ETV Bharat / state

ಕುಮಾರಸ್ವಾಮಿ ಹತಾಶೆಗೊಳಗಾಗಿ ಮಾತನಾಡುತ್ತಿದ್ದಾರೆ: ಸಚಿವ ಶಿವರಾಜ್ ತಂಗಡಗಿ - ಹೆಚ್​ ಡಿ ಕುಮಾರಸ್ವಾಮಿ

ಕಾಂಗ್ರೆಸ್‌ ಸರ್ಕಾರದ ಕುರಿತು ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದರು.

Minister Shivaraj Thangadagi
ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹತಾಶೆಗೊಳಗಾಗಿ ಮಾತನಾಡುತ್ತಿದ್ದಾರೆ: ಸಚಿವ ಶಿವರಾಜ್ ತಂಗಡಗಿ
author img

By

Published : Aug 4, 2023, 8:36 PM IST

ಬೆಂಗಳೂರು: ''ಕಳೆದ ಚುನಾವಣೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಕನಸು ನನಸಾಗದ ಕಾರಣಕ್ಕೆ ಹತಾಶೆಗೊಳಗಾಗಿ ಮಾತನಾಡುತ್ತಿದ್ದಾರೆ'' ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದನ್ನು ಸಹಿಸಲು ಆಗದ ವಿಪಕ್ಷದ ನಾಯಕರು ವಿನಾಕಾರಣ ಆಧಾರರಹಿತ ಆರೋಪಗಳನ್ನು ಮಾಡುತ್ತಾ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪರಿಣಾಮ‌ ಲೋಕಸಭಾ ಚುನಾವಣೆಯಲ್ಲೂ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ'' ಎಂದರು.

''ಬಿಜೆಪಿಯವರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದೆ. ಈ ಎರಡು ಸಮುದಾಯಗಳ ಹಣ ಸದ್ಭಳಕೆ ಬಗ್ಗೆ ಸೂಕ್ತ ‌ಕಾನೂನನ್ನು ತಂದಿದ್ದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಇದೀಗ ಬಿಜೆಪಿ ಈ ಕುರಿತು ಮಾತನಾಡುತ್ತಿದೆ. ಅವರಿಗೆ ಈ ವಿಚಾರಗಳಲ್ಲಿ ಚರ್ಚೆ ನಡೆಸುವ ಯೋಗ್ಯತೆ ಕಳೆದುಕೊಂಡಿದ್ದಾರೆ'' ಎಂದರು.

''ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ರಾಜ್ಯಕ್ಕೆ ಬೊಮ್ಮಾಯಿ ಅವರ ಕೊಡುಗೆ ಶೂನ್ಯ.‌ ಪ್ರಮುಖ ವಿಪಕ್ಷವಾಗಿ‌ ಬಿಜೆಪಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇವಲ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ'' ಎಂದು ಅವರು ಇದೇ ವೇಳೆ ಕಿಡಿಕಾರಿದರು.

ಪಕ್ಷ ಸಂಘಟನೆ ಬಗ್ಗೆ ಚರ್ಚೆ: ''ಮುಂದಿನ ಏಳೆಂಟು ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಜವಾಬ್ದಾರಿ ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ರಾಜಕೀಯ ಬದಲಾವಣೆಗಳು ಕರ್ನಾಟಕದಿಂದಲೇ ಆರಂಭವಾಗುವುದು. ಹೀಗಾಗಿ ಲೋಕಸಭಾ ಚುನಾವಣೆಗೆ ರಾಜ್ಯದಿಂದಲೇ ಅತೀ‌ ಹೆಚ್ಚು ಸೀಟು ಗೆಲ್ಲಬೇಕು ಎನ್ನುವ ಬಗ್ಗೆ ವರಿಷ್ಠರು ಸೂಚನೆ ನೀಡಿದ್ದು, ಆ ನಿಟ್ಟಿನಲ್ಲಿ ನಾವು ಕಾರ್ಯ ಪ್ರವೃತ್ತರಾಗಲಿದ್ದೇವೆ'' ಎಂದು ಅವರು ತಿಳಿಸಿದರು.‌

''ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲವನ್ನೂ ನಿಭಾಯಿಸುತ್ತಾರೆ. ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು ನನಗೆ ಬಹಳ ಆತ್ಮೀಯರು. ಅವರ ಬಗ್ಗೆ ಅಪಾರ ಗೌರವವಿದೆ. ರಾಯರೆಡ್ಡಿ ಅವರು ಹೆಚ್ಚು ಬಾರಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶ ಮಾಡಿದವರು.‌ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲಾರೆ'' ಎಂದರು.''ಅನಾಥ ಮಕ್ಕಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಬಗ್ಗೆ ಆಯೋಗ ವರದಿ ಕೊಟ್ಟಿದ್ದು,‌ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ'' ಎಂದು ಪ್ರಶ್ನೆಯೊಂದಕ್ಕೆ‌‌ ತಂಗಡಗಿ ಪ್ರತಿಕ್ರಿಯೆ ನೀಡಿದರು.

