ETV Bharat / state

ಹಳೆಯ ದಿನಗಳನ್ನು ಸಿದ್ದರಾಮಯ್ಯ ನೆನಪು ಮಾಡಿಕೊಳ್ಳಲಿ: ಇದು %​ ಸರ್ಕಾರ ಎಂದು ಹೆಚ್​ಡಿಕೆ ಆರೋಪ

ಇಂದು ಕಾಂಗ್ರೆಸ್​ನವರು ಅಕ್ಕಿ ಗ್ಯಾರಂಟಿ, ಅಕ್ಕಿ ಭಾಗ್ಯ ಎಂದು ಹೇಳುತ್ತಿದ್ದಾರೆ. ದೇವೇಗೌಡರು ಈ ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ ನೆರವಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

former-cm-hd-kumarswamy-slams-siddaramaih
ಹಳೆಯ ದಿನಗಳನ್ನು ಸಿದ್ದರಾಮಯ್ಯ ನೆನಪು ಮಾಡಿಕೊಳ್ಳಲಿ : ಇದು ಪರ್ಸೆಂಟೇಜ್​ ಸರ್ಕಾರ ಎಂದು ಹೆಚ್​ಡಿಕೆ ಆರೋಪ
author img

By

Published : Jun 22, 2023, 10:26 PM IST

ಬೆಂಗಳೂರು : ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ಅವರ ಸಂಪುಟದಲ್ಲಿ ಸಚಿವರಾಗಿದ್ದ ಇಂದಿನ ಮುಖ್ಯಮಂತ್ರಿಗಳಿಗೆ ಈ ವಿಷಯ ಮರೆತು ಹೋಗಿದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.

ಅಕ್ಕಿ ನೀಡುವ ಗ್ಯಾರಂಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇವತ್ತು ಅಕ್ಕಿ ಗ್ಯಾರಂಟಿ, ಅಕ್ಕಿ ಭಾಗ್ಯ ಎಂದು ಹೇಳುತ್ತಿದ್ದಾರೆ. ಆದರೆ, ದೇವೇಗೌಡರು ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ ನೆರವಿಗೆ ಧಾವಿಸಿದ್ದರು ಎಂದರು.

1995ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಜೆಟ್ ಮಂಡಿಸುತ್ತಾರೆ. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಕೆಜಿಗೆ 4.54 ರೂ. ಇದ್ದ ಅಕ್ಕಿ ದರವನ್ನು ಕೇಂದ್ರ ಸರ್ಕಾರ ಏಕಾಏಕಿ 7.49 ರೂ.ಗಳಿಗೆ ಹೆಚ್ಚಳ ಮಾಡಿತ್ತು. ಆಗ ಮುಖ್ಯಮಂತ್ರಿ ಆಗಿದ್ದ ದೇವೇಗೌಡರು ಧೈರ್ಯ ಮಾಡಿ 30 ರೂಪಾಯಿಗೆ ಕೆಜಿ ಅಕ್ಕಿ ಕೊಡುವಂತೆ ಆದೇಶ ಹೊರಡಿಸಿದರು. ಬಹುಶಃ ಅವರಿಂದಲೇ ರಾಜಕೀಯವಾಗಿ ಬೆಳೆದವರಿಗೆ ಇದು ನೆನಪಿರಲಿಕ್ಕಿಲ್ಲ. ಈಗ ಆಪರೇಶನ್ ಹಸ್ತ ಮಾಡುತ್ತೇವೆ ಎಂದು ಮೀಸೆ ತಿರುವುತ್ತಿದ್ದಾರೆ. ಜನತಾದಳ ಪಕ್ಷವನ್ನು ಮುಗಿಸೋದು ಅಷ್ಟು ಸುಲಭ ಅಲ್ಲ ಎಂದು ಹೇಳಿದರು.

ಮತಕ್ಕಾಗಿ, ಅಧಿಕಾರಕ್ಕಾಗಿ ಅಕ್ಕಿ ಉಚಿತ ಎಂದವರು ಈಗ ಅಕ್ಕಿ ಕೊಡುವ ಮಾತು ಕೊಟ್ಟಿದ್ದ ಇವರು ದೇವೇಗೌಡರ ಬದ್ಧತೆಯನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕು. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಇವರು ಕೊಟ್ಟ ಭರವಸೆ ಈಡೇರಿಸಲಾಗದೆ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಟೀಕಿಸಿದರು.

