ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಫಲ್ಯದ ಬಗ್ಗೆ ಟ್ವೀಟ್ ಮಾಡಿರುವ ಅವರು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೇ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
-
ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ.
— H D Kumaraswamy (@hd_kumaraswamy) April 29, 2021 " class="align-text-top noRightClick twitterSection" data="
1/10
">ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ.
— H D Kumaraswamy (@hd_kumaraswamy) April 29, 2021
1/10ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ.
— H D Kumaraswamy (@hd_kumaraswamy) April 29, 2021
1/10
ದೇಶದ ಕೋಟ್ಯಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು. ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರ್ಕಾರ ಬಿಡಬೇಕು ಎಂದು ಹೆಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ" ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು?. ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ? ಎಂಬ ಅಂಕಿ - ಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ ಎಂದು ಆಗ್ರಹಿಸಿದ್ದಾರೆ.
-
Karnataka has close to 7 crore population of which the population of persons in the age group 18-44 is about 37 percent making it the largest chunk at 2.59 crore. At two jabs a person we would need 5.19 crore vaccine doses.
— H D Kumaraswamy (@hd_kumaraswamy) April 29, 2021 " class="align-text-top noRightClick twitterSection" data="
1/5
">Karnataka has close to 7 crore population of which the population of persons in the age group 18-44 is about 37 percent making it the largest chunk at 2.59 crore. At two jabs a person we would need 5.19 crore vaccine doses.
— H D Kumaraswamy (@hd_kumaraswamy) April 29, 2021
1/5Karnataka has close to 7 crore population of which the population of persons in the age group 18-44 is about 37 percent making it the largest chunk at 2.59 crore. At two jabs a person we would need 5.19 crore vaccine doses.
— H D Kumaraswamy (@hd_kumaraswamy) April 29, 2021
1/5
18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ ಎಂದು ಹೆಚ್ಡಿಕೆ ಟೀಕಿಸಿದ್ದಾರೆ.
ದೇಶದಾದ್ಯಂತ ಕೊರೊನಾ ಸೋಂಕಿತರು ಬೆಡ್, ಆಕ್ಸಿಜನ್, ಆ್ಯಂಬುಲೆನ್ಸ್, ಔಷಧಗಳಿಲ್ಲದೆ ಪರದಾಡುತ್ತಿದ್ದಾರೆ. ಸತ್ತವರ ಅಂತ್ಯಸಂಸ್ಕಾರಕ್ಕೂ ಪಾಳಿಯಲ್ಲಿ ನಿಲ್ಲಬೇಕಾದ ವ್ಯವಸ್ಥೆ ಸೃಷ್ಟಿಸಿದ ಕೇಂದ್ರ - ರಾಜ್ಯ ಸರ್ಕಾರಗಳ ದಯನೀಯ ವೈಫಲ್ಯದ ಬಗ್ಗೆ ದೇಶದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ.
ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರುಗಳು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದರ ಜೊತೆಗೆ 'ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ..' ಎಂಬ ವಚನವನ್ನು ಉಲ್ಲೇಖಿಸಿ ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಉಡಾಫೆ ಧೋರಣೆ ತಳೆಯುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.