ETV Bharat / state

ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ': ಹೆಚ್​​ಡಿಕೆ - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ' ಎಂದು ಹೆಚ್​​ಡಿಕೆ ಕುಟುಕಿದ್ದಾರೆ.

HD Kumaraswamy
ಹೆಚ್.ಡಿ.ಕುಮಾರಸ್ವಾಮಿ
author img

By

Published : May 28, 2021, 10:18 AM IST

ಬೆಂಗಳೂರು: ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

  • ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ.
    1/3

    — H D Kumaraswamy (@hd_kumaraswamy) May 28, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ. ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯ ಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂತಾಗಿದೆ ಎಂದು ಕುಟುಕಿದ್ದಾರೆ.

  • ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ.
    3/3

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಪ್ರಕರಣ ಸಾಕ್ಷಿ ಎಂದು ಹೆಚ್​​ಡಿಕೆ ತಿರುಗೇಟು ನೀಡಿದ್ದಾರೆ.

ಓದಿ: ವಿವಾದಿತ ಜಿಂದಾಲ್ ಭೂಮಿ ಪರಭಾರೆ ನಿರ್ಧಾರ ತಡೆ ಹಿಡಿದ ಸಚಿವ ಸಂಪುಟ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.