ಬೆಂಗಳೂರು : ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
-
ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ.5/5#ಜನರಿಗೆ_ವಿದ್ಯುತ್_ಬರೆ #ಬಡವರ_ಮೇಲೆ_ಬಿಜೆಪಿ_ಬೆಲೆ_ಏರಿಕೆ_ಸಮರ
— H D Kumaraswamy (@hd_kumaraswamy) April 4, 2022 " class="align-text-top noRightClick twitterSection" data="
">ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ.5/5#ಜನರಿಗೆ_ವಿದ್ಯುತ್_ಬರೆ #ಬಡವರ_ಮೇಲೆ_ಬಿಜೆಪಿ_ಬೆಲೆ_ಏರಿಕೆ_ಸಮರ
— H D Kumaraswamy (@hd_kumaraswamy) April 4, 2022ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ.5/5#ಜನರಿಗೆ_ವಿದ್ಯುತ್_ಬರೆ #ಬಡವರ_ಮೇಲೆ_ಬಿಜೆಪಿ_ಬೆಲೆ_ಏರಿಕೆ_ಸಮರ
— H D Kumaraswamy (@hd_kumaraswamy) April 4, 2022
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ. ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು ಎಂದಿದ್ದಾರೆ.
ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರಕಾರದ ಕರ್ತವ್ಯ. ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂದು ಆಗ್ರಹಿಸಿದ್ದಾರೆ.