy (@hd_kumaraswamy) September 26, 2021ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು 'ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ' ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ʼಸಿದ್ದಕಲೆʼಗೆ ಕೊನೆ ಹಾಡಿ. 5/5
— H D Kumaraswamy (@hd_kumaraswamy) September 26, 2021
ಸಮ್ಮಿಶ್ರ ಸರಕಾರದಲ್ಲಿ 5 ಕೆಜಿ ಅಕ್ಕಿ ನೀಡಲಾಯಿತು, ನಿಜ. 7 ಕೆಜಿ ಕೊಡಿ ಎಂದು ಬೊಬ್ಬೆ ಹೊಡೆದ ನೀವೇ ಹಣ ಇಟ್ಟಿದ್ದದ್ದು 5 ಕೆಜಿಗೆ ಮಾತ್ರ. ಹೊರಗೆ ಕುಮಾರಸ್ವಾಮಿ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು ಎಂದು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದೀರಿ. ಉಳಿದ 2 ಕೆಜಿ ಅಕ್ಕಿಗೆ ಹಣ ಎಲ್ಲಿತ್ತು? ಪಾಪಪ್ರಜ್ಞೆ ಇಲ್ಲವಾ ನಿಮಗೆ ಎಂದು ಕಿಡಿಕಾರಿದ್ದಾರೆ.
ಚುನಾವಣೆಯಲ್ಲಿ ಕೇವಲ ಮತ ಪಡೆಯುವ ದುರುದ್ದೇಶದಿಂದ ನೀವು ಜನರು ತಿನ್ನುವ ಅನ್ನದ ಜತೆಗೂ ರಾಜಕೀಯ ಮಾಡುತ್ತಿದ್ದೀರಿ. ಆದರೆ ಉಳಿದ 2 ಕೆಜಿ ಅಕ್ಕಿಗೆ ಹಣ ಹೊಂದಿಸಲು ಸಮ್ಮಿಶ್ರ ಸರಕಾರದಲ್ಲಿ ನಾವು ಪಟ್ಟ ಕಷ್ಟ ನಿಮಗೆ ಗೊತ್ತಿಲ್ಲವೇ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು 'ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ' ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ‘ಸಿದ್ದಕಲೆ’ಗೆ ಕೊನೆ ಹಾಡಿ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಇನ್ನೂ 20 ವರ್ಷ ನಿರುದ್ಯೋಗಿಗಳಾಗಿ ಇರಬೇಕು: ಕಟೀಲ್ ವ್ಯಂಗ್ಯ
ಸಿದ್ದರಾಮಯ್ಯನವರೇ ನಿಮಗೆ ರಾಜಕೀಯ ಶಕ್ತಿ ತುಂಬಿದವರು ಯಾರು?
-
ಸುಳ್ಳಿನ ಶೂರ, ಸಿದ್ದಕಲೆಯ ನಿಷ್ಣಾತ ಸಿದ್ದರಾಮಯ್ಯನವರಿಗೆ ರಾಜಕೀಯ ಶಕ್ತಿ ತುಂಬಿದವರು ಯಾರು? ನಾನು ಎಲ್ಲಿದ್ದೆ? ಎಲ್ಲಿಂದಾ ಬಂದೆ ಎಂದು ಸ್ವತಃ ಅವರೇ ಜನತೆಗೆ ಹೇಳಿದರೆ ಚೆನ್ನಾಗಿರುತ್ತದೆ. ಸತ್ಯಕ್ಕೆ ಬೆನ್ನು ತಿರುಗಿಸಿ ಸದಾ ಸುಳ್ಳಿನೆಡೆಗೆ ಮುಖ ಮಾಡಿ ನಿಲ್ಲುವ ʼಸಿದ್ದಹಸ್ತರಿಗೆʼ ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. 1/4
— H D Kumaraswamy (@hd_kumaraswamy) September 26, 2021 " class="align-text-top noRightClick twitterSection" data="
">ಸುಳ್ಳಿನ ಶೂರ, ಸಿದ್ದಕಲೆಯ ನಿಷ್ಣಾತ ಸಿದ್ದರಾಮಯ್ಯನವರಿಗೆ ರಾಜಕೀಯ ಶಕ್ತಿ ತುಂಬಿದವರು ಯಾರು? ನಾನು ಎಲ್ಲಿದ್ದೆ? ಎಲ್ಲಿಂದಾ ಬಂದೆ ಎಂದು ಸ್ವತಃ ಅವರೇ ಜನತೆಗೆ ಹೇಳಿದರೆ ಚೆನ್ನಾಗಿರುತ್ತದೆ. ಸತ್ಯಕ್ಕೆ ಬೆನ್ನು ತಿರುಗಿಸಿ ಸದಾ ಸುಳ್ಳಿನೆಡೆಗೆ ಮುಖ ಮಾಡಿ ನಿಲ್ಲುವ ʼಸಿದ್ದಹಸ್ತರಿಗೆʼ ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. 1/4
