ETV Bharat / state

ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ

author img

By

Published : May 13, 2021, 11:12 AM IST

ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತಪತ್ರ ಹೊರಡಿಸುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

former-cm-siddaramaiah-wrote-letter-to-cm-b-s-yeddyarappa
ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿರುವ ಅವರು, ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ನಾವು ರಾಜ್ಯದ ಜನರಿಗೆ ಸೂಕ್ತ ಪ್ಯಾಕೇಜ್ ನೀಡಿ ಎಂದರೆ, ಬಿಜೆಪಿಯಲ್ಲಿ ಕೆಲವರು ಸಿದ್ದರಾಮಯ್ಯನವರು ಸಾಲ ಮಾಡಿದ್ದರು. ಅದರಿಂದಾಗಿ ರಾಜ್ಯದಲ್ಲಿ ಹಣಕಾಸಿನ ಸಮಸ್ಯೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂಬುದರ ಕುರಿತು ನಾಡಿನ ಜನರಿಗೆ ಈಗ ಯಾವ ಸಂಶಯವೂ ಉಳಿದಿಲ್ಲ.

2008-2013ರವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ ಶೇ. 94.18ರಷ್ಟು ಏರಿಕೆಯಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ 2013-18ರವರೆಗೆ ಶೇ.78ರಷ್ಟು ಮಾತ್ರ ಏರಿಕೆಯಾಗಿತ್ತು. ಹಿಂದಿನಿಂದಲೂ ಪ್ರತಿ ವರ್ಷ 20ರಿಂದ 30 ಸಾವಿರ ಕೋಟಿ ರೂ.ಗಳಷ್ಟು ಸಾಲ ಮಾಡುವುದು ಮತ್ತು ತೀರಿಸುವುದು ವಾಡಿಕೆ. 2012-13ರಲ್ಲೂ 21,609 ಕೋಟಿ ಸಾಲ ಮಾಡಲಾಗಿತ್ತು. 2017-18 ರವರೆಗೆ ರಾಜ್ಯದ ಒಟ್ಟಾರೆ ಸಾಲ 2,42,420 ಕೋಟಿ ಮಾತ್ರ ಇತ್ತು. ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈ ವರ್ಷದ ಕಡೆಗೆ 4,57,899 ಕೋಟಿಗಳಷ್ಟು ಸಾಲವಾಗುತ್ತಿದೆ. ಬಹುಶಃ ಅದು ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. 2020-21ರಲ್ಲಿ 69,000 ಕೋಟಿ ಸಾಲ ಮಾಡಲಾಗಿದೆ. ಅಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 2,14,479 ಕೋಟಿಗಳಷ್ಟು ಹೆಚ್ಚು ಸಾಲವನ್ನು ಮಾಡಲಾಗುತ್ತಿದೆ. ಯಡಿಯೂರಪ್ಪನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಮೇಲೆ ಕೇವಲ ಮೂರು ವರ್ಷಗಳಲ್ಲಿ ಸುಮಾರು 1,90,000 ಕೋಟಿ ರೂ.ಗಳಷ್ಟು ಸಾಲ ಮಾಡಿದ್ದಾರೆ. ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ 72,000 ಕೋಟಿಗೆ ತಲುಪಲಿದೆ ಎಂದಿದ್ದಾರೆ.

ಕಳೆದ ವರ್ಷ 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೊನಾ ನಿರ್ವಹಣೆಗೆ ಖರ್ಚು ಮಾಡಿದ್ದು 5,400 ಕೋಟಿ ರೂ.ಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು? ಜಿಎಸ್​​ಡಿಪಿ [ರಾಜ್ಯದ ನಿವ್ವಳ ಆಂತರಿಕ ಉತ್ಪನ್ನ] ಯಲ್ಲಿ ಶೇಕಡಾವಾರು ಸಾಲದ ಪ್ರಮಾಣ ನಮ್ಮ ಸರ್ಕಾರದ ಅವಧಿಯಲ್ಲಿ 17ರಿಂದ 20ರ ಒಳಗೆ ಇತ್ತು. ಇದು ದೇಶದಲ್ಲಿಯೇ ಅತ್ಯುತ್ತಮ ನಿರ್ವಹಣೆಯಾಗಿತ್ತು. ಆದರೆ ಈಗ ಅದು 26.9ರಷ್ಟಾಗಿದೆ. ನಿಯಮಗಳ ಪ್ರಕಾರ ಇದು ಶೆ. 25ನ್ನು ಮೀರುವಂತಿಲ್ಲ. ಸಾಲ ಮಾಡುವುದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿಯಮಗಳನ್ನೇ ತಿದ್ದುಪಡಿ ಮಾಡಿಕೊಂಡಿವೆ ಎಂದು ಹೇಳಿದ್ದಾರೆ.

