ETV Bharat / state

ಆಪರೇಷನ್​ ಹಸ್ತದ ಯಾವ ನಾಟಕವೂ ವರ್ಕೌಟ್ ಆಗಲ್ಲ: ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಲೇವಡಿ

ಆಪರೇಷನ್​ ಹಸ್ತದ ಯಾವ ನಾಟಕವೂ ವರ್ಕೌಟ್ ಆಗಲ್ಲ. ರಾಜಕೀಯ ತಂತ್ರಗಳು ನಡೆಯಲ್ಲ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್​ ಅಶ್ವತ್ಥನಾರಾಯಣ ಟೀಕಿಸಿದರು.

Former DCM Dr Ashwatthanarayan
ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ
author img

By

Published : Aug 19, 2023, 3:57 PM IST

ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಮಾತನಾಡುತ್ತಿರುವುದು

ಬೆಂಗಳೂರು: ಆಪರೇಷನ್​ ಹಸ್ತ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್​ ಅಶ್ವತ್ಥನಾರಾಯಣ, ಕಾಂಗ್ರೆಸ್​ನವರಿಗೆ ಅವರ ಪಕ್ಷದವರನ್ನೇ ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಮಲ್ಲೇಶ್ವರದ ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಡೆದ ಬೈಠಕ್ ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನೇಕ ಸಚಿವರು, ಶಾಸಕರು ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ. ಮೂರು ತಿಂಗಳಲ್ಲೇ ಅವರ ಸರ್ಕಾರದಲ್ಲಿ ಹಲವು ಸಮಸ್ಯೆಗಳಿವೆ. ಇಂತಹವರೇ ಆಪರೇಷನ್​ ಹಸ್ತದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಅಲ್ಲದೇ, ಇವರ ಯಾವ ನಾಟಕವೂ ಇನ್ನು ವರ್ಕೌಟ್​ ಆಗಲ್ಲ. ಇವರ ರಾಜಕೀಯ ತಂತ್ರಗಳು ನಡೆಯಲ್ಲ. ನನಗೆ ಗೊತ್ತಿರುವ ಪ್ರಕಾರ ಬಿಜೆಪಿಯಿಂದ ಯಾರೂ ಕಾಂಗ್ರೆಸ್​ಗೆ ಹೋಗುವುದಿಲ್ಲ. ಕಾಂಗ್ರೆಸ್​ ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ. ಕಾಂಗ್ರೆಸ್​ ಮುಳುಗುತ್ತಿರುವ ಪಕ್ಷ, ಅಲ್ಲಿಗೆ ಯಾರೂ ಹೋಗಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: D K Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ನಿಲ್ಲಿಸಲು ಸಾಧ್ಯವಿದೆಯೇ?- ಡಿ.ಕೆ.ಶಿವಕುಮಾರ್

ಕಾಂಗ್ರೆಸ್​ ಮತ್ತು ಸರ್ಕಾರ ವಿಷಯಾಂತರ ಮಾಡಲು ಪ್ರಯತ್ನಿಸುತ್ತಿದೆ. ಯಾರೂ ನಮ್ಮ ಪಕ್ಷ ಬಿಟ್ಟು ಹೋಗಲ್ಲ. 135 ಜನ ಗೆದ್ದಿರುವವರನ್ನೇ ಅವರಿಗೆ ನೋಡಿಕೊಳ್ಳಲು ಆಗುತ್ತಿಲ್ಲ. ಅವರ ಪಕ್ಷದಲ್ಲಿರುವವರನ್ನೇ ಸಮರ್ಥನೆ ಮಾಡಿಕೊಳ್ಳಲು ಅವರಿಂದ ಸಾಧ್ಯವಾಗುತ್ತಿಲ್ಲ. ಇಂತಹವರು ಆಪರೇಷನ್​ ಹಸ್ತ ಮಾಡುತ್ತಾರಾ? ಕಾಂಗ್ರೆಸ್​ ಸರ್ಕಾರವನ್ನು ಜನ ಕ್ಷಮಿಸುವುದಿಲ್ಲ. ಅವರ ಪ್ರಯತ್ನಗಳು ಯಶಸ್ವಿಯಾಗಲ್ಲ. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನೂ ಬಿಜೆಪಿ ಗೆಲ್ಲುತ್ತದೆ. ಕಾಂಗ್ರೆಸ್ಸಿಗರ ಸರ್ಕಸ್​, ಡೊಂಬರಾಟ ಯಾವುದೂ ವರ್ಕ್​ ಆಗಲ್ಲ ಎಂದು ತಿರುಗೇಟು ನೀಡಿದರು.

ವೀರಪ್ಪ ಮೊಯ್ಲಿ ಹೇಳಿದ್ದೇನು?: ಇದಕ್ಕೂ ಮೊದಲು ಮಾಧ್ಯಮದೊಂದಿಗೆ ಆಪರೇಷನ್​ ಹಸ್ತ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಬಹುದೇ ಹೊರತು, ಅವಕಾಶವಾದಿಗಳಾಗಿ ಸೇರ್ಪಡೆಗೆ ಮುಂದಾದರೆ ಅಂಥವರಿಗೆ ಯಾವುದೇ ಅವಕಾಶ ದೊರಕುವುದಿಲ್ಲ. ಕಾಂಗ್ರೆಸ್​ ಪಕ್ಷಕ್ಕೂ ಯಾವುದೇ ಶಕ್ತಿ ಬರುವುದಿಲ್ಲ ಎಂದಿದ್ದಾರೆ.

ಡಿಸಿಎಂ ಡಿಕೆಶಿ ಪ್ರತಿಕ್ರಿಯೆ: ಇನ್ನೂ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಮಾತನಾಡಿ, ನಮ್ಮ ಮುಂದಿನ ಗುರಿ ಲೋಕಸಭಾ ಚುನಾವಣೆ. ಯಾವುದೇ ಕಾರಣಕ್ಕೂ ದ್ವೇಷ ಸಾಧಿಸಬೇಡಿ, ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚು ಮಾಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ. ಸ್ಥಳೀಯವಾಗಿ ಒಮ್ಮೊಮ್ಮೆ ಅನುಕೂಲಸಿಂಧು ರಾಜಕಾರಣ ಮಾಡಿಕೊಳ್ಳಬೇಕಾಗುತ್ತದೆ. ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ದೊಡ್ಡ, ದೊಡ್ಡ ನಾಯಕರನ್ನು ಸೇರಿಸಿಕೊಳ್ಳುತ್ತಿಲ್ಲ, ಅನ್ಯಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನಗೆ ಕಾಂಗ್ರೆಸ್​ ನಾಯಕರಿಂದ ಯಾವುದೇ ಆಹ್ವಾನ ಬಂದಿಲ್ಲ: ಬಿ.ವಿ.ನಾಯಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.