ಬೆಂಗಳೂರು: ಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯ ಬಗ್ಗೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡಲೇ ಪಾದಯಾತ್ರೆ ನಿಲ್ಲಿಸಬೇಕು. ಒಂದು ವೇಳೆ ಅವರು ನಿಲ್ಲಿಸದಿದ್ದರೆ ಸರ್ಕಾರವೇ ಕಠಿಣ ಕ್ರಮ ಕೈಗೊಂಡು ತಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿರುವ ಹೆಚ್ಡಿಕೆ, ಕೋವಿಡ್ ಸೋಂಕು ಎಲ್ಲೆಲ್ಲೂ ವಿಜೃಂಭಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜನರ ಆರೋಗ್ಯ-ಜೀವದ ಬಗ್ಗೆ ಅರಿವಿಲ್ಲದೆ ಕೇವಲ ರಾಜಕೀಯಕ್ಕಾಗಿ ಈ ಯಾತ್ರೆ ಕೈಗೊಂಡಿದೆ ಎಂದು ದೂರಿದ್ದಾರೆ.
-
ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು.1/10
— H D Kumaraswamy (@hd_kumaraswamy) January 12, 2022 " class="align-text-top noRightClick twitterSection" data="
">ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು.1/10
— H D Kumaraswamy (@hd_kumaraswamy) January 12, 2022ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು.1/10
— H D Kumaraswamy (@hd_kumaraswamy) January 12, 2022
ಮೇಕೆದಾಟು ಪಾದಯಾತ್ರೆಯನ್ನು 'ಒಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರಿದ ಸರ್ಕಾರಕ್ಕೂ ಚಾಟಿ ಬೀಸಿದೆ. ಸರ್ಕಾರವು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ನೀರಿನ ಹೆಸರಿನಲ್ಲಿ ನಡೆಯುತ್ತಿರುವ ಈ ಆಟ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯವ್ಯಾಪಿ ಕೋವಿಡ್ ವಿಜೃಂಭಿಸುತ್ತಿದೆ. ಸೋಂಕು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರಿಗೆ ಪಾಸಿಟವ್ ಆಗಿ ಅವರು ಆಸ್ಪತ್ರೆ ಸೇರಿಕೊಳ್ಳುತ್ತಿದ್ದಾರೆ. ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಪತ್ತೆಯಾಗುತ್ತದೆ ಎಂದಿದ್ದಾರೆ.
ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ, ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯಕೀಯ ವ್ಯವಸ್ಥೆ ಸಾಲುವುದಿಲ್ಲ. ಕಳೆದ 4 ದಿನಗಳಿಂದ ಬಸ್ಸುಗಳಲ್ಲಿ ಜನರನ್ನು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು 'ಸೋಂಕಿನ ಸಮಾರಾಧನೆ'ಯಷ್ಟೇ! ಎಂದು ಪ್ರಶ್ನಿಸಿದ್ದಾರೆ.
ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರ್ಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ. 1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ಚರ್ಚೆ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ. ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ. ಇಂಥ ಆಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಹೆಚ್ಡಿಕೆ ಟೀಕಿಸಿದ್ದಾರೆ.
ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ನಾಯಕರು ಪಕ್ಷದ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ, ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ ಎಂದು ಹೇಳಿದ್ದಾರೆ.
ಕಳೆದ 4 ದಿನಗಳಿಂದ ಸರ್ಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ. ಸರ್ಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.
ಇಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಾಂಗ್ರೆಸ್ ಪಾದಯಾತ್ರೆಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ದಿಢೀರ್ ಆದೇಶ ಹೊರಡಿಸಿದ್ದಾರೆ.