ನಿವ್ವಳ ಆಂತರಿಕ ಉತ್ಪನ್ನ ಏರಿಕೆ:

2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ನಿವ್ವಳ ಆಂತರಿಕ ಉತ್ಪನ್ನ [ ಜಿ.ಎಸ್.ಡಿ.ಪಿ] ಕೇವಲ 6,01,582 ಕೋಟಿ ಇತ್ತು. ಆದರೆ ನಾನು ಅಧಿಕಾರದಿಂದ ಇಳಿದಾಗ ಅದು 14,08,585 ಕೋಟಿಗಳಿಗೆ ಏರಿಕೆಯಾಯಿತು. ಈ ಜಿಎಸ್​ಡಿಪಿ ಎಷ್ಟು ಎಂದು ಹೇಳುವುದು ನಾವಲ್ಲ, ಕೇಂದ್ರ ಸರ್ಕಾರ. ಮೋದಿಯವರ ಸರ್ಕಾರವೇ ನಮ್ಮ ಜಿಎಸ್​​ಡಿಪಿಯನ್ನು ಶ್ಲಾಘಿಸಿತ್ತು. ನಮ್ಮ 5 ವರ್ಷದ ಅವಧಿಯಲ್ಲಿ ಜಿಎಸ್​ಡಿಪಿಯ ಪ್ರಮಾಣ 8,07,003ರಷ್ಟು ಹೆಚ್ಚಾಯಿತು. ಆದರೆ 2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ ಹೆಚ್ಚಾದ ಜಿಎಸ್​ಡಿಪಿಯ ಪ್ರಮಾಣ ಕೇವಲ 2,93,642 ಕೋಟಿ ರೂ. ಮೌಲ್ಯ ಮಾತ್ರ ಹೆಚ್ಚಾಗಿದೆ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತಡರಾತ್ರಿ ಆಕ್ಸಿಜನ್ ಪ್ಲಾಂಟ್ ಸೋರಿಕೆ ತಡೆಗಟ್ಟಿ ರೋಗಿಗಳ ಪಾಲಿಗೆ ದೇವರಾದ ಸೋನು ಸೂದ್ ಟ್ರಸ್ಟ್

ಕೇಂದ್ರವು ನಮ್ಮ ರಾಜ್ಯದಿಂದ ಪ್ರತಿ ವರ್ಷ 2,50,000 ಕೋಟಿಗೂ ಹೆಚ್ಚಿನ ಸಂಪತ್ತನ್ನು ಸಂಗ್ರಹಿಸುತ್ತದೆ. ಪ್ರತಿ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಎರಡರಿಂದಲೇ 30,000 ಕೋಟಿಗೂ ಹೆಚ್ಚಿನ ಹಣವನ್ನು ರಾಜ್ಯದ ಜನರನ್ನು ಶೋಷಣೆ ಮಾಡಿ ದೋಚುತ್ತಿದೆ. ಆದರೆ ಈ ವರ್ಷ ನಮಗೆ ಕೊಟ್ಟಿರುವುದು ಕೇವಲ 50,000 ಕೋಟಿ ಮಾತ್ರ. ನಿಯಮ ಪ್ರಕಾರ ಬರಬೇಕಾಗಿದ್ದುದು ಸುಮಾರು 1,00,000 ಕೋಟಿಗಳು. ನಮಗೆ ನೀಡಬೇಕಾದ ಹಣವನ್ನು ಕೇಂದ್ರ ಸರ್ಕಾರ ನೀಡದೆ ವಂಚಿಸಿರುವುದರಿಂದಲೇ ರಾಜ್ಯ ಭೀಕರ ಸಂಕಷ್ಟಕ್ಕೆ ಸಿಲುಕಿಕೊಳ್ಳಲು ಕಾರಣವಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಭೀಕರ ಭ್ರಷ್ಟಾಚಾರದಲ್ಲಿ ತೊಡಗಿದೆ. ಅನೇಕ ಯೋಜನೆಗಳ ಅನುಷ್ಠಾನದಲ್ಲಿ ಕಮಿಷನ್ ಪ್ರಮಾಣ ಶೇ.30ನ್ನೂ ಮೀರಿದೆ. ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ನಿಜವಾಗಿ ವೆಚ್ಚವಾಗುತ್ತಿರುವುದು ಕೇವಲ ಶೇ. 45-50 ಮಾತ್ರ. ಜೊತೆಗೆ ರಾಜ್ಯದ ಸ್ವತ್ತಾದ ಭೂಮಿಯನ್ನು, ಖನಿಜ ಸಂಪತ್ತನ್ನು ಬಿಡಿಗಾಸಿಗೆ ಕಂಪನಿಗಳಿಗೆ ನೀಡಲಾಗುತ್ತಿದೆ. ಹೀಗಿರುವಾಗ ಸರ್ಕಾರಕ್ಕೆ ಆದಾಯ ಖೋತಾ ಆಗದೆ ಇನ್ನೇನಾಗುತ್ತದೆ. ರಾಜ್ಯದ ವಿದ್ಯುತ್ ಖರೀದಿಯನ್ನು ವೈಜ್ಞಾನಿಕವಾಗಿ ಮಾಡಿದರೆ ವರ್ಷಕ್ಕೆ ಕನಿಷ್ಠ 7-8 ಸಾವಿರ ಕೋಟಿ ಉಳಿಸಬಹುದು. ಸರ್ಕಾರ ಅದನ್ನೂ ಮಾಡುತ್ತಿಲ್ಲ ಎಂದು ದೂರಿದ್ದಾರೆ.

