ETV Bharat / state

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು: ಹೆಚ್​ಡಿಕೆ ಒತ್ತಾಯ

ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Former CM HDK Tweet
ಹೆಚ್​ಡಿಕೆ ಒತ್ತಾಯ
author img

By

Published : Jun 30, 2020, 2:15 PM IST

Updated : Jun 30, 2020, 2:58 PM IST

ಬೆಂಗಳೂರು: ಲಾಕ್​ಡೌನ್​ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ತುರ್ತು ನೆರವಿಗೆ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಕೊರೊನಾ ಹಾವಳಿ ಹೆಚ್ಚಾದ ಬಳಿಕ ಶಾಲಾ ಕಾಲೇಜುಗಳು ಬಂದ್​ ಆಗಿವೆ. ಸರ್ಕಾರದ ವೇತನದಿಂದಲೇ ಜೀವನ ಸಾಗಿಸುತ್ತಿದ್ದ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ಈಗ ಕುಟುಂಬ ನಿರ್ವಹಣೆ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

Last Updated : Jun 30, 2020, 2:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.