ಇದು ಪರ್ಸೆಂಟೇಜ್ ಸರ್ಕಾರ : ಇದು ಕೂಡ ಪರ್ಸೆಂಟೆಜ್ ಸರ್ಕಾರ. ನಿಮಗೆ ಅನುಮಾನ ಇದೆಯಾ? ಎಂದು ಮಾಧ್ಯಮಗಳನ್ನು ಪ್ರಶ್ನೆ ಮಾಡಿದ ಕುಮಾರಸ್ವಾಮಿ ಅವರು, ಇದಕ್ಕಾಗಿಯೇ ಎಲ್ಲ ಇಲಾಖೆಗಳಲ್ಲಿ ಸಲಹೆಗಾರರು ಬಂದು ತುಂಬಿಕೊಂಡಿದ್ದಾರೆ. ಇದೆಲ್ಲಾ ಪರ್ಸೆಂಟೇಜ್ ವ್ಯವಸ್ಥೆಗೆ ಮಾಡಿಕೊಂಡಿರುವ ವ್ಯವಸ್ಥೆ ಎಂದು ಕುಟುಕಿದರು.

ನಮ್ಮದು ಸಂಪತ್ಭರಿದ ರಾಜ್ಯ. ಹಣಕ್ಕೆ ಕೊರತೆ ಇಲ್ಲ. ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹ ಆಗುತ್ತಿದೆ. ಇವರು ಘೋಷಣೆ ಮಾಡಿಕೊಂಡು ಒದ್ದಾಡ್ತಾ ಇದ್ದಾರೆ. ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಇವರು ಈಗ ಪರ್ಸೆಂಟೇಜ್ ಬಗ್ಗೆ ತಲೆಕೆಡಿಸಿಕೊಂಡು ಕುಳಿತಿದ್ದಾರೆ. ಇದು ಕೂಡ ಪರ್ಸೆಂಟೇಜ್ ಸರಕಾರವೇ ಆಗಿದೆ ಎಂದು ಅವರು ದೂರಿದರು.

ಅಕ್ಕಿ ತರಲು ರೇಟ್ ಜಾಸ್ತಿ ಮಾಡೋದು ಇವರೇ. ಕಮಿಷನ್ ಗಾಗಿ ರೇಟ್ ಜಾಸ್ತಿ ಮಾಡ್ತಾರೆ. ಕಮಿಷನ್ ಕಡಿಮೆ ಮಾಡಿದರೆ ಅಕ್ಕಿ ದರ ಕಡಿಮೆ ಆಗತ್ತದೆ. ಇವರ ಯೋಜನೆಗೆ ಕೇಂದ್ರದ ಮುಂದೆ ಕೈಚಾಚೋದು ಏಕೆ? ನಾನು ಸಾಲಮನ್ನಾ ಘೋಷಣೆ ಮಾಡಿದಾಗ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಅವರು ಹೇಳಿದರು.

ಸಿಎಂ ಹಿಂದೆ ಸುತ್ತುವ ಸಚಿವರು : ಸರ್ಕಾರ ಬಂದು ಒಂದು ತಿಂಗಳ ಮೇಲಾಯಿತು. ಜನರು ಕಷ್ಟದಲ್ಲಿದ್ದಾರೆ. ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ. ವಿವಿಧ ಇಲಾಖೆಗಳ ಮಂತ್ರಿಗಳು ಇನ್ನೂ ತಮ್ಮ ಇಲಾಖೆಗಳ ಸಭೆಗಳನ್ನೇ ನಡೆಸುತ್ತಿಲ್ಲ. ಮುಖ್ಯಮಂತ್ರಿ ಹಿಂದೆ ಮುಂದೆ ಓಡಾಡಿಕೊಂಡಿದ್ದಾರೆ. ದಿನದ 24 ಗಂಟೆಯೂ ಮುಖ್ಯಮಂತ್ರಿ ಜತೆ ಇವರಿಗೇನು ಕೆಲಸ. ಸಿಎಂ ಮನೆಯಲ್ಲೂ ಇವರೇ, ಸಿಎಂ ಕಚೇರಿಯಲ್ಲೂ ಇವರೇ, ಸಿಎಂ ದಿಲ್ಲಿಗೆ ಹೋದರೆ ಅಲ್ಲೂ ಇವರೇ. ಎನ್ ನಡೀತಿದೆ ಇಲ್ಲಿ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ : ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿದರೆ ಶಿಸ್ತು ಕ್ರಮ: ಕೆಎಸ್ಆರ್​ಟಿಸಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.