ETV Bharat / state

'ನನ್ನ ವಿರುದ್ಧದ ದೂರು ಆಧಾರರಹಿತ ಎಂದು ಲೋಕಾಯುಕ್ತದವರೇ ರದ್ದು ಮಾಡಿದ್ದಾರೆ' - ಈಟಿವಿ ಭಾರತ ಕನ್ನಡ

ಬಜೆಟ್ ವಿಚಾರವಾಗಿ​ ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಕ್ಸಮರ ನಡೆಸಿದರು.

former-cm-siddaramaih-slams-state-govt-and-state-budget
ಇದು ಅಮೃತ ಕಾಲದ ಬಜೆಟ್ ಅಲ್ಲ, ಇದು ತೆರಿಗೆ ಸುಲಿಗೆಯ ಕತ್ತಲ ಕಾಲದ ಬಜೆಟ್ : ಸಿದ್ದರಾಮಯ್ಯ ವಾಗ್ದಾಳಿ
author img

By

Published : Feb 21, 2023, 5:20 PM IST

ಬೆಂಗಳೂರು : ಎಸಿಬಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದ ಒಟ್ಟು 16 ರಾಜ್ಯಗಳಲ್ಲಿದೆ. ಎಸಿಬಿ ರಚಿಸಿ ಲೋಕಾಯುಕ್ತದ ಅಧಿಕಾರ ಕಸಿಯಲಾಗಿದೆ ಎಂದು ಹೇಳುವುದು ಸರಿಯಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. 2023-24ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡ್ವೊಕೇಟ್ ಜನರಲ್ ಅವರು ಎಸಿಬಿ ರಚನೆ ಮಾಡಿರುವುದು ಸರಿ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ. ಇದಕ್ಕೆ ವಿರುದ್ಧವಾಗಿ ಸರ್ಕಾರ ಯಾಕೆ ಹೇಳಿಕೆ ಕೊಡಬೇಕು? ಕೋರ್ಟ್‌ನಲ್ಲಿ ಒಂದು ಹೊರಗಡೆ ಇನ್ನೊಂದು, ಈ ಭಿನ್ನ ನಿಲುವು ಯಾಕೆ? ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳಿಂದ ರಕ್ಷಣೆ ಪಡೆಯಲು ಉದ್ದೇಶಪೂರ್ವಕವಾಗಿ ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರವನ್ನು ಕಿತ್ತುಕೊಂಡರು ಎಂದು ಜನರಿಗೆ ತಪ್ಪು ಮಾಹಿತಿ ನೀಡುವುದೇಕೆ ಎಂದು ಪ್ರಶ್ನಿಸಿದರು.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಯಾಕೆ ಇನ್ನೂ ಎಸಿಬಿ ರದ್ದು ಮಾಡಿಲ್ಲ?, ನನ್ನ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ್ದ ಅನೇಕ ದೂರುಗಳು ಆಧಾರರಹಿತವಾದವು ಎಂದು ಲೋಕಾಯುಕ್ತದವರೇ ರದ್ದು ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಅನೇಕ ಆರೋಪಗಳು ಬಂದ ಹೊರತಾಗಿಯೂ ಸರ್ಕಾರ ಯಾವುದೇ ತನಿಖೆ ಮಾಡಿಸಲಿಲ್ಲ. ಸರ್ಕಾರ ಈಗಲಾದರೂ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಒಂದು ತನಿಖಾ ಸಮಿತಿ ರಚನೆ ಮಾಡಿ ನಮ್ಮ ವಿರುದ್ಧ ಮತ್ತು ಈಗಿನ ಸರ್ಕಾರದ ವಿರುದ್ಧ ಇರುವ ಎಲ್ಲಾ ಆರೋಪಗಳನ್ನು ತನಿಖೆ ಮಾಡಿಸಲಿ. ಸುಮ್ಮನೆ ಆರೋಪ ಮಾಡುವುದರಿಂದ ಸತ್ಯ ಹೊರಬರುವುದಿಲ್ಲ ಎಂದು ಹೇಳಿದರು.