'ವಿಶ್ವಾಸ್' ತಂತ್ರಾಂಶದಿಂದ ಯೋಜನೆಗಳು ಫಲಾನುಭವಿಗಳಿಗೆ ತಲುಪಲಿದೆ: ''ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವುದು ಮತ್ತು ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂಬ ಕಾರಣದಿಂದ 'ವಿಶ್ವಾಸ್' ಎಂಬ ತಂತ್ರಾಂಶವನ್ನು ಪರಿಚಯಿಸಲಾಗಿದೆ'' ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬ್ಯಾಂಕ್ ಆಫ್ ಬರೋಡದ ಸಹಯೋಗದೊಂದಿಗೆ ದೇವರಾಜು ಅರಸು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 'ವಿಶ್ವಾಸ್' ತಂತ್ರಾಂಶ ಹಾಗೂ ಪಿಒಎಸ್ ಸಾಧನಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾಲ‌‌‌ ಮರುಪಾವತಿ‌ ಮಾಡಿಸಿಕೊಳ್ಳುವುದು ಜಿಲ್ಲಾ ಮಟ್ಟದಲ್ಲಿ ಸಮಸ್ಯೆಯಾಗಿತ್ತು. ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬಳಿಕ ಜನರಿಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ 2 ತಿಂಗಳಲ್ಲಿ ಈ ತಂತ್ರಾಂಶ ಹೊರ ತರಲಾಗಿದೆ.

ನಿಗಮಗಳಿಂದ ನೀಡಲಾಗುವ ಸಾಲ ನೀಡಿವುದು ಹಾಗೂ ಸಾಲ ಮರುಪಾವತಿಗೆ ಈ ನೂತನ ತಂತ್ರಾಂಶ ಹೆಚ್ಚಿನ ಅನುಕೂಲವಾಗಲಿದ್ದು, ದಲ್ಲಾಳಿಗಳ ಹಾವಳಿ ತಪ್ಪಲಿದೆ. ಪಾರದರ್ಶಕತೆ ಇರಲಿದ್ದು, ಇಲಾಖೆಗೆ ಯಾವುದೇ ವಂಚನೆ‌ ಮಾಡಲು ಸಾಧ್ಯವಿಲ್ಲ. ಫಲಾನುಭವಿಯಿಂದ ಪಡೆಯಲಾದ ಮರುಪಾವತಿ ಮೊತ್ತವೂ ದುರ್ಬಳಕೆಯಾಗದೆ ನಿಗಮದ ಮರುಪಾವತಿ ಖಾತೆಗೆ ನೇರವಾಗಿ ಜಮಾ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 9,064 ಫಲಾನುಭವಿಗಳ ಆಯ್ಕೆ: ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 12,807 ಕೊಳವೆ ಬಾವಿಗಳನ್ನು ಕೊರೆಸಲು ಗುರಿ ಹೊಂದಲಾಗಿದ್ದು, ಇದಕ್ಕೆ 9,064 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ‌‌ 203.29 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ಕೊಳವೆ ಬಾವಿ ಕೊರೆಸಿದ ವಾರದೊಳಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಫಲಾನುಭವಿಗಳ ಆಯ್ಕೆ ಪಟ್ಟೆಯನ್ನು ಶಾಸಕರು ಒದಗಿಸಲಿದ್ದಾರೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಸಂಖ್ಯೆ ದೊಡ್ಡದಿದ್ದು, ಇದಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು. ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸವನ್ನು‌‌ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಪ್ರಮಾಣಿಕವಾಗಿ ಮಾಡಲಾಗುವುದು. ಸರ್ಕಾರ ಯೋಜನೆಗಳನ್ನು ಪ್ರಮಾಣಿಕವಾಗಿ ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.

ಹೊಸ ಕಲ್ಪನೆ‌ ಇಟ್ಟುಕೊಂಡು ಹಾಸ್ಟೆಲ್ ನಿರ್ಮಾಣ ಮಾಡುವ ಚಿಂತನೆ ಇದೆ. ಹಾಸ್ಟೆಲ್​ನಲ್ಲಿ‌ ಗುಣಮಟ್ಟದ ಆಹಾರ ನೀಡಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ವಿದೇಶಕ್ಕೆ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ‌ ಸೇರಿದಂತೆ ಹಲವು ವಿಶೇಷ ಯೋಜನೆಗಳಿವೆ. ಇಂತಹ ಯೋಜನೆಯನ್ನು ಜನರು ಬಳಸಿಕೊಳ್ಳಬೇಕು ಎಂದರು.

ಇದೇ ವೇಳೆ ಅರಿವು ಯೋಜನೆಯ 138 ಫಲಾನುಭವಿಗಳ ಖಾತೆಗೆ 1.20 ಲಕ್ಷ ರೂ. ಹಣವನ್ನು ಡಿಬಿಟಿ ಮೂಲಕ ಜಮಾ‌ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆ ಕಾರ್ಯದರ್ಶಿ ತುಳಸಿ‌ ಮದಿನೇನಿ, ದೇವರಾಜು ಅರಸು ಅಭಿವೃದ್ಧಿ ನಿಗಮದ ಕಾಂತರಾಜು ಹಾಗೂ ಇತರರು ಇದ್ದರು.

ಇದನ್ನೂ ಓದಿ: Annabhagya: ಅನ್ನಭಾಗ್ಯದಡಿ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೆಪ್ಟೆಂಬರ್‌ನಿಂದ್ಲೇ ವಿತರಿಸಲು ಕ್ರಮ: ಸಚಿವ ಕೆ.ಹೆಚ್.ಮುನಿಯಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.