ETV Bharat / state

ನೀವು ಬಿಜೆಪಿ ಸಂಸದರಾಗುವುದಕ್ಕೂ ಮೊದಲು ಕನ್ನಡಿಗ: ತೇಜಸ್ವಿ ಸೂರ್ಯಗೆ ಹೆಚ್​ಡಿಕೆ ಟ್ವೀಟ್​ ಬಾಣ

ಸಂಸದರೇ, ಹಾಗೊಂದು ವೇಳೆ ಸುಳ್ಳಿನ ಟ್ವೀಟ್‌ ಡಿಲಿಟ್‌ ಮಾಡುವುದಿದ್ದರೆ ನಿಮ್ಮ ಇಡೀ ಟ್ವಿಟರ್‌ ಖಾತೆಯನ್ನೇ ಡಿಲೀಟ್ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.

author img

By

Published : May 13, 2021, 5:21 PM IST

Former CM Kumaraswamy tweet war against MP Tejasvi Surya
ತೇಜಸ್ವಿ ಸೂರ್ಯಗೆ ಕುಮಾರಸ್ವಾಮಿ ಟ್ವೀಟ್​ ಬಿಸಿ

ಬೆಂಗಳೂರು: ಕನ್ನಡಿಗರಿಗೆ ಆಗುತ್ತಿರುವ ತಾರತಮ್ಯವನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾಡಿದ ಟ್ವೀಟ್‌ಅನ್ನು ಸುಳ್ಳು ಎಂದಿರುವ ಸಂಸದ ತೇಜಸ್ವಿ ಸೂರ್ಯಗೆ ಟ್ವೀಟ್​ ಮೂಲಕವೇ ಹೆಚ್​ಡಿಕೆ ತಿರುಗೇಟು ನೀಡಿದ್ದಾರೆ.

ಟ್ವೀಟ್​ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಚುನಾವಣೆಗಳಲ್ಲಿ ನೀವು ಹೇಳಿದ ಸುಳ್ಳುಗಳು, ಕೊಟ್ಟ ಆಶ್ವಾಸನೆ, ಆತ್ಮರತಿ, ಕೋಮು ಭಾವನೆ ಕೆರಳಿಸಲು ನೀವು ಆಡಿದ ಮಾತುಗಳು, ತಿರುಚಿದ ಇತಿಹಾಸಗಳು ಒಂದೇ, ಎರಡೇ. ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದರೇ, ನಿಮ್ಮ ಇಡೀ ಟ್ವಿಟರ್‌ ಖಾತೆ ಇಂಥ ಸುಳ್ಳುಗಳಿಂದ ತುಂಬಿದೆ. ಹಾಗಾದರೆ ಡಿಲೀಟ್‌ ಆಗಬೇಕಾದ್ದು ನಿಮ್ಮ ಟ್ವೀಟ್‌ಗಳೋ ಕುಮಾರಸ್ವಾಮಿ ಅವರದ್ದೋ ಎಂದು ಟೀಕಿಸಿದ್ದಾರೆ. ಬೆಡ್‌ ಬ್ಲಾಕಿಂಗ್‌ ದಂಧೆಯನ್ನು ಬಯಲಿಗೆಳೆದ ನಾಟಕವಾಡುವಾಗ ನೀವು ಅಪರಾಧಿಯನ್ನೇ ಪಕ್ಕದಲ್ಲಿ ಇಟ್ಟುಕೊಂಡಿರಲಿಲ್ಲವೇ, ಪಟ್ಟಿಯಲ್ಲಿರುವ ಸಿಬ್ಬಂದಿ ಹೆಸರುಗಳನ್ನು ಮರೆಮಾಚಿ ಮಾತನಾಡಲಿಲ್ಲವೇ. ಅಡಿಗಡಿಗೂ ಸುಳ್ಳು ನುಡಿಯುವ, ಅಪದ್ಧ ಮಾತಾಡುವ ನಿಮ್ಮಿಂದ ಕುಮಾರಸ್ವಾಮಿ ಸತ್ಯ-ಸುಳ್ಳುಗಳ ಪಾಠ ಕಲಿಯಬೇಕೆ ಎಂದು ಪ್ರಶ್ನಿಸಿದ್ದಾರೆ.

ಓದಿ:ಮಕ್ಕಳಿಗೆ ಕೋವಿಡ್​ ರೂಪಾಂತರಿ ವೈರಸ್​ ಸೋಂಕು.. ವೈದ್ಯರೇನಂತಾರೆ?

ಕುಮಾರಸ್ವಾಮಿ ಇಂದು ಮಾಡಿರುವ ಟ್ವೀಟ್‌ಗೆ @PIB_India ನೀಡಿದ ಮಾಹಿತಿಯೇ ಆಧಾರ. ಅಲ್ಲಿರುವ ಅಂಶಗಳನ್ನು ಬಿಟ್ಟು ಬೇರೆ ಅಂಶಗಳನ್ನು ಕುಮಾರಸ್ವಾಮಿ ಪ್ರಸ್ತಾಪಿಸಿಲ್ಲ. ಅಲ್ಲದೆ, ಇಂದು ನೀವು ನೀಡಿರುವ ಮಾಹಿತಿ ಅಸ್ಪಷ್ಟವಾಗಿದೆ. ನಿಮ್ಮ ಟ್ವೀಟ್‌ನಲ್ಲಿರುವ ಅಂಕಿ ಅಂಶಗಳನ್ನು ಕನ್ನಡಿಗರಿಗೆ ಕನ್ನಡದಲ್ಲಿ ವಿವರಿಸಿ ಹೇಳಿ ಎಂದಿದ್ದಾರೆ. ಬಿಜೆಪಿಯ ಮರ್ಜಿಯಿಂದ ನೀವೂ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದು ಗೊತ್ತಿರುವ ವಿಚಾರ. ಪಕ್ಷಕ್ಕೆ ಋಣ ಸಂದಾಯ ಮಾಡುವುದಕ್ಕಾಗಿ ಕನ್ನಡಿಗರನ್ನೇ ಮರೆಯುವುದು ಸರಿಯಲ್ಲ ಸಂಸದರೇ. ನೀವು ಬಿಜೆಪಿ ಸಂಸದರಾಗುವುದಕ್ಕೂ ಮೊದಲು ಕನ್ನಡಿಗ. ಅದನ್ನು ಮರೆಯಬೇಡಿ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತಾಡಿ. ನಿಜವಾದ ಕನ್ನಡಿಗ ಎನಿಸಿಕೊಳ್ಳಿ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.