ಹಣಕಾಸಿನ ಪರಿಸ್ಥಿತಿ ಬಹಳ ಸದೃಢವಾಗಿದೆ ಎಂದು ಬಜೆಟ್‌ನಲ್ಲಿ ಹೇಳಿದ್ದಾರೆ. ಆದರೆ ಇನ್ನೊಂದು ಕಡೆ ಆರ್ಥಿಕ ಇಲಾಖೆಯವರು, ನಾವು ಈಗಾಗಲೇ ವಿತ್ತೀಯ ಕೊರತೆ ಎದುರಿಸುತ್ತಿದ್ದೇವೆ. ಆ ಕಾರಣದಿಂದ ಗ್ರಾಂಟ್ ಇನ್ ಏಡ್‌ಗೆ ಸೇರಿಸೋಕೆ ಆಗಲ್ಲ. ಹಣಕಾಸಿನ ಪರಿಸ್ಥಿತಿ ಬಹಳ ಕೆಟ್ಟು ಹೋಗಿದೆ ಎಂದು ಫೈಲ್ ಮೇಲೆ ಬರೆದಿದ್ದಾರೆ. ಕೊರೊನಾ, ಪ್ರವಾಹ ಬಂದ ಕಾರಣಕ್ಕೆ ನಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಿದೆ ಎಂದು ಕಾರಣ ಕೊಟ್ಟಿದ್ದಾರೆ. ಇಡೀ ಕೊರೊನಾ ನಿರ್ವಹಣೆಗೆ ಖರ್ಚು ಮಾಡಿರುವುದು 15 ರಿಂದ 16 ಸಾವಿರ ಕೋಟಿ ರೂ., ಪ್ರವಾಹಕ್ಕೆ ಖರ್ಚು ಮಾಡಿರುವುದು 6000 ಕೋಟಿ. ಪ್ರವಾಹದಿಂದ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸುಮಾರು 3 ಲಕ್ಷ ಮನೆಗಳು ಹಾನಿಗೊಳಗಾಗಿತ್ತು. ಇದಕ್ಕೆ ಒಂದು ಕಂತು ಪರಿಹಾರ ಕೊಟ್ಟರು. ನಂತರದ ಕಂತು ಕೊಟ್ಟೇ ಇಲ್ಲ. 2022ರಲ್ಲಿ ಪ್ರವಾಹ ಬಂದಾಗ 1944 ಕೋಟಿ ಪರಿಹಾರ ಕೇಳಿ ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟಿದ್ದಾರೆ. ಇವತ್ತಿನವರೆಗೆ ಒಂದು ರೂಪಾಯಿ ಪರಿಹಾರ ಬಂದಿಲ್ಲ. ಈ ಸರ್ಕಾರವನ್ನು ಅತ್ಯಂತ ದುರ್ಬಲ ಸರ್ಕಾರ ಎನ್ನದೆ ಏನನ್ನಬೇಕು? ಎಂದು ವಾಗ್ದಾಳಿ ನಡೆಸಿದರು.

