ETV Bharat / state

ಮೈಸೂರು ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು: ಕುಮಾರಸ್ವಾಮಿ - Former CM HD Kumarswamy statement

ಕೃಷಿ ಅಧಿಕಾರಿಗಳ ಬಂಧನದಿಂದ ಈ ಸರ್ಕಾರದಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ ಮತ್ತು ಮಂತ್ರಿಗಳು ಅಧಿಕಾರಿಗಳಿಂದ ಸುಲಿಗೆ ಮಾಡುತ್ತಿರುವುದು ಸಾಬೀತಾಗಿದೆ ಎಂದು ಹೆಚ್​ ಡಿ ಕುಮಾರಸ್ವಾಮಿ ಕಿಡಿಕಾರಿದರು.

former-cm-hd-kumarswamy-slams-minister-chaluvarayaswamy
ಮೈಸೂರು ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು: ಹೆಚ್​​ಡಿ ಕುಮಾರಸ್ವಾಮಿ
author img

By

Published : Aug 20, 2023, 6:16 PM IST

Updated : Aug 20, 2023, 6:52 PM IST

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಪತ್ರ ನಕಲಿಯೋ ಅಸಲಿಯೋ ಆ ಮಾತು ಹಾಗಿರಲಿ. ಆದರೆ, ಕೃಷಿ ಇಲಾಖೆಯಲ್ಲಿ ಸುಲಿಗೆ, ವರ್ಗಾವಣೆ ದಂಧೆ ನಡೆಯುತ್ತಿರುವುದು ಅಸಲಿ ಎನ್ನುವುದು ಗೊತ್ತಾಯಿತಲ್ಲ. ಆ ಅಧಿಕಾರಿಗಳು ದೂರಿನ ಪತ್ರ ಯಾಕೆ ಬರೆದರು? ಅವರು ಮೈಸೂರಿನವರಾದರೂ ಆಗಲಿ ಅಥವಾ ಮಂಡ್ಯದವರಾದರೂ ಆಗಲಿ. ಸತ್ಯ ಏನೆಂಬುದು ಬಯಲಿಗೆ ಬಂತಲ್ಲ ಎಂದು ವಾಗ್ದಾಳಿ ನಡೆಸಿದರು.

