ETV Bharat / state

ಯಡಿಯೂರಪ್ಪ ಮೃತ ಹೋರಾಟಗಾರ ಕುಟುಂಬಗಳ ಕ್ಷಮೆಯಾಚಿಸಬೇಕು.. ಹೆಚ್​ಡಿಕೆ ಟ್ವೀಟ್​ - ಬಿಎಸ್​ವೈ ಮೇಲೆ ಕುಮಾರಸ್ವಾಮಿ ಆಕ್ರೋಶ

ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದು ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೈತಿಕ ಹೊಣೆ ಹೊತ್ತ ಕೂಡಲೇ ಮೃತ ಹೋರಾಟಗಾರರ ಕುಟುಂಬಗಳ ಕ್ಷಮೆಯಾಚಿಸಬೇಕೆಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Former  CM  Kumaraswamy  T
ಯಡಿಯೂರಪ್ಪ ಮೃತ ಹೋರಾಟಗಾರ ಕುಟುಂಬಗಳ ಕ್ಷಮೆಯಾಚಿಸಬೇಕು : ಹೆಚ್​ಡಿಕೆ ಟ್ವೀಟ್​
author img

By

Published : Dec 20, 2019, 5:06 PM IST

ಬೆಂಗಳೂರು : ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದು ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೈತಿಕ ಹೊಣೆ ಹೊತ್ತು ಕೂಡಲೇ ಮೃತ ಹೋರಾಟಗಾರರ ಕುಟುಂಬಗಳ ಕ್ಷಮೆಯಾಚಿಸಬೇಕೆಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

  • ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದ, ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಬಿಎಸ್ವೈ ನೈತಿಕ ಹೊಣೆಗಾರಿಕೆ ಅರಿತು ಈ ಕೂಡಲೇ ಮೃತ ಹೋರಾಟಗಾರ ಕುಟುಂಬಗಳ ಕ್ಷಮೆ ಕೋರಬೇಕು. #Mangaluru
    (3/4)

    — H D Kumaraswamy (@hd_kumaraswamy) December 20, 2019 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ ಎಸ್ ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು 'ಅನರ್ಹ ಅಧಿಕಾರದ' ಮದ ಮರೆಸಿದಂತಿದೆ. ಅವರ ಹೋರಾಟಗಳನ್ನು ಹಿಂದಿನ ಸರ್ಕಾರಗಳು ಬಂದೂಕು, ಗುಂಡುಗಳಿಂದ ಹತ್ತಿಕ್ಕಿದ್ದವೇ? ಹೀಗಿದ್ದೂ, ಹೋರಾಟಗಳ ಮೇಲೆ ಯಡಿಯೂರಪ್ಪನವರಿಗೆ ಏಕೆ ಇಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರದ ಅಮಲಿನಲ್ಲಿರುವ ದಾಹ ಕ್ರೌರ್ಯಕ್ಕೆ ಪ್ರಜೆಗಳ ಹೆಣಗಳು ತೋರಣದಂತೆ ಕಟ್ಟಲ್ಪಡುತ್ತಿರುತ್ತವೆ. ಅಧಿಕಾರ ಹಪಾಹಪಿಗಳು ಸಾವಿನ ದಳ್ಳಾಳಿಗಳಾಗುತ್ತಾರೆ. ಇಂತವರೇ ತುಂಬಿರುವ ಜನವಿರೋಧಿ ಪ್ರಭುತ್ವ ಅಂತ್ಯಕಾಲ ಸಮೀಪಿಸಿದೆ ಎಂದು ಟೀಕಿಸಿದ್ದಾರೆ.

"ಫೈರ್ ಮಾಡಿದೆವು, ಒಂದು ಗುಂಡೂ ಬೀಳಲಿಲ್ವ, ಒಬ್ಬರೂ ಸಾಯಲಿಲ್ವ" ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು‌ ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು, ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೊರಬೇಕು ಎಂದು ಆಗ್ರಹಿಸಿದ್ದಾರೆ.

Intro:ಬೆಂಗಳೂರು : ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದು ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನೈತಿಕ ಹೊಣೆ ಹೊತ್ತು ಕೂಡಲೇ ಮೃತ ಹೋರಾಟಗಾರರ ಕುಟುಂಬಗಳ ಕ್ಷಮೆಯಾಚಿಸಬೇಕೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಅವರು, ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ಅವರು ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು ಮರೆಯಬಾರದು ಎಂದು ಹೇಳಿದ್ದಾರೆ.
ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು 'ಅನರ್ಹ ಅಧಿಕಾರದ ' ಮದ ಮರೆಸಿದಂತಿದೆ. ಅವರ ಹೋರಾಟಗಳನ್ನು ಹಿಂದಿನ ಸರ್ಕಾರಗಳು ಬಂದೂಕು, ಗುಂಡುಗಳಿಂದ ಹತ್ತಿಕ್ಕಿದ್ದವೇ? ಹೀಗಿದ್ದೂ, ಹೋರಾಟಗಳ ಮೇಲೆ ಯಡಿಯೂರಪ್ಪನವರಿಗೆ ಏಕೆ ಇಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.
ಅಧಿಕಾರದ ಅಮಲಿನಲ್ಲಿರುವ ದಾಹ ಕ್ರೌರ್ಯಕ್ಕೆ ಪ್ರಜೆಗಳ ಹೆಣಗಳು ತೋರಣದಂತೆ ಕಟ್ಟಲ್ಪಡುತ್ತಿರುತ್ತವೆ. ಅಧಿಕಾರ ಹಪಾಹಪಿಗಳು ಸಾವಿನ ದಳ್ಳಾಳಿಗಳಾಗುತ್ತಾರೆ. ಇಂತವರೇ ತುಂಬಿರುವ ಜನವಿರೋಧಿ ಪ್ರಭುತ್ವ ಅಂತ್ಯಕಾಲ ಸಮೀಪಿಸಿದೆ ಎಂದು ಟೀಕಿಸಿದ್ದಾರೆ.
"ಫೈರ್ ಮಾಡಿದೆವು, ಒಂದು ಗುಂಡೂ ಬೀಳ್ಲಿಲ್ವಲ, ಒಬ್ಬರೂ ಸಾಯಲಿಲ್ವಲ" ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು‌ ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೊರಬೇಕು ಎಂದು ಆಗ್ರಹಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.