ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ದೃಢಪಟ್ಟಿದೆ. ಈ ವಿಚಾರವನ್ನು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ನಲ್ಲಿದ್ದು ಮುಂಜಾಗೃತೆ ವಹಿಸಿ ಎಂದು ಮನವಿ ಮಾಡಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಇಂದು ಕೊರೊನಾ ಟೆಸ್ಟ್ ಮಾಡಿಸಿದ್ದ, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.