ಬೆಂಗಳೂರು : ಕೇಂದ್ರ ಸರ್ಕಾರ ಮೂರು ತಿಂಗಳು ಬಾಡಿಗೆ ವಿನಾಯಿತಿ ಘೋಷಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕೊರೊನಾ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರ್ಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಪ್ರಧಾನಿ ಮೋದಿ ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.
-
ಆರ್ಥಿಕ ಚಟುವಟಿಕೆ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಅಂತ ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾದ್ದರಿಂದ,ಕೇಂದ್ರ ಸರಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು.@PMOIndia
— H D Kumaraswamy (@hd_kumaraswamy) April 12, 2020 " class="align-text-top noRightClick twitterSection" data="
">ಆರ್ಥಿಕ ಚಟುವಟಿಕೆ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಅಂತ ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾದ್ದರಿಂದ,ಕೇಂದ್ರ ಸರಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು.@PMOIndia
— H D Kumaraswamy (@hd_kumaraswamy) April 12, 2020ಆರ್ಥಿಕ ಚಟುವಟಿಕೆ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಅಂತ ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾದ್ದರಿಂದ,ಕೇಂದ್ರ ಸರಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು.@PMOIndia
— H D Kumaraswamy (@hd_kumaraswamy) April 12, 2020
ದೆಹಲಿ, ಮುಂಬೈ, ಬೆಂಗಳೂರಿನಂತಹ ನಗರಗಳಲ್ಲಿ ವೃತ್ತಿ ಮಾಡುವ ಹಾಗೂ ಇಲ್ಲಿನ ಸಂಸ್ಥೆಗಳಲ್ಲಿ ಓದುತ್ತಿರುವ ಅನೇಕ ಜನರ ಆರ್ಥಿಕ ಸ್ಥಿತಿ ನಾಜೂಕಾಗಿದೆ. ಇಂತಹ ಸಂದರ್ಭದಲ್ಲಿ ಮನೆ, ಪಿಜಿ, ಹಾಸ್ಟೆಲ್ ಮಾಲೀಕರು ಎಂದಿನಂತೆ ಬಾಡಿಗೆ ವಸೂಲಿಗೆ ಇಳಿಯದೆ ಉದಾರತೆ ತೋರಲಿ. ಸರ್ಕಾರ ಬಾಡಿಗೆ ವಿನಾಯಿತಿ ಘೋಷಿಸಿ ಜನ ಸಾಮಾನ್ಯನ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ
ಆರ್ಥಿಕ ಚಟುವಟಿಕೆ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಎಂದು ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದೆ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾದ್ದರಿಂದ, ಕೇಂದ್ರ ಸರ್ಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.