15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ರೂ. ವಿಶೇಷ ಅನುದಾನ ಶಿಫಾರಸು ಮಾಡಲಾಗಿತ್ತು. ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕಾರ ಮಾಡಿದರು. ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಈ ಬಗ್ಗೆ ಒಂದು ದಿನ ಮಾತನಾಡಿಲ್ಲ, ಒತ್ತಡ ಹಾಕಿಲ್ಲ. ಸದನದಲ್ಲಿ ಮೋದಿ ಮೋದಿ ಎಂದು ಕೂಗುವುದು, ಮೇಜು ತಟ್ಟುವುದು ಮಾತ್ರ ಅವರು ಮಾಡುತ್ತಿರುವ ಕೆಲಸ. ನಾನು ಮುಖ್ಯಮಂತ್ರಿಯಾಗಿ ಮಂಡಿಸಿರುವ 6 ಬಜೆಟ್ ಗಳು ಪಾರದರ್ಶಕತೆ ಮತ್ತು ಉತ್ತರದಾಯಿತ್ವದಿಂದ ಕೂಡಿತ್ತು. ನಮ್ಮ ಸರ್ಕಾರದ ಕೊನೆಯ ಬಜೆಟ್ ನಲ್ಲಿ ನಾವು 5 ವರ್ಷಗಳಲ್ಲಿ ಏನು ಕೆಲಸ ಮಾಡಿದ್ದೇವೆ, ಯಾವೆಲ್ಲ ಭರವಸೆ ನೀಡಿದ್ದೆವು, ಎಷ್ಟು ಈಡೇರಿಸಿದ್ದೇವೆ, ಮುಂದೆ ಅಧಿಕಾರಕ್ಕೆ ಬಂದರೆ ಏನೆಲ್ಲ ಮಾಡುತ್ತೇವೆ ಎಂದು ಹೇಳಿದ್ದೆ ಎಂದರು.

ಈ ಬಜೆಟ್‌ನಲ್ಲಿ ಪಾರದರ್ಶಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿರುವಾಗ ಅನ್ನಭಾಗ್ಯ ಯೋಜನೆಯಡಿ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ. ಈ ಸರಕಾರ ಅದನ್ನು 5 ಕೆ.ಜಿ ಗೆ ಇಳಿಸಿತು. ಯಾಕೆ ಎಂದು ಪ್ರಶ್ನೆ ಮಾಡಿದರೆ ದುಡ್ಡಿಲ್ಲ ಎಂದರು. ಈ ಅನ್ನಭಾಗ್ಯ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದರೆ ಗುಜರಾತ್, ಮಧ್ಯಪ್ರದೇಶ, ಅಸ್ಸಾಂನಲ್ಲಿ ಯಾಕಿಲ್ಲ? 3 ರೂ. ಗೆ ಅಕ್ಕಿ ನೀಡುವಂತೆ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿದ್ದು ಮನಮೋಹನ್ ಸಿಂಗ್ ಅವರ ಸರ್ಕಾರ. ಮೋದಿ ಅಥವಾ ವಾಜಪೇಯಿ ಅವರಲ್ಲ ಎಂದು ಟೀಕಿಸಿದರು.

ತೆರಿಗೆ ಸುಲಿಗೆಯ ಬಜೆಟ್: ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 15 ಲಕ್ಷದ 54 ಸಾವಿರ ಮನೆಗಳನ್ನು ನಿರ್ಮಾಣ ಮಾಡಿ ಅನುದಾನ ನೀಡಿದ್ದೆವು. ನಮ್ಮ ಸರ್ಕಾರದ ಕೊನೆಯ ಬಜೆಟ್ ನಲ್ಲಿ 15 ಲಕ್ಷ ಮನೆಗಳ ಘೋಷಣೆ ಮಾಡಿ, ದುಡ್ಡು ಕೊಟ್ಟಿಲ್ಲ ಎಂದು ಸುಳ್ಳು ಹೇಳುವುದು ಯಾಕೆ? ಈ ಸರ್ಕಾರ 4 ಲಕ್ಷದ 93 ಸಾವಿರ ಮನೆಗಳನ್ನು ಕಟ್ಟಿದ್ದರೆ ಅದು ನಮ್ಮ ಸರ್ಕಾರ ಮಂಜೂರು ಮಾಡಿದ ಮನೆಗಳು. ಈ ಸರ್ಕಾರ ಹೊಸದಾಗಿ ಮನೆಗಳನ್ನು ಮಂಜೂರು ಮಾಡಿಲ್ಲ. ಬೆಂಗಳೂರು ನಗರದಲ್ಲಿ ಒಂದು ಲಕ್ಷ ಮನೆಗಳನ್ನು ಕಟ್ಟಲು ಈ ಸರ್ಕಾರದಿಂದ ಆಗಿಲ್ಲ. ಸುನಿಲ್ ಕುಮಾರ್ ಅವರು ಈ ಬಜೆಟ್ ಅನ್ನು ತೆರಿಗೆ ಸಂಗ್ರಹದ ಅಮೃತ ಕಾಲದ ಬಜೆಟ್ ಎಂದು ಕರೆದಿದ್ದಾರೆ. ನನ್ನ ಪ್ರಕಾರ ಇದು ತೆರಿಗೆ ಸುಲಿಗೆಯ ಕತ್ತಲ ಕಾಲದ ಬಜೆಟ್ ಎಂದು ವಾಗ್ದಾಳಿ ನಡೆಸಿದರು.

