ETV Bharat / state

ಸಮವಸ್ತ್ರ ವಿವಾದ ಬಗ್ಗೆ ಹೆಚ್​​ಡಿಕೆ ಪ್ರಸ್ತಾಪ : ಕಾಂಗ್ರೆಸ್​ ಶಾಸಕ ಜಮೀರ್- ಜೆಡಿಎಸ್‍ ಶಾಸಕರ ನಡುವೆ ವಾಗ್ವಾದ - ಜೆಡಿಎಸ್‍ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ

ರಾಷ್ಟ್ರಕವಿ ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಆದರೆ, ಅವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಹಿಂಸಾಚಾರವಾಗಿದೆ. ಶಿಕ್ಷಣ ಕ್ಷೇತ್ರ, ಮಕ್ಕಳ ವಿದ್ಯಾಭ್ಯಾಸದ ಮೇಲೆ ಸಮಸ್ಯೆ ಉಂಟಾಗಿದೆ. ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಿದೆ. ಇದು ಸಾಮರಸ್ಯ ಮೂಡಿಸುವ ವಿಚಾರವಾಗಿದೆ. ಚರ್ಚೆಗೆ ಅವಕಾಶ ಕೊಡಬೇಕೆಂದು ಮನವಿ ಮಾಡಿದರು..

assembly
assembly
author img

By

Published : Mar 14, 2022, 5:04 PM IST

ಬೆಂಗಳೂರು : ಸಮವಸ್ತ್ರ ವಿವಾದದಿಂದ ಶಿಕ್ಷಣ ಕ್ಷೇತ್ರದ ಮೇಲೆ ಆಗಿರುವ ಪರಿಣಾಮದ ಬಗ್ಗೆ ಚರ್ಚಿಸಲು ಅವಕಾಶ ಕೋರಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‍ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಮಂಡಿಸಿದ ವೇಳೆ ಮಾತಿನ ವಾಗ್ವಾದ ನಡೆದ ಪ್ರಸಂಗ ವಿಧಾನಸಭೆಯಲ್ಲಿ ಸೋಮವಾರ ನಡೆಯಿತು.

ನಿಲುವಳಿ ಸೂಚನೆ ಮಂಡಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ವಿವಾದದಿಂದ ಸಮಸ್ಯೆ ಉಂಟಾಗಿದೆ. ಕೆಲವೆಡೆ ಅಹಿತಕರ ಘಟನೆಯೂ ನಡೆದು ಸಾಮರಸ್ಯಕ್ಕೆ ಭಂಗ ತಂದಿವೆ. ಕೋವಿಡ್​ನಿಂದ ಎರಡು ವರ್ಷ ಶಾಲಾ-ಕಾಲೇಜುಗಳು ಸಾಕಷ್ಟು ಸಮಸ್ಯೆ ಎದುರಿಸಿದವು.

ರಾಷ್ಟ್ರಕವಿ ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಆದರೆ, ಅವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಹಿಂಸಾಚಾರವಾಗಿದೆ. ಶಿಕ್ಷಣ ಕ್ಷೇತ್ರ, ಮಕ್ಕಳ ವಿದ್ಯಾಭ್ಯಾಸದ ಮೇಲೆ ಸಮಸ್ಯೆ ಉಂಟಾಗಿದೆ. ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಿದೆ. ಇದು ಸಾಮರಸ್ಯ ಮೂಡಿಸುವ ವಿಚಾರವಾಗಿದೆ. ಚರ್ಚೆಗೆ ಅವಕಾಶ ಕೊಡಬೇಕೆಂದು ಮನವಿ ಮಾಡಿದರು.

