ETV Bharat / state

ಶಿಕ್ಷಣ ಇಲಾಖೆ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿಎಂಗೆ ಸಿದ್ದರಾಮಯ್ಯ ಒತ್ತಾಯ - ಸಿದ್ದರಾಮಯ್ಯ ಟ್ವೀಟ್

ಶಿಕ್ಷಣ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

former-cm-siddaramaiah-tweet-against-state-govt
ಶಿಕ್ಷಣ ಇಲಾಖೆ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿಎಂಗೆ ಸಿದ್ದರಾಮಯ್ಯ ಒತ್ತಾಯ
author img

By

Published : Sep 4, 2022, 8:39 PM IST

Updated : Sep 4, 2022, 9:58 PM IST

ಬೆಂಗಳೂರು : ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ರನ್ನು 'ಭಕ್ಷಣಾ ಸಚಿವ' ಎಂದು ಲೇವಡಿ ಮಾಡಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸರಣಿ ಟ್ವೀಟ್ ಮೂಲಕ ಸಚಿವರನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಆರ್ ಎಸ್ ಎಸ್ ನಲ್ಲಿ ತರಬೇತಿ ಪಡೆದು ಬಂದಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ರಾಜ್ಯ ಶಿಕ್ಷಣ ಸಚಿವರಾದಂದಿನಿಂದ ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿರುವ ಕತೆ ಒಂದೊಂದಾಗಿ ಹೊರಬೀಳುತ್ತಿವೆ. ಪಠ್ಯಪುಸ್ತಕಗಳ ವಿವಾದದ ಮರೆಯಲ್ಲಿ ಇಲ್ಲಿ ನಡೆಯುತ್ತಿರುವುದು ಲಂಚಾವತಾರದ ಕುಣಿದಾಟ. ಇದು ಶಿಕ್ಷಣವೋ? ಭಕ್ಷಣೆಯೋ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

former-cm-siddaramaiah-tweet-against-state-govt
ಸಿದ್ದರಾಮಯ್ಯ ಟ್ವೀಟ್

ಪ್ರಾರಂಭದಿಂದಲೇ ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಕೇಳಿ ಬರುತ್ತಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಈಗ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯು ಪುರಾವೆಗಳನ್ನು ನೀಡಿದೆ. ಈ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆಯಂತೆ ಎಂದು ಹೇಳಿದ್ದಾರೆ.

ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗುತ್ತಿಲ್ಲ. ಲಂಚ ಪಡೆದು ಖಾಸಗಿ ಶಾಲೆಗಳಿಗೆ ಅಕ್ರಮವಾಗಿ ಅನುಮತಿ ನೀಡುವ ಇಲಾಖೆಯೇ, ಮತ್ತೆ ಅಕ್ರಮ ಎಸಗಿದ ಆರೋಪದ ಮೇಲೆ ದುಡ್ಡು ವಸೂಲಿ ಮಾಡುತ್ತಿದೆ. ಎಂಥಾ ಅದ್ಭುತ ಪ್ಲಾನ್? ಸರ್ಕಾರದ ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ಶಿಕ್ಷಣ ಹಕ್ಕಿನ ಕಾಯ್ದೆಯನ್ನೂ ರಾಜ್ಯ ಶಿಕ್ಷಣ ಇಲಾಖೆ ಹಳ್ಳ ಹಿಡಿಸಿದೆ. 2012ರಲ್ಲಿ ಆರ್ ಟಿ ಇ ಫಲಾನುಭವಿ ವಿದ್ಯಾರ್ಥಿಗಳು 1.20 ಲಕ್ಷ, ಈಗ ಈ ವಿದ್ಯಾರ್ಥಿಗಳ ಸಂಖ್ಯೆ 7 ಸಾವಿರಕ್ಕೆ ಇಳಿದಿದೆ. ಖಾಸಗಿ ಶಾಲೆಗಳಿಗೆ ರಾಜ್ಯ ಬಿಜೆಪಿ ಸರ್ಕಾರದಿಂದಲೇ ಬೆಂಬಲವೇ ಎಂದು ಪ್ರಶ್ನಿಸಿದ್ದಾರೆ.

ಆರ್ ಟಿ ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ಬಿಜೆಪಿ ಸರ್ಕಾರ ಸುಮಾರು ರೂ.900 ಕೋಟಿ ಬಾಕಿ ಪಾವತಿಸಬೇಕಂತೆ. ಶಿಕ್ಷಣ ಸಚಿವರು 40% ಕಮಿಷನ್ ಲೆಕ್ಕ ಹಾಕುತ್ತಿರುವಂತೆ ಕಾಣುತ್ತಿದೆ. ಕಮಿಷನ್ ಎಂಬ ಸಾಂಕ್ರಾಮಿಕ ರೋಗ ಶಿಕ್ಷಣ ಇಲಾಖೆಯನ್ನೂ ರೋಗಗ್ರಸ್ತ ಗೊಳಿಸಿದೆ.ಶಿಕ್ಷಣ ಸಚಿವರು ತಮ್ಮ ಇಲಾಖೆಯ ಲಂಚಾವತಾರದ ಕಡೆಗಿನ ಜನರ ಗಮನ ಬೇರೆ ಕಡೆ ಸೆಳೆಯಲಿಕ್ಕಾಗಿಯೇ ಪಠ್ಯಪುಸ್ತಕ, ಭಗವದ್ಗೀತೆ, ಮದರಸಾಕ್ಕೆ ಸಂಬಂಧಿಸಿದ ವಿವಾದ ಹುಟ್ಟುಹಾಕುತ್ತಿದ್ದಾರೆ. ಲಂಚಕೋರರಿಗೆ ಮುಖ ಮರೆಸಿಕೊಳ್ಳಲು ಹಿಂದುತ್ವ ಒಂದು ಮುಖವಾಡ ಎಂದಿದೆ ಎಂದು ಟೀಕಿಸಿದ್ದಾರೆ.

ಗುತ್ತಿಗೆದಾರರು ಸರ್ಕಾರದ 40% ಕಮಿಷನ್ ಬಗ್ಗೆ ಪ್ರಧಾನಿಗಳಿಗೆ ಬರೆದ ಪತ್ರಗಳಿಗೆ ಉತ್ತರ ಸಿಕ್ಕಿಲ್ಲ. ಈಗ ಖಾಸಗಿ ಶಾಲೆಗಳ ಆಡಳಿತವೂ ಪ್ರಧಾನಿಗೆ ಪತ್ರ ಬರೆದಿದೆಯಂತೆ. ಮುಖ್ಯಮಂತ್ರಿ ಈ ಎಲ್ಲ ಪತ್ರಗಳ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನಿಗಾವಣೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ಒತ್ತಾಯಿಸುತ್ತೇನೆ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಹೆಚ್​ ಡಿ ರೇವಣ್ಣ ನನ್ನ ವಿರುದ್ಧ ಗೆದ್ದು ತೋರಿಸಲಿ.. ಶಾಸಕ ಪ್ರೀತಮ್ ಗೌಡ ಸವಾಲು

Last Updated : Sep 4, 2022, 9:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.