ETV Bharat / state

ಗ್ಯಾರಂಟಿ ನಂಬರ್ ಆರು.. ಕತ್ತಲೆಭಾಗ್ಯ : ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು... ಹೆಚ್​ಡಿಕೆ ಕಿಡಿ

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರವು ಐದು ಗ್ಯಾರಂಟಿಗಳ ಜೊತೆಗೆ 6ನೇ ಗ್ಯಾರಂಟಿ ಕತ್ತಲಭಾಗ್ಯವನ್ನು ನೀಡಲು ಮುಂದಾಗಿದೆ ಎಂದು ಹೆಚ್​ಡಿಕೆ ಲೇವಡಿ ಮಾಡಿದ್ದಾರೆ.

former-cm-hd-kumarswamy-slams-state-govt
ಗ್ಯಾರಂಟಿ ನಂಬರ್ ಆರು..ಕತ್ತಲೆಭಾಗ್ಯ : ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು!! - ಹೆಚ್​ಡಿಕೆ ಕಿಡಿ
author img

By ETV Bharat Karnataka Team

Published : Oct 10, 2023, 10:52 AM IST

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ. ಜೊತೆಗೆ ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ ಕೊಡಲು ಸಿದ್ಧತೆ ನಡೆಸಿದೆ. ಅದರ ಹೆಸರು ಕತ್ತಲೆ ಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆ ಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ. ಇದು ಸತ್ಯ ಎಂದಿದ್ದಾರೆ.

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಕಳ್ಳಾಟ : ಕಾವೇರಿ ಬಗ್ಗೆ ಸರ್ಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಃಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು ಎಂದು ಕಿಡಿಕಾರಿದ್ದಾರೆ.

ರೈತನ ಬೆನ್ನಿಗೆ ಬರೆ ಎಳೆಯುತ್ತಿದೆ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್​​ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಟೀಕಿಸಿದ್ದಾರೆ.

ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರ್ಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕಾಂಗ್ರೆಸ್ ಸರ್ಕಾರ ಕರುನಾಡನ್ನು ಬರ್ಬಾದ್ ಮಾಡಲಿದೆ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಎಂದು ವ್ಯಂಗ್ಯವಾಡಿದ್ದಾರೆ.

ಆರನೇ ಗ್ಯಾರಂಟಿ ಕತ್ತಲ ಭಾಗ್ಯ : ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ!! ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆ ಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರ್ಕಾರದ ಉತ್ತರವೇನು? ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.

ಇದನ್ನೂ ಓದಿ : ಕೇಂದ್ರದಿಂದ ವಿದ್ಯುತ್ ನಿಲ್ಲಿಸಿದ್ದು ರಾಜ್ಯದಲ್ಲಿ ವಿದ್ಯುತ್ ಅಭಾವಕ್ಕೆ ಕಾರಣ: ಸಚಿವ ಸತೀಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.