ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಜ್ವರದಿಂದ ಬಳಲುತ್ತಿದ್ದು, ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ರಾತ್ರಿ ಸಣ್ಣದಾಗಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ಮಾಡಲಾಗಿತ್ತು. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಯಾವುದೇ ತೊಂದರೆ ಇಲ್ಲ. ಶೀಘ್ರ ಅವರು ಮನೆಗೆ ಮರಳಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ಎಸ್ಎಂಕೆ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಡ್ಯಕ್ಕೆ 100 ಜಂಬೋ ಆಕ್ಸಿಜನ್ ಸಿಲಿಂಡರ್ ನೀಡಿಲು ಮುಂದಾದ ಎಸ್.ಎಂ.ಕೃಷ್ಣ