ಬೆಂಗಳೂರು: ರಾಜ ರಾಜೇಶ್ವರಿ ನಗರದ ಜೆಡಿಎಸ್ ಮಾಜಿ ಕಾರ್ಪೊರೇಟರ್ ರಾಮಚಂದ್ರ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಬೆಳಗ್ಗೆಯಷ್ಟೇ ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಪೊರೇಟರ್, ಮಾಜಿ ಕಾರ್ಪೊರೇಟರ್ ಗಳನ್ನು ಬಿಜೆಪಿಗೆ ಕರೆತಂದಿದ್ದ ಅಭ್ಯರ್ಥಿ ಮುನಿರತ್ನ ಸಂಜೆ ಜೆಡಿಎಸ್ ಮಾಜಿ ಕಾರ್ಪೊರೇಟರ್ ರಾಮಚಂದ್ರರನ್ನು ಬಿಜೆಪಿಯತ್ತ ಸೆಳೆದಿದ್ದಾರೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಬರಮಾಡಿಕೊಂಡರು.
ಚುನಾವಣಾ ಪ್ರಚಾರ ಕಾರ್ಯದ ನಡವೆಯೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರನ್ನು ಬಿಜೆಪಿಗೆ ಸೆಳೆಯುತ್ತಿದ್ದಾರೆ.