ETV Bharat / state

ಬಿಎಸ್​​ವೈಗೆ ಹೈಕಮಾಂಡ್ ಬುಲಾವ್: ನಾಳೆ ದೆಹಲಿಗೆ ಯಡಿಯೂರಪ್ಪ, ವಿಪಕ್ಷ ನಾಯಕ ಹೆಸರು ಘೋಷಣೆ ಸಾಧ್ಯತೆ - ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೈಕಮಾಂಡ್ ಬುಲಾವ್ ಹಿನ್ನೆಲೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಅಲ್ಲೇ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ‌ನಾಳೆಯೇ ವಿಪಕ್ಷ ನಾಯಕನ ಹೆಸರು ಘೋಷಣೆಯಾಗಲಿದೆ. ವಿಪ್ ಆಯ್ಕೆಯೂ ಕೂಡ ನಾಳೆಯೇ ಆಗಲಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ತಿಳಿಸಿದ್ದಾರೆ.

former cm yeddyurappa
ಮಾಜಿ ಸಿಎಂ ಯಡಿಯೂರಪ್ಪ
author img

By

Published : Jul 1, 2023, 10:45 PM IST

ಬೆಂಗಳೂರು: ನಾಳೆ ಬಿಜೆಪಿ ಶಾಸಕಾಂಗ ಸಭೆ ಇಲ್ಲ. ಯಡಿಯೂರಪ್ಪ ನಾಳೆ ಬೆಳಗ್ಗೆ ದೆಹಲಿಗೆ ಹೋಗಲಿದ್ದು, ಅಲ್ಲೇ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ವಿಪಕ್ಷ ನಾಯಕ ಹೆಸರು ನಾಳೆ ದೆಹಲಿಯಲ್ಲೇ ಘೋಷಣೆಯಾಗಲಿದೆ. ಆ ಮೂಲಕ ದೆಹಲಿಯಲ್ಲೇ ರಾಜ್ಯ ವಿಧಾನಸಭೆ ವಿಪಕ್ಷ ನಾಯಕರ ಗೊಂದಲಕ್ಕೆ ತೆರೆ ಬೀಳಲಿದೆ.‌

ಹೈಕಮಾಂಡ್ ಬುಲಾವ್ ಹಿನ್ನಲೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಅಲ್ಲೇ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ‌ನಾಳೆಯೇ ವಿಪಕ್ಷ ನಾಯಕನ ಹೆಸರು ಘೋಷಣೆಯಾಗಲಿದೆ. ವಿಪ್ ಆಯ್ಕೆಯೂ ಕೂಡ ನಾಳೆ ಆಗಲಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಧಾನ್ ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕನ ಸಂಬಂಧ ಪಕ್ಷದ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅವರು ಸಂಗ್ರಹಿಸಿರುವ ಅಭಿಪ್ರಾಯವನ್ನು ಬಿಜೆಪಿ ವರಿಷ್ಠರಿಗೆ ಸಲ್ಲಿಸಿದ್ದಾರೆ.

ವಿಪಕ್ಷ ನಾಯಕ ಸ್ಥಾನಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಬಸನಗೌಡ ಯತ್ನಾಳ್, ಆರ್.ಅಶೋಕ್, ಅಶ್ವತ್ಥ್ ನಾರಾಯಣ್, ಸುನೀಲ್ ಕುಮಾರ್, ಸುರೇಶ್ ಕುಮಾರ್ ರೇಸ್ ನಲ್ಲಿದ್ದಾರೆ. ಭಾನುವಾರ ವಿಪಕ್ಷ ನಾಯಕನ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್ ತಿಳಿಸಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ ನಾಳೆ : ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಆಯ್ಕೆಯು ನಾಳೆ ನಡೆಯಲಿದ್ದು, ಸಂಜೆ ವೇಳೆಗೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷನಾಯಕ ಯಾರೆಂದು ನಾಳೆ ಸಂಜೆ ವೇಳೆಗೆ ಗೊತ್ತಾಗಲಿ. ಬಜೆಟ್​ ಅಧಿವೇಶನ ಕುರಿತು ಮಾತನಾಡಿದ ಅವರು, ಚರ್ಚಿಸಲು ಬೇಕಾದಷ್ಟು ವಿಷಯ ಇದೆ. ಗ್ಯಾರಂಟಿ ಗೊಂದಲಗಳ ಬಗ್ಗೆ ಬಜೆಟ್ ವೇಳೆ ಎಲ್ಲ ಚರ್ಚೆ ಆಗುತ್ತದೆ. ಕಾಂಗ್ರೆಸ್​ನವರು ಗ್ಯಾರಂಟಿಗಳನ್ನು ಗೊಂದಲದ ಗೂಡು ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿ ನೋಟಿಸ್​ಗೆ ಕ್ಯಾರೇ ಅನ್ನದ ನಾಯಕರ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಎಲ್ಲವನ್ನೂ ರಾಜ್ಯಾಧ್ಯಕ್ಷರು ನೋಡಿಕೊಳ್ಳುತ್ತಾರೆ. ಕಾಂಗ್ರೆಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೊದಲು 200 ಯೂನಿಟ್ ಅಂದ್ರು, ಬಳಿಕ ವರ್ಷದ ಸರಾಸರಿ ಅಂದ್ರು. ಮುಂದೆ ಏನು ಮಾಡುತ್ತಾರೆ ಎಂದು ನೋಡೋಣ. ಗೊಂದಲ ಸೃಷ್ಟಿ ಮಾಡಿ, ವಿದ್ಯುತ್​ ಶುಲ್ಕ ಹೆಚ್ಚು ಮಾಡಿದ್ದಾರೆ. ಜನರಿಗೆ ವಿದ್ಯುತ್​ ಶಾಕ್​ ನೀಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ತೀವ್ರ ಪೈಪೋಟಿ : ರಾಜ್ಯದ ಬಿಜೆಪಿಯಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದೇ ಪೈಪೋಟಿಯಿಂದ ವಿಪಕ್ಷ ನಾಯಕನ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸಿದೆ. ಮಾಜಿ ಸಿಎಂ ಬೊಮ್ಮಾಯಿ ಹಾಗೂ ಬಸನಗೌಡ ಯತ್ನಾಳ್ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಹೊಂದಾಣಿಕೆ ರಾಜಕಾರಣ ಆರೋಪ ಗಮನದಲ್ಲಿಟ್ಟುಕೊಂಡು ಲಿಂಗಾಯತ - ಒಕ್ಕಲಿಗ ಸಮುದಾಯದ ಲೆಕ್ಕಾಚಾರದೊಂದಿಗೆ ಹೈ ಕಮಾಂಡ್ ವಿಪಕ್ಷ ನಾಯಕನ ಆಯ್ಕೆ ಕಸರತ್ತು ನಡೆಸುತ್ತಿದೆ.

ಇದನ್ನೂಓದಿ: ಕಾಂಗ್ರೆಸ್​ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.