— H D Kumaraswamy (@hd_kumaraswamy) September 26, 2021ಸುಳ್ಳಿನ ಶೂರ, ಸಿದ್ದಕಲೆಯ ನಿಷ್ಣಾತ ಸಿದ್ದರಾಮಯ್ಯನವರಿಗೆ ರಾಜಕೀಯ ಶಕ್ತಿ ತುಂಬಿದವರು ಯಾರು? ನಾನು ಎಲ್ಲಿದ್ದೆ? ಎಲ್ಲಿಂದಾ ಬಂದೆ ಎಂದು ಸ್ವತಃ ಅವರೇ ಜನತೆಗೆ ಹೇಳಿದರೆ ಚೆನ್ನಾಗಿರುತ್ತದೆ. ಸತ್ಯಕ್ಕೆ ಬೆನ್ನು ತಿರುಗಿಸಿ ಸದಾ ಸುಳ್ಳಿನೆಡೆಗೆ ಮುಖ ಮಾಡಿ ನಿಲ್ಲುವ ʼಸಿದ್ದಹಸ್ತರಿಗೆʼ ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. 1/4
— H D Kumaraswamy (@hd_kumaraswamy) September 26, 2021
ಜೆಡಿಎಸ್ ಪಕ್ಷಕ್ಕೆ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಅದೊಂದು ಪರಾವಲಂಬಿ ಪಕ್ಷ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮೂಲಕವೇ ತಿರುಗೇಟು ನೀಡಿರುವ ಹೆಚ್ಡಿಕೆ, “ಸುಳ್ಳಿನ ಶೂರ, ಸಿದ್ಧಕಲೆಯ ನಿಷ್ಣಾತ ಸಿದ್ದರಾಮಯ್ಯನವರಿಗೆ ರಾಜಕೀಯ ಶಕ್ತಿ ತುಂಬಿದವರು ಯಾರು? ನಾನು ಎಲ್ಲಿದ್ದೆ? ಎಲ್ಲಿಂದಾ ಬಂದೆ ಎಂದು ಸ್ವತಃ ಅವರೇ ರಾಜ್ಯದ ಜನತೆಗೆ ಹೇಳಿದರೆ ಚೆನ್ನಾಗಿರುತ್ತದೆ. ಸತ್ಯಕ್ಕೆ ಬೆನ್ನು ತಿರುಗಿಸಿ ಸದಾ ಸುಳ್ಳಿನೆಡೆಗೆ ಮುಖ ಮಾಡಿ ನಿಲ್ಲುವ ʼಸಿದ್ಧಹಸ್ತರಿಗೆʼ ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ.” ಎಂದು ವಾಗ್ದಾಳಿ ನಡೆಸಿದ್ದಾರೆ.
ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು ರಾಜಕೀಯದ ಮರುಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆಯುವ ಗುಣ ಯಾರದ್ದು ಎಂಬುದನ್ನು ಜನ ಬಲ್ಲರು. ಪರಾವಲಂಬಿ ರಾಜಕಾರಣ ಅವರ ನೈಜಗುಣ. ನೇರ ರಾಜಕಾರಣ ಅವರ ರಕ್ತದಲ್ಲೇ ಇಲ್ಲ. ಜೆಡಿಎಸ್ ಅನ್ನ-ಗೊಬ್ಬರದಿಂದ ಬೆಳೆದ ಸಿದ್ದರಾಮಯ್ಯ, ಈಗ ಅದೇ ಬಲದಿಂದ ಕಾಂಗ್ರೆಸ್ ಪಕ್ಷವನ್ನೇ ನುಂಗುತ್ತಿದ್ದಾರೆ. ಆ ಪಕ್ಷದ ದಿಗ್ಗಜ ನಾಯಕರನ್ನೇ ಬಲಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜೆಡಿಎಸ್ ಅವರಿವರ ಜೊತೆ ಹೋಗುವ ಪಕ್ಷ ಎಂದು ಸಿದ್ದರಾಮಯ್ಯ ಹೇಳಿರುವುದು ಅವರ ರಾಜಕೀಯ ಪ್ರಜ್ಞೆಯ ದಿವಾಳಿತನವಷ್ಟೆ. 2018ರಲ್ಲಿ ದೇವೇಗೌಡರ ಮನೆ ಬಾಗಿಲಿಗೆ ಬಂದವರು ಯಾರು? ನನ್ನನ್ನು ಮುಖ್ಯಮಂತ್ರಿ ಮಾಡಿ ಕೊನೆಗೆ ಕೈಕೊಟ್ಟು ಆ ಸರ್ಕಾರದ ಪತನಕ್ಕೆ 'ಕಾರಣಪುರುಷರು' ಯಾರು? ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ ಎಂದಿದ್ದಾರೆ.
ಹೆಚ್.ಡಿ.ದೇವೇಗೌಡರನ್ನು ಪ್ರಧಾನಿ ಮಾಡಿ, ಅವರಿಗೆ ಕೈಕೊಟ್ಟವರು ಯಾರು ಎಂಬುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯನವರೇ ಸುಮ್ಮನೆ ನಮ್ಮನ್ನು ಕೆಣಕಬೇಡಿ. ಜೆಡಿಎಸ್ ಚಿಕ್ಕ ಪಕ್ಷವಿರಬಹುದು, ಅದರ ಶಕ್ತಿಯನ್ನು ಕಡೆಗಣಿಸಬೇಡಿ. ಕರ್ನಾಟಕ ರಾಜಕಾರಣದಲ್ಲಿ ಪರಾವಲಂಬಿ ಸಸ್ಯ ನೀವು. ಪಕ್ಷಗಳನ್ನು ಒಡೆಯುವ ನಿಮ್ಮ ʼಸಿದ್ದಕಲೆʼ ರಾಜ್ಯಕ್ಕೆ ಹೊಸತೇನಲ್ಲ.” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.