ಹಣಕಾಸು ಸ್ಥಿತಿ:

ಇಷ್ಟರ ನಡುವೆಯೂ ಮುಖ್ಯಮಂತ್ರಿಗಳು ಮಾ.24ರಂದು ಬಜೆಟ್ ಕುರಿತಂತೆ ನಡೆದಿದ್ದ ಚರ್ಚೆಗೆ ಉತ್ತರ ನೀಡುವಾಗ, ನಮ್ಮ ಅಕ್ಕಪಕ್ಕದ ರಾಜ್ಯಗಳ ರೆವಿನ್ಯೂ ಕೊರತೆಗೆ ಹೋಲಿಸಿದರೆ ರಾಜ್ಯದ ಹಣಕಾಸಿನ ಸ್ಥಿತಿ ಬಹಳ ಉತ್ತಮವಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ ರಾಜ್ಯದ ರೆವಿನ್ಯೂ ಪರಿಸ್ಥಿತಿ 2020-21ರ ಬಜೆಟ್​​ನಲ್ಲಿ 143 ಕೋಟಿಯಷ್ಟು ಹೆಚ್ಚಿತ್ತು. ಆದರೆ, ತಮಿಳುನಾಡಿನಲ್ಲಿ 21,618 ಕೋಟಿ ರೂ.ಗಳಷ್ಟು ಕೊರತೆ ಇತ್ತು. ಕೇರಳದಲ್ಲಿ 15,201 ಕೋಟಿಗಳಷ್ಟು ಕೊರತೆ ಇತ್ತು. 2021-22ರಲ್ಲಿ ಕರ್ನಾಟಕದ ರೆವಿನ್ಯೂ 15,134 ಕೋಟಿ ಕೊರತೆಯಾಗುತ್ತದೆ. ಬಜೆಟ್ ಆದರೆ ತಮಿಳುನಾಡಿನಲ್ಲಿ 41,417 ಕೋಟಿ ರೂ.ಗಳಷ್ಟು ಕೊರತೆಯಾಗುತ್ತದೆ. ಕೇರಳದಲ್ಲಿ 16,910 ಕೋಟಿ ಕೊರತೆಯಾಗುತ್ತದೆ. ಮಹಾರಾಷ್ಟ್ರದಲ್ಲಿ 10,226 ಕೋಟಿ ಕೊರತೆಯಾಗುತ್ತದೆ ಎಂದು ಹೇಳಿದ್ದರು. ಸಾಲದ ವಿಚಾರಕ್ಕೆ ಬಂದರೂ 2021-22ರಲ್ಲಿ ಕರ್ನಾಟಕದ ಸಾಲ 4,57,899 ಕೋಟಿ ರೂ.ಗಳಾಗುತ್ತದೆ, ತಮಿಳುನಾಡಿನದು 5,70,189 ಕೋಟಿಯಾಗುತ್ತದೆ. ಕೇರಳದ್ದು 3,25,647 ಕೋಟಿಯಾಗುತ್ತದೆ. ಮಹಾರಾಷ್ಟ್ರದ್ದು 6,35,794 ಕೋಟಿಯಾಗುತ್ತದೆ ಎಂದು ಹೇಳಿದ್ದರು. ಅಂದರೆ ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಈಗ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಯಾವುದೇ ಆರ್ಥಿಕ ಪ್ಯಾಕೇಜು ನೀಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜ್ಯದ ಜನ ಏನು ಮಾಡಬೇಕು? ಏನು ತಿನ್ನಬೇಕು? ಎಂದು ಪ್ರಶ್ನಿಸಿದ್ದಾರೆ.

ನಾವು ಪದೇ ಪದೇ ಹೇಳುತ್ತಿದ್ದೇವೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ಜನರೂ ನೆಮ್ಮದಿಯಾಗಿರುತ್ತಾರೆ. ಆರ್ಥಿಕತೆಯೂ ಉತ್ತಮ ಸ್ಥಿತಿಗೆ ಬರುತ್ತದೆ ಎಂದು. ಜಗತ್ತಿನ ಅನೇಕ ದೇಶಗಳು ತಮ್ಮ ಆರ್ಥಿಕತೆಯನ್ನು ಕಾಪಾಡಿಕೊಂಡಿರುವುದೇ ಹೀಗೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಶುಭಾ ಪೂಂಜಾ ಮದುವೆ ಯಾವಾಗ ಗೊತ್ತೇ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.