ಇಬ್ಬರು ಅಧಿಕಾರಿಗಳನ್ನು ಏಕೆ ವಶಕ್ಕೆ ಪಡೆದಿದ್ದಾರೆ?. ಅಧಿಕಾರಿಗಳ ಬಂಧನವಾಗಿದೆ ಅಂದರೆ ಭ್ರಷ್ಟಾಚಾರ, ವರ್ಗಾವಣೆ ದಂಧೆ ಆಗಿದೆ ಎಂದು ಅಲ್ಲವೇ?. ಆರೋಪಿ ಸ್ಥಾನದಲ್ಲಿರುವ ಸಚಿವರೇ ಪ್ರತಿಯೊಂದಕ್ಕೂ ಉತ್ತರ, ಹೇಳಿಕೆ ಕೊಡುತ್ತಿದ್ದಾರೆ. ಸಿಐಡಿ ಪೊಲೀಸರು ತನಿಖೆಯ ವರದಿಯನ್ನು ಗೃಹ ಸಚಿವರಿಗೆ ಕೊಡುತ್ತಾರೋ ಅಥವಾ ಮುಖ್ಯಮಂತ್ರಿಗಳಿಗೆ ಕೊಡುತ್ತಾರೋ?, ಇಲ್ಲ ಆರೋಪಿ ಸ್ಥಾನದಲ್ಲಿರುವ ಸಚಿವರಿಗೆ ಎಲ್ಲಾ ಮಾಹಿತಿಯನ್ನು ಸೋರಿಕೆ ಮಾಡುತ್ತಾರೋ? ಇದೇನು ತನಿಖೆಯಾ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇದೇನು ಸರ್ಕಾರವಾ? ಇವರ ಮೂಗಿನ ನೇರಕ್ಕೆ, ಅದೂ ಕೇವಲ ಒಂದೇ ವಾರದಲ್ಲಿ ನಮ್ಮ ಸಿಐಡಿ ಪೊಲೀಸರು ಎಲ್ಲವನ್ನೂ ಕಂಡು ಹಿಡಿದುಬಿಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಆರೋಪಿ ಸಚಿವರು ಹೇಳಿಕೆ ಕೊಡುತ್ತಿದ್ದಾರೆ. ಇದು ಹಳ್ಳ ಹಿಡಿಯದೇ ಇನ್ನೇನಾಗುತ್ತದೆ ಎಂದು ಕಿಡಿಕಾರಿದರು. ಸರ್ಕಾರದ ಭ್ರಷ್ಟಾಚಾರ ಬಯಲಿಗೆ ತಂದ ಆ ಮೈಸೂರು ಅಧಿಕಾರಿಗಳನ್ನು ನಾನು ಅಭಿನಂದಿಸುತ್ತೇನೆ. ಅವರಿಗೆ ನಾನು ಹೇಳುವುದು ಇಷ್ಟೇ. ಹೇಗೂ ರಾಜ್ಯಪಾಲರಿಗೆ ದೂರಿನ ಪತ್ರ ನೀವೇ ಬರೆದಿದ್ದೀರಿ ಎನ್ನುವುದು ಗೊತ್ತಾಗಿ ಹೋಗಿದೆ. ಈಗಲಾದರೂ ನಡೆದಿರುವುದನ್ನು ಧೈರ್ಯವಾಗಿ ಹೊರಗೆ ಹೇಳಿ. ಕಷ್ಟಪಟ್ಟು, ಬಡತನದಲ್ಲಿ ಓದಿ ಸರ್ಕಾರಿ ಕೆಲಸಕ್ಕೆ ಬಂದಿದ್ದೀರಿ. ಆರೂವರೆ ಕೋಟಿ ಜನರ ತೆರಿಗೆ ಹಣದಿಂದ ನಿಮಗೆ ಸಂಬಳ ಕೊಡಲಾಗುತ್ತಿದ್ದು, ಜನರ ಪರವಾಗಿ ಮಾತನಾಡಿ. ಸರ್ಕಾರದಲ್ಲಿ ನಡೆಯುತ್ತಿರುವ ಕುಕೃತ್ಯಗಳ ಬಗ್ಗೆ ಸತ್ಯ ಹೇಳಿ. ಇಲ್ಲಾದರೂ ಇದಕ್ಕೆ ಅಂತಿಮ ತೆರೆ ಎಳೆಯಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು.

ಚಲುವರಾಯಸ್ವಾಮಿ ಅವರು ತಮ್ಮ ಹೆಸರನ್ನು ಉಲ್ಲೇಖಿಸಿದ ಬಗ್ಗೆ ಪ್ರತಿಕ್ರಿಯಿಸಿ, ಅವರಿಗೆ ನನ್ನದೇ ಚಿಂತೆ ಎಂದರು. ಮಾಜಿ ಶಾಸಕ ಸಿ.ಎಸ್. ಪುಟ್ಟರಾಜು ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರದ ಬಗ್ಗೆ ಮಾತನಾಡಿ, ಪದೆಪದೇ ಪುಟ್ಟರಾಜು ಅವರ ಹೆಸರು ಯಾಕೆ ಹೇಳುತ್ತಿದ್ದಾರೆ?. ತಮ್ಮ ತಪ್ಪುಗಳನ್ನು ಮರೆಮಾಚಿಕೊಳ್ಳಲು, ಹುಳುಕು ಮುಚ್ಚಿಟ್ಟುಕೊಳ್ಳಲು ಕಾಂಗ್ರೆಸ್​ನವರು ಇಂಥ ಕೆಲಸಗಳನ್ನು ಮಾಡುತ್ತಿದ್ದಾರೆ. ಮೊದಲು ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡಿ ನೋಡೋಣ. ಆಗ ನಿಮ್ಮ ಯೋಗ್ಯತೆ ಏನೆಂದು ಅರ್ಥವಾಗುತ್ತದೆ ಎಂದರು.

ಇದನ್ನೂ ಓದಿ : ಶಾಸಕ ಎಸ್​ಟಿ ಸೋಮಶೇಖರ್ ಮುನಿಸು: ಯಶವಂತಪುರ ಮಂಡಲ ಮಾಜಿ ಅಧ್ಯಕ್ಷ ಮಾರೇಗೌಡರನ್ನು ಉಚ್ಛಾಟಿಸಿದ ಬಿಜೆಪಿ

Last Updated : Aug 20, 2023, 6:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.