ಈ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ಸೆಸ್ ಜಾಸ್ತಿ ಮಾಡಿದೆ. ಅಕ್ಕಿ, ರಾಗಿ, ಗೋಧಿ, ಪೆನ್ನು, ಪೆನ್ಸಿಲ್, ಮಂಡಕ್ಕಿ, ಹಾಲು, ಮೊಸರು, ಹಸುಗಳು ತಿನ್ನುವ ಹಿಂಡಿ, ಬೂಸಾಗಳ ಮೇಲೆ 5 ರಿಂದ 18% ತೆರಿಗೆ ವಿಧಿಸಿದ್ದಾರೆ. 80% ತೆರಿಗೆಯನ್ನು ರಾಜ್ಯದ ಬಡವರು, ಕಾರ್ಮಿಕರು ಕಟ್ಟುತ್ತಿದ್ದಾರೆ.
ಬೆಲೆಯೇರಿಕೆ, ಕೆಟ್ಟ ಕೃಷಿ ನೀತಿಯಿಂದಾಗಿ ರಾಜ್ಯದ ರೈತರನ್ನು ಸಾಲಗಾರನನ್ನಾಗಿ ಮಾಡಿದೆ. ಸ್ವಾತಂತ್ರ್ಯ ಬಂದ ನಂತರದಿಂದ ನಾನು ಅಧಿಕಾರದಿಂದ ಇಳಿಯುವವರೆಗೆ ರಾಜ್ಯದ ಮೇಲಿದ್ದ ಒಟ್ಟು ಸಾಲ 2 ಲಕ್ಷದ 42 ಸಾವಿರ ಕೋಟಿ. ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ಮಾಡಿದ್ದ ಒಟ್ಟು ಸಾಲ 1 ಲಕ್ಷದ 16 ಸಾವಿರ ಕೋಟಿ. ನಾನು ಮುಖ್ಯಮಂತ್ರಿಯಾಗಿರುವಾಗ ಸಿದ್ದರಾಮಯ್ಯ ಸರ್ಕಾರ ಬಹಳ ಸಾಲ ಮಾಡಿದೆ, ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ಹೇಳುತ್ತಿದ್ದರು.

ಈಗ ಬಿಜೆಪಿ ಸರ್ಕಾರ ಮಾಡುತ್ತಿರುವುದು ಏನು? ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು 41,916 ಕೋಟಿ ಸಾಲ ಮಾಡಿದ್ದರು. ಇದನ್ನು ಬಿಟ್ಟರೆ ಉಳಿದ 4 ವರ್ಷಗಳಲ್ಲಿ ಬಿಜೆಪಿ ಮಾಡಿರುವ ಸಾಲ 2 ಲಕ್ಷದ 54 ಸಾವಿರ ಕೋಟಿ. ಮುಂದಿನ ವರ್ಷ 77,750 ಕೋಟಿ ರೂ. ಸಾಲ ಮಾಡುವುದಾಗಿ ಸರ್ಕಾರ ಹೇಳಿದೆ. ಇದು ಸೇರಿ 3 ಲಕ್ಷದ 32 ಸಾವಿರ ಕೋಟಿ ಸಾಲ ಆಗುತ್ತದೆ. 2024ರ ಅಂತ್ಯಕ್ಕೆ 5 ಲಕ್ಷದ 64 ಸಾವಿರ ಕೋಟಿ ರೂ. ಸಾಲ ಆಗುತ್ತದೆ ಎಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಹೇಳಿದ್ದಾರೆ ಎಂದರು.

ಬಡ್ಡಿ ರೂಪದಲ್ಲಿ 34,000 ಕೋಟಿ ಹಾಗೂ ಅಸಲು 22 ಸಾವಿರ ಕೋಟಿ ಕಟ್ಟಬೇಕು ಅಂದರೆ ವರ್ಷಕ್ಕೆ 56 ಸಾವಿರ ಕೋಟಿಯಷ್ಟು ಸಾಲ ಮರುಪಾವತಿ ಮಾಡಬೇಕು. ಇದು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗದ, ಲಾಭದಾಯಕವಲ್ಲದ ಖರ್ಚು. ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ ಎಂದು ವಿವರಿಸಿದರು.

ದೀಪೇಂದ್ರ ಸಿಂಗ್ ಹೂಡ ಎನ್ನುವವರು ಕೇಳಿದ ಪ್ರಶ್ನೆಗೆ ಪಂಕಜ್ ಚೌದರಿ ಎಂಬ ರಾಜ್ಯ ಖಾತೆಯ ಕೇಂದ್ರ ಹಣಕಾಸು ಸಚಿವರು ನೀಡಿದ ಉತ್ತರದಲ್ಲಿ 2018ರಲ್ಲಿ 2 ಲಕ್ಷದ 45 ಸಾವಿರ ಕೋಟಿ ಕರ್ನಾಟಕದ ಮೇಲೆ ಸಾಲ ಇತ್ತು. 2019 ರಲ್ಲಿ 2 ಲಕ್ಷದ 86 ಸಾವಿರ ಕೋಟಿ, 2020ರಲ್ಲಿ 3 ಲಕ್ಷದ 38 ಸಾವಿರ ಕೋಟಿ, 2021ರಲ್ಲಿ 4 ಲಕ್ಷದ 21 ಸಾವಿರ ಕೋಟಿ, 2022ರ ಮಾರ್ಚ್ ನಲ್ಲಿ 4 ಲಕ್ಷದ 73 ಸಾವಿರ ಕೋಟಿ ಸಾಲ ಇತ್ತು, 2023ರ ಮಾರ್ಚ್ ಗೆ 5 ಲಕ್ಷದ 40 ಸಾವಿರ ಕೋಟಿ, 2024ರ ಮಾರ್ಚ್ ಗೆ 6 ಲಕ್ಷದ 18 ಸಾವಿರ ಕೋಟಿ ಒಟ್ಟು ಸಾಲ ಆಗಲಿದೆ ಎಂದು ಹೇಳಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಲೆಕ್ಕದ ವ್ಯತ್ಯಾಸ 53,472 ಕೋಟಿ ರೂ. ಇದೆ. ಹಾಗಾದರೆ ಈ ವ್ಯತ್ಯಾಸ ಸೃಷ್ಟಿ ಮಾಡಿರುವುದು ಯಾರು? ನನ್ನ ಪ್ರಕಾರ ರಾಜ್ಯ ಸರ್ಕಾರ ಸಾಲ ಕಡಿಮೆ ಇದೆ ಎಂದು ತೋರಿಸಲು ಸುಳ್ಳು ಲೆಕ್ಕ ನೀಡಿದಂತಿದೆ ಎಂದು ತಮ್ಮ ಭಾಷಣದುದ್ದಕ್ಕೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: 'ದಮ್ಮು, ತಾಕತ್ತಿದ್ದರೆ ನನ್ನ ಹೊಡೆದು ಹಾಕಿ, ನಿಮ್ಮ ಬೆದರಿಕೆಗೆ ಹೆದರುವುದಿಲ್ಲ': ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.