ಶಿವಮೊಗ್ಗ: ಭದ್ರಾವತಿಯ ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಅಪ್ಪಾಜಿ ಗೌಡ್ರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀರಾ ಬೇಸರವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೆನೆ ಎಂದಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಅಪ್ಪಾಜಿ ಗೌಡರ ನಿಧನದಿಂದ ಪಕ್ಷಕ್ಕೆ ಭದ್ರಾವತಿಯಲ್ಲಿ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ. ಅಪ್ಪಾಜಿ ಗೌಡ ನಿಧನಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ, ಶಾರದಾ ಪೂರ್ಯ ನಾಯ್ಕ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ.ಶ್ರೀಕಾಂತ್ ಸಂತಾಪ ಸೂಚಿಸಿದ್ದಾರೆ.