ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದು ದೃರದೃಷ್ಟಕರ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ರೇವಣ್ಣ, ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಸತತ ನಾಲ್ಕು ದಿನಗಳ ಕಾಲ ಡಿಕೆಶಿ ಉತ್ತರ ನೀಡಿದ್ದಾರೆ. ಆದರು ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ ಕೆಲವು ಬಿಜೆಪಿ ಮಂತ್ರಿಗಳು ಹೇಳ್ತಾ ಇದ್ರು ಡಿಕೆಶಿ ಗುಜರಾತ್ಗೆ ಯಾಕೆ ಹೋಗಬೇಕಿತ್ತು ಎಂದು ಮಾತಾಡುತ್ತಿದ್ದಾರೆ.
ಕರ್ನಾಟಕದ ಎಂಎಲ್ಎಗಳನ್ನು ಬಾಂಬೆಯಲ್ಲಿ ಇಟ್ಟುಕೊಂಡಾಗ ಯಾವುದೂ ಬರಲಿಲ್ಲ. ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯಿಂದ ವಿರೋಧ ಪಕ್ಷಗಳ ಧಮನ ಮಾಡುವ ಕೆಲಸ ನಡೆಯುತ್ತಿದೆ. ಇದು ಒಳ್ಳೆಯದಲ್ಲ, ಮುಂದಿನ ದಿನಗಳಲ್ಲಿ ಇದು ಅವರಿಗೆ ರಿವರ್ಸ್ ಆಗಲಿದೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದರು.