ETV Bharat / state

ಉದ್ಧವ್​ ಠಾಕ್ರೆ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ: ಹೆಚ್​ಡಿಕೆ - Former CM Kumaraswamy slams on Udhav Thakre news

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್​ ಠಾಕ್ರೆ ಇಂಥ ಮಾತುಗಳನ್ನಾಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್‌ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ್​ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Former CM Kumaraswamy slams on Udhav Thakre
ಉದ್ಧವ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ- ಹೆಚ್​ಡಿಕೆ
author img

By

Published : Jan 18, 2021, 12:49 PM IST

Updated : Jan 18, 2021, 2:43 PM IST

ಬೆಂಗಳೂರು: ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್​ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂತಹ ವಿಸ್ತರಣಾವಾದ ಸೌಹಾರ್ದತೆಗೆ ಧಕ್ಕೆ ತರಲಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಬಹುತೇಕ ಕನ್ನಡಿಗ ರಾಜರು ಮಹಾರಾಷ್ಟ್ರದ ಬಹುಪಾಲನ್ನು ಆಗಲೇ ಆಳಿದ್ದಾರೆ. ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಉದ್ಧವ್​ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ ಎಂದು ಹೆಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್​ ಠಾಕ್ರೆ ಇಂಥ ಮಾತುಗಳನ್ನಾಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್‌ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ್​ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

  • ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ.
    1/7

    — H D Kumaraswamy (@hd_kumaraswamy) January 18, 2021 " class="align-text-top noRightClick twitterSection" data=" ">

ಗಡಿ ವಿವಾದದಲ್ಲಿ ಮಹಾಜನ್ ಆಯೋಗದ ತೀರ್ಪು ಅಂತಿಮ. ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ದೇಶದ್ರೋಹಿ ಕೃತ್ಯ ಎಂದೆನ್ನಬೇಕಾಗುತ್ತದೆ. ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ್​ ಠಾಕ್ರೆಗೆ ತಿಳಿಯಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ನೆಲ-ಜಲ-ಭಾಷೆಯ ರಕ್ಷಣೆ ವಿಚಾರದಲ್ಲಿ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ: ಸಿದ್ದರಾಮಯ್ಯ

ಬೆಳಗಾವಿ ಸಾಂಸ್ಕೃತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು. ಬೆಳಗಾವಿಯ ಬಗ್ಗೆ ಪದೇ ಪದೆ ಕಿತಾಪತಿ ಮಾಡುವ ಎಂಇಎಸ್‌ ಮತ್ತು ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ಕೊಡಬೇಕೆಂದೇ ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು. ಅದು, ಬೆಳಗಾವಿ ನಮ್ಮ ಅವಿಭಾಜ್ಯ ಅಂಗ ಎಂಬುದರ ದ್ಯೋತಕ ಎಂಬುದನ್ನು ಠಾಕ್ರೆ ಅರಿಯಲಿ. ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರ ಎಂದಿದ್ದಾರೆ.

ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ. ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ-ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ ಎಂದು ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಇದು ಭಯೋತ್ಪಾಕ ಹೇಳಿಕೆ ಅಂತಾ ಅನಿಸುತ್ತದೆ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ದ್ವೇಷದ, ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಮುಖ್ಯಮಂತ್ರಿಗಳು ಚೀನಾ ಮತ್ತು ಪಾಕ್ ಆಕ್ರಮಿತ ಹೇಳಿಕೆ ನೀಡಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿ ಇರುವವರು ಹೀಗೆ ಹೇಳಿಕೆ ಕೊಡಬಾರದು‌. ಇದು ಭಯೋತ್ಪಾಕ ಹೇಳಿಕೆ ಅಂತಾ ಅನಿಸುತ್ತದೆ. ಕುಚೋದ್ಯದ ಹೇಳಿಕೆಗಳಿಗೆ ಪೂರ್ಣ ವಿರಾಮ ಹಾಕಬೇಕು ಎಂದಿದ್ದಾರೆ.

2006ರಲ್ಲಿ ನಾನು ಸಿಎಂ ಆಗಿದ್ದಾಗ ಶಿವರಾಜ್ ಪಾಟೀಲ್ ಗೃಹ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಬೆಳಗಾವಿ, ಮಹಾರಾಷ್ಟ್ರಕ್ಕೆ ಸೇರಿಸಲು ಒತ್ತಡ ಹಾಕಿದ್ದರು. ಸುವರ್ಣಸೌಧ ಕಟ್ಟಿ, ಬೆಳಗಾವಿ ಅಧಿವೇಶನ ಮಾಡಲಾಯಿತು. ನಂತರ ಬಂದ ಸರ್ಕಾರಗಳು ಅದನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಬೆಳಗಾವಿಯಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡದವರು ಕನ್ನಡ ದ್ರೋಹಿಗಳು ಎಂದು ಹೆಚ್​ಡಿಕೆ ಕಿಡಿಕಾರಿದರು.

Last Updated : Jan 18, 2021, 2:43 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.