ಮಾತಿನ ವಾಗ್ವಾದ: ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ಅವರು ಹಿಜಾಬ್, ಗಿಜಾಬ್ ಏನೂ ಬೇಡ ಎನ್ನುತ್ತಿದ್ದರು. ಒಂದೂವರೆ ತಿಂಗಳ ನಂತರ ಈಗ ದಿಢೀರನೇ ಪ್ರಸ್ತಾಪ ಮಾಡುತ್ತಿದ್ದಾರೆ ಎಂದರು. ಆಗ ಜೆಡಿಎಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಜಮೀರ್ ಮತ್ತು ಜೆಡಿಎಸ್​ ಶಾಸಕರ ನಡುವೆ ಮಾತಿನ ವಾಗ್ವಾದ ನಡೆಯಿತು.

ಮತ್ತೆ ಮಾತು ಮುಂದುವರೆಸಿದ ಕುಮಾರಸ್ವಾಮಿ, ಜಂಟಿ ಅಧಿವೇಶನದ ಸಂದರ್ಭದಲ್ಲಿ ನಿಲುವಳಿ ಸೂಚನೆ ಕೊಟ್ಟಿದ್ದೆವು. ಆಗ ಅವಕಾಶ ಸಿಗಲಿಲ್ಲ. ಇದು ಸೂಕ್ಷ್ಮ ವಿಚಾರ. ರಾಜ್ಯದಲ್ಲಿ ಸಾಮರಸ್ಯವಿರಬೇಕು. ಕಳೆದ ಎರಡು ತಿಂಗಳಿನಿಂದ ಶಿಕ್ಷಣ ಕ್ಷೇತ್ರದ ಮೇಲೆ ಹಲವು ರೀತಿಯ ದುಷ್ಪರಿಣಾಮವಾಗಿದೆ ಎಂದರು.

ನಮಗೆ ಯಾವುದೇ ರೀತಿಯ ಆತಂಕವಿಲ್ಲ. ಚುನಾವಣೆಗೆ ಮತ ಪಡೆಯಲು ಪ್ರಸ್ತಾಪ ಮಾಡುವುದು ಬೇರೆ, ಪಕ್ಷದ ನಿಲುವು ಬೇರೆ, ಸರ್ಕಾರದ ನಿಲುವು ಬೇರೆ. ಎಲ್ಲ ಸಮಾಜಕ್ಕೂ ರಕ್ಷಣೆ ಕೊಡಬೇಕಾದದ್ದು ಸರ್ಕಾರದ ಜವಾಬ್ದಾರಿ. ಸಾಮರಸ್ಯ ಮೂಡಿಸಲು ಈ ವಿಷಯದ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದರು.

ಆಗ ಮಧ್ಯಪ್ರವೇಶಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ನಿಲುವಳಿ ಸೂಚನೆಯಡಿ ಈ ವಿಚಾರ ಬರುವುದಿಲ್ಲ. ಬಜೆಟ್ ಮೇಲಿನ ಚರ್ಚೆ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪ್ರಸ್ತಾಪಿಸಲು ಅವಕಾಶವಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇದೆ ಎಂದರು.

ಆಗ ಕುಮಾರಸ್ವಾಮಿ ನ್ಯಾಯಾಲಯದಲ್ಲಿರುವ ವಿಚಾರ ಹೊರತುಪಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸ್ಪೀಕರ್ ಅವರನ್ನು ಕೋರಿದರು. ಇದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ನಿಲುವಳಿ ಸೂಚನೆಯಡಿ ಈ ವಿಚಾರ ಬರುವುದಿಲ್ಲ. ಹಾಗಾಗಿ, ನಿಯಮ 69ರಡಿ ನಾಳೆ (ಮಂಗಳವಾರ) ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದರು.

ಇದನ್ನೂ ಓದಿ: ಯೋಗೇಶ್ವರ್ ಚಡ್ಡಿ ಹಾಕುವ ಮುನ್ನ, ನನಗೂ ಚನ್ನಪಟ್ಟಣಕ್ಕೂ ನಂಟಿದೆ.. ಅವನಿಗೆ ಹುಚ್ಚು ಹಿಡಿದಿದೆ.. ಹೆಚ್‌​ಡಿಕೆ ತಿರುಗೇಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.