ETV Bharat / state

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ದುರದೃಷ್ಟಕರ: ಸಿದ್ದರಾಮಯ್ಯ ಅಸಮಾಧಾನ

author img

By

Published : Sep 30, 2020, 5:38 PM IST

ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಿಬಿಐ ನ್ಯಾಯಾಲದ ತೀರ್ಪು ದುರದೃಷ್ಟಕರ ಎಂದಿದ್ದಾರೆ.

Former CM Siddaramaiah Reaction on Babri demolition case verdict
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ತೀರ್ಪಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ. ನ್ಯಾಯಾಲಯ 2019 ರ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ ಎಂದಿದ್ದಾರೆ.

  • ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ.

    ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ.
    1/3#BabriDemolitionCase

    — Siddaramaiah (@siddaramaiah) September 30, 2020 " class="align-text-top noRightClick twitterSection" data=" ">

'ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ' ಎಂದು 2019 ನವೆಂಬರ್ 9 ರ ಸುಪ್ರಿಂ ಕೋರ್ಟ್ ತೀರ್ಪು ಹೇಳಿದೆ. ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ ಎಂದು ಹೇಳಿದ್ದಾರೆ.

ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಬಾಬರಿ ಮಸೀದಿ ಧ್ವಂಸ ಮಾಡಿದ ಅಪರಾಧಿಗಳನ್ನು ಶಿಕ್ಷೆಗೊಳಪಡಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.