ಬೆಂಗಳೂರು: ರಾಜ್ಯ ರಾಜಧಾನಿಗೆ ಹೊಂದಿಕೊಂಡಿರುವ ರಾಮನಗರ ಜಿಲ್ಲೆಯಲ್ಲಿ ಕೊರೊನಾ ತಡೆಯಲು ಲಾಕ್‌ಡೌನ್ ಮಾಡುವಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಸಂಬಂಧ ಕಂದಾಯ ಸಚಿವ ಆರ್. ಅಶೋಕ್, ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದ ಎಚ್‌ಡಿಕೆ ಲಾಕ್‌ಡೌನ್ ಅಗತ್ಯತೆಯನ್ನು ವಿವರಿಸಿದ್ದಾರೆ.
ಈಗಾಗಲೇ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕುಗಳಿಗಿಂತಲೂ ಅಧಿಕ ಸೋಂಕಿನ ಪ್ರಕರಣಗಳನ್ನು ಹೊಂದಿರುವ ರಾಮನಗರ ಜಿಲ್ಲೆಯನ್ನು ಲಾಕ್‌ಡೌನ್ ಮಾಡಲೇಬೇಕಾಗಿರುವುದು ಅಗತ್ಯವಿದೆ ಎಂದು ಎಚ್‌ಡಿಕೆ ಪ್ರತಿಪಾದಿಸಿದ್ದಾರೆ.