ಬೆಂಗಳೂರು: ಉಡುಪಿ ಜಿಲ್ಲೆಯ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಮರಳು ಕಳ್ಳ ಸಾಗಾಣಿಕೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿ ಬಂದಿದ್ದು, ಇದನ್ನು ಸೂಕ್ತ ತನಿಖೆಗೆ ಒಳಪಡಿಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಈ ಒತ್ತಾಯ ಮಾಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಮರಳು ಕಳ್ಳ ಸಾಗಾಣಿಕೆಯಲ್ಲಿ ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವ ಆರೋಪವಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆನೀಡಬೇಕು. ಸ್ವರ್ಣಾ ನದಿ ಮರಳು ಕಳ್ಳ ಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಕರೆ ಬರುತ್ತಿದ್ದು, ಅವರಿಗೆ ತಕ್ಷಣ ಪೊಲೀಸ್ ಭದ್ರತೆ ಒದಗಿಸಬೇಕು. ಜೀವಭಯ ಒಡ್ಡುತ್ತಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
-
ಸ್ವರ್ಣಾ ನದಿ ಮರಳು ಕಳ್ಳಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಕರೆಬರುತ್ತಿದ್ದು ಅವರಿಗೆ ತಕ್ಷಣ ಪೋಲಿಸ್ ಭದ್ರತೆ ಒದಗಿಸಬೇಕು.
— Siddaramaiah (@siddaramaiah) May 18, 2020 " class="align-text-top noRightClick twitterSection" data="
ಜೀವಭಯ ಒಡ್ಡುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು.@DgpKarnataka
2/2
">ಸ್ವರ್ಣಾ ನದಿ ಮರಳು ಕಳ್ಳಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಕರೆಬರುತ್ತಿದ್ದು ಅವರಿಗೆ ತಕ್ಷಣ ಪೋಲಿಸ್ ಭದ್ರತೆ ಒದಗಿಸಬೇಕು.
— Siddaramaiah (@siddaramaiah) May 18, 2020
ಜೀವಭಯ ಒಡ್ಡುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು.@DgpKarnataka
2/2ಸ್ವರ್ಣಾ ನದಿ ಮರಳು ಕಳ್ಳಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಕರೆಬರುತ್ತಿದ್ದು ಅವರಿಗೆ ತಕ್ಷಣ ಪೋಲಿಸ್ ಭದ್ರತೆ ಒದಗಿಸಬೇಕು.
— Siddaramaiah (@siddaramaiah) May 18, 2020
ಜೀವಭಯ ಒಡ್ಡುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು.@DgpKarnataka
2/2
ಸರಣಿ ಟ್ವೀಟ್ಗಳ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಲೇ ಬಂದಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಈ ವಿಚಾರವನ್ನು ಕೂಡ ಟ್ವೀಟ್ ಮೂಲಕ ತಲುಪಿಸುವ ಪ್ರಯತ್ನ ಮಾಡಿದ್ದಾರೆ.