ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣದೊಂದು ಶಸ್ತ್ರಚಿಕಿತ್ಸೆಗಾಗಿ ಹೆಚ್ಎಎಲ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲವ್ಯಾಧಿ ಸಂಬಂಧ ಇಂದು ಶಸ್ತ್ರಚಿಕಿತ್ಸೆ ನಡೆಯಲಿದ್ದು, ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಬಳಿಕ ನಾಲ್ಕು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಜೊತೆಗೆ ಪತ್ನಿ, ಪುತ್ರ ಆಸ್ಪತ್ರೆಗೆ ತೆರಳಿದ್ದಾರೆ.
ಇದನ್ನೂ ಓದಿ: 'ಮುಂದಿನ ಮುಖ್ಯಮಂತ್ರಿ' ಎಂದು ಬರೆದಿದ್ದ 75 ಕೆಜಿ ಕೇಕ್ ಕತ್ತರಿಸಿದ ಸಿದ್ದರಾಮಯ್ಯ