ETV Bharat / state

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ನಿಧನ; ಹೆಚ್‌.ಡಿ.ದೇವೇಗೌಡ, ಯಡಿಯೂರಪ್ಪ ಸೇರಿದಂತೆ ಗಣ್ಯರ ಸಂತಾಪ

author img

By ETV Bharat Karnataka Team

Published : Nov 7, 2023, 8:44 AM IST

Updated : Nov 7, 2023, 10:52 AM IST

Former Minister D.B.Chandregowda passed away: ಚಿಕ್ಕಮಗಳೂರು ಜಿಲ್ಲೆಯ ದಾರದಹಳ್ಳಿಯಲ್ಲಿರುವ ಸ್ವಗೃಹದಲ್ಲಿ ಡಿ.ಬಿ.ಚಂದ್ರೇಗೌಡ ಕೊನೆಯುಸಿರೆಳೆದಿದ್ದಾರೆ.

ಮಾಜಿ ಸಚಿವ ಡಿ.ಬಿ ಚಂದ್ರೇಗೌಡ
ಮಾಜಿ ಸಚಿವ ಡಿ.ಬಿ ಚಂದ್ರೇಗೌಡ

ಬೆಂಗಳೂರು: ಮಾಜಿ ಸಚಿವ ಹಾಗು ಮಾಜಿ ವಿಧಾನಸಭೆ ಸ್ಪೀಕರ್​ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ (87) ನಿಧನರಾಗಿದ್ದಾರೆ. ಇಂದು ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಇಹಲೋಹ ತ್ಯಜಿಸಿದರು. ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರೇಗೌಡರು ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದರು. ಬೆಂಗಳೂರಿನಲ್ಲಿ ವಾಸವಿದ್ದ ಅವರನ್ನು ಇತ್ತೀಚೆಗೆ ದಾರದಹಳ್ಳಿಗೆ ಕರೆತರಲಾಗಿತ್ತು ಎಂದು ಕುಟುಂಬ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಪಾರ್ಥಿವ ಶರೀರದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಬಿಜೆಪಿ ನಾಯಕರ ಸಂತಾಪ: ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಶಾಸಕ, ಸಂಸದ, ರಾಜ್ಯಸಭಾ ಸದಸ್ಯ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

  • ಹಿರಿಯ ನಾಯಕ, ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಅವರು ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ…

    — B.S.Yediyurappa (@BSYBJP) November 7, 2023 " class="align-text-top noRightClick twitterSection" data=" ">

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ‌ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು. ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು ಅಗಲಿರುವುದು ಮನೆಯ ಹಿರಿಯರೊಬ್ಬರನ್ನು ಕಳೆದುಕೊಂಡಂತೆ ಆಗುತ್ತಿದೆ. ಚಂದ್ರೇಗೌಡರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಎಕ್ಸ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಸಂತಾಪ ತಿಳಿಸಿದ್ದಾರೆ.

ಮಾಜಿ ಸಚಿವರು, ಮಾಜಿ ಸಂಸದರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಡಿ.ಬಿ.ಚಂದ್ರೇಗೌಡರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಹಾಗೂ ಸಾರ್ವಜನಿಕ ಜೀವನದಲ್ಲಿ ಸಾರ್ಥಕವಾಗಿ ತಮ್ಮನ್ನು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಶ್ರೀಯುತರ ಅಗಲಿಕೆಯಿಂದ ನಮ್ಮ ರಾಜ್ಯವು ಒಬ್ಬ ಹಿರಿಯ‌, ಅನುಭವಿ ಹಾಗೂ ಮುತ್ಸದ್ದಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ‌ ಮತ್ತು ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿ ಬಳಗದವರಿಗೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಜೆಡಿಎಸ್​ ವರಿಷ್ಠರಿಂದ ಸಂತಾಪ: ಡಿ.ಬಿ.ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದು:ಖವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಕರುಣಿಸಲಿ ಎಂದು ಟ್ವೀಟ್ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

  • ಕರ್ನಾಟಕದ ಶ್ರೇಷ್ಠ ಸಂಸದೀಯಪಟುಗಳಲ್ಲಿ ಒಬ್ಬರು, ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಜನತಾ ಪರಿವಾರದ ಕೊಂಡಿ ಆಗಿದ್ದ ಶ್ರೀ ಡಿ.ಬಿ.ಚಂದ್ರೇಗೌಡರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.

    ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು… pic.twitter.com/HsQUiL5KN0

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 7, 2023 " class="align-text-top noRightClick twitterSection" data=" ">

ಕರ್ನಾಟಕದ ಶ್ರೇಷ್ಠ ಸಂಸದೀಯ ಪಟುಗಳಲ್ಲಿ ಒಬ್ಬರು, ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಜನತಾ ಪರಿವಾರದ ಕೊಂಡಿ ಆಗಿದ್ದ ಶ್ರೀ ಡಿ.ಬಿ.ಚಂದ್ರೇಗೌಡರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು ಎಂದು ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಗೌರವದೊಂದಿಗೆ ಡಿ.ಬಿ. ಇನಾಮದಾರ್ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

Last Updated : Nov 7, 2